ಬೆಂಗಳೂರು: ಬಹುಕೋಟಿ ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ಎನ್ನಲಾದ ಶ್ರೀಕಿ ಬರೋಬ್ಬರಿ 12 ಕಂಪನಿಗಳನ್ನು ಹ್ಯಾಕಿಂಗ್ ಮಾಡಿದ್ದ ಎಂಬ ಆರೋಪ ಕೇಳಿಬಂದಿದೆ.
Advertisement
ಶ್ರೀಕಿ 12 ಕಂಪನಿಗಳ ವೆಬ್‍ಸೈಟ್ ಹ್ಯಾಕ್ ಮಾಡಿದ್ದಾನೆ. ಆತನ ವಿರುದ್ಧ ಇಂಟರ್ ಪೋಲ್ ಇಂದ ಕ್ರಮಕೈಗೊಳ್ಳಿ ಎಂದು ನಗರ ಪೊಲೀಸ್ ಆಯುಕ್ತರಿಗೆ, ತನಿಖಾಧಿಕಾರಿ ಇನ್ಸ್‌ಪೆಕ್ಟರ್ ಚಂದ್ರಾದರ್ ಪತ್ರದ ಮೂಲಕ ಮನವಿಸಲ್ಲಿಸಿದ್ದಾರೆ. ಶ್ರೀಕಿ, ದೇಶ, ವಿದೇಶದಲ್ಲಿ ಸಾಕಷ್ಟು ಹ್ಯಾಕಿಂಗ್ ಮಾಡಿದ್ದಾನೆ. ದೇಶದಲ್ಲಿ ಮಾತ್ರವಲ್ಲದೇ ವಿದೇಶದಲ್ಲಿ ಕೂಡ ವಂಚನೆಮಾಡಿದ್ದು, ಈ ಬಗ್ಗೆ ತನಿಖಾ ವ್ಯಾಪ್ತಿ ಹೆಚ್ಚಿರೋದರಿಂದ ನಾವು ತನಿಖೆ ಮಾಡಲು ಸಾಧ್ಯವಿಲ್ಲ. ಹೀಗಾಗಿ ಇಂಟರ್ ಪೋಲ್‍ಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಶ್ರೀಕಿ ಜೊತೆ ಪ್ರಿಯಾಂಕ್ ಖರ್ಗೆಗೆ ಸಂಪರ್ಕ, 50 ಸಾವಿರ ಕೋಟಿ ಆಸ್ತಿ – ಕಾರ್ಣಿಕ್ ಆರೋಪ
Advertisement
Advertisement
ಅದಲ್ಲದೆ ಬಿಟ್‍ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ಎನ್ನಲಾದ ಶ್ರೀಕಿ ಜೊತೆ ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆಗೆ ಸಂಪರ್ಕ ಇತ್ತು ಎಂದು ರಾಜ್ಯ ಬಿಜೆಪಿ ಮುಖ್ಯ ವಕ್ತಾರರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಆರೋಪಿಸಿದ್ದಾರೆ. ಪ್ರಿಯಾಂಕ್ ಐಟಿ ಬಿಟಿ ಮಂತ್ರಿ ಆಗಿದ್ದಾಗ ಶ್ರೀಕಿಯನ್ನು ಭೇಟಿ ಮಾಡಿ ಬಿಟ್ ಕಾಯಿನ್ ಹಗರಣದಿಂದ ಕಪ್ಪು ಹಣ ಪಡೆದಿದ್ದಾರೆ ಎಂಬ ಮಾಹಿತಿ ಇದೆ. ಪ್ರಿಯಾಂಕ್ ಖರ್ಗೆ ಬಳಿ 50 ಸಾವಿರ ಕೋಟಿ ಮೌಲ್ಯದ ಆಸ್ತಿ ಇದೆ ಎನ್ನಲಾಗಿದ್ದು, ಅವರು ತಮ್ಮ ಕಪ್ಪು ಹಣವನ್ನು ಬಿಟ್ ಕಾಯಿನ್‍ನಲ್ಲಿ ತೊಡಗಿಸಿದ್ದಾರೆ ಎಂಬ ಆರೋಪ ಇದೆ. ಇದಕ್ಕೆ ಪ್ರಿಯಾಂಕ್ ಖರ್ಗೆ ಉತ್ತರ ನೀಡಬೇಕು ಎಂದು ಗಣೇಶ್ ಕಾರ್ಣಿಕ್ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಶ್ರೀಕಿ ವ್ಯಾಲೆಟ್‌ನಿಂದ ಬಿಟ್ ಕಾಯಿನ್ ನಾಪತ್ತೆಯಾಗಿಲ್ಲ – ಬೆಂಗಳೂರು ಪೊಲೀಸರಿಂದ ಸ್ಪಷ್ಟನೆ
Advertisement