– ಅಕ್ರಮ ಹಣ ವರ್ಗಾವಣೆಯಲ್ಲಿ ಉದ್ಯಮಿ ಜೀವಾ ಪಾತ್ರ ಇತ್ತಾ?
ಬೆಂಗಳೂರು: ಭೋವಿ ನಿಗಮದಲ್ಲಿ (Bhovi Corporation Scam) ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. 34 ಕೋಟಿ ಹಣ ಅಕ್ರಮವಾಗಿ ವರ್ಗಾವಣೆ ಆಗಿದ್ದು, ಇದರಲ್ಲಿ ಉದ್ಯಮಿ ಜೀವಾ ಅವರ ಪಾತ್ರ ಇತ್ತ ಎಂಬ ಅನುಮಾನ ಮೂಡಿದೆ.
ಅಕ್ರಮವಾಗಿ ಹಣ ವರ್ಗಾವಣೆಯಲ್ಲಿ ಜೀವಾ ಅವರ ಪಾತ್ರ ಇತ್ತ ಎಂಬ ಅನುಮಾನ ಇದ್ದು, ಇದರ ಬಗ್ಗೆ ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಜೀವಾ ಅವರ ಅನ್ನಿಕಾ ಎಂಟರ್ ಪ್ರೈಸಸ್‌ಗೆ ಕೋಟಿ ಕೋಟಿ ಹಣ ವರ್ಗಾವಣೆ ಆಗಿದೆ. ಇದನ್ನೂ ಓದಿ: ಭೋವಿ ನಿಗಮ ಹಗರಣದ ತನಿಖೆ ಎದುರಿಸಿದ್ದ ಮಹಿಳೆ ಆತ್ಮಹತ್ಯೆ ಕೇಸ್ – ಸಿಸಿಬಿಗೆ ವರ್ಗಾವಣೆ
ಅನ್ನಿಕಾ ಎಂಟರ್ ಪ್ರೈಸಸ್‌ಗೆ 7.16 ಕೋಟಿ ರೂ., ಸೋದರಿ ಹೆಸರಿನಲ್ಲಿರುವ ಹರ್ನಿತಾ ಕ್ರಿಯೇಷನ್ಸ್‌ಗೆ ಒಟ್ಟು 10.9 ಕೋಟಿ ರೂ. ವರ್ಗವಾಗಿದೆ. ಇನ್ನುಳಿದ ಮೂರು ಕಂಪನಿಗಳಲ್ಲಿ ನಿಗಮದ ಮಾಜಿ ಪ್ರಧಾನ ವ್ಯವಸ್ಥಾಪಕ ಬಿ.ಕೆ.ನಾಗರಾಜಪ್ಪರವರ ಆಪ್ತರ ಪಾಲುದಾರಿಕೆ ಇದೆ.
ನಿಗಮದ ಮಾಜಿ ಪ್ರಧಾನ ವ್ಯವಸ್ಥಾಪಕಿ ಲೀಲಾವತಿ ಅವರ ಸೋದರಿ ಮಂಗಳ ರಾಮು ಅವರಿಗೆ ಹಂತ ಹಂತವಾಗಿ ಕಳ್ಳ ಹಾದಿಯಲ್ಲಿ 1.48 ಕೋಟಿ ರೂ. ಹಣ ವರ್ಗವಾಗಿದೆ. ಇಷ್ಟೆಲ್ಲಾ ಹಣ ವರ್ಗಾವಣೆ ಆಗಿರೋದು ಬಯಲಾಗಿದೆ. ಇದನ್ನೂ ಓದಿ: ಭೋವಿ ನಿಗಮದಲ್ಲಿ ಅಕ್ರಮ ಪ್ರಕರಣ – ತನಿಖೆ ಎದುರಿಸಿದ್ದ ಯುವತಿ ನೇಣುಬಿಗಿದುಕೊಂಡು ಆತ್ಮಹತ್ಯೆ