– ಎರಡು ತಾಸು ಬಸ್ ಸಂಚಾರದಲ್ಲಿ ವ್ಯತ್ಯಯ
ಮೈಸೂರು: ಕರ್ನಾಟಕ ಬಂದ್ (Karnataka Bandh) ಹಿನ್ನೆಲೆ ಮೈಸೂರಿನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು (KSRTC Bus) ತಡೆದು ಪ್ರತಿಭಟನೆ ನಡೆಸುತ್ತಿದ್ದ ಕನ್ನಡ ಪರ ಸಂಘಟನೆಗಳ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಬಸ್‌ಗಳಿಗೆ ಅಡ್ಡಲಾಗಿ ಪ್ರತಿಭಟನೆ ನಡೆಸಲಾಗುತ್ತಿತ್ತು. ಕನ್ನಡ ಪರ ಸಂಘಟನೆಗಳ ಪ್ರತಿಭಟನೆಯಿಂದಾಗಿ ಎರಡು ತಾಸು ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಈ ಹಿನ್ನೆಲೆ ಪೊಲೀಸರು ಮೈಸೂರು ಕೇಂದ್ರೀಯ ಬಸ್ ನಿಲ್ದಾಣದ ಮುಂದೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಅಭಿಮಾನಿಗಳೇ ನಮ್ಮನೆ ದೇವ್ರು – ಎರಡು ಕೈ ಜೋಡಿಸಿ ಪಾಟಿದಾರ್ ಕೃತಜ್ಞತೆ
ಮೈಸೂರು (Mysuru) ಗ್ರಾಮಾಂತರ ಬಸ್ ನಿಲ್ದಾಣದ ಎರಡು ಭಾಗಗಳಲ್ಲಿ ಪ್ರತಿಭಟನೆ ಮಾಡುತ್ತಿದ್ದ ಎಲ್ಲಾ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ಬಸ್ ಸಂಚಾರ ವ್ಯವಸ್ಥೆ ಸಹಜ ಸ್ಥಿತಿಗೆ ಮರಳಿದೆ. ಇದನ್ನೂ ಓದಿ: ಕರ್ನಾಟಕ ಬಂದ್ ಎಫೆಕ್ಟ್ – ಸ್ಯಾಟಲೈಟ್, ಮೆಜೆಸ್ಟಿಕ್‌ನಲ್ಲಿ ಪ್ರಯಾಣಿಕರ ಸಂಖ್ಯೆ ಇಳಿಕೆ