ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಕೊನೆಗೂ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.
Advertisement
ಬಿವೈ ವಿಜಯೇಂದ್ರ ಅವರಿಗೆ ಟಿಕೆಟ್ ನೀಡಲು ಹೈ ಕಮಾಂಡ್ ನಿರಾಕರಿಸುವ ಮೂಲಕ ಮಾಜಿ ಸಿಎಂ ಯಡಿಯೂರಪ್ಪಗೆ ಶಾಕ್ ನೀಡಿದೆ. ಕುಟುಂಬ ರಾಜರಾಕರಣಕ್ಕೆ ಹೈಕಮಾಂಡ್ ಮನ್ನಣೆ ನೀಡಿಲ್ಲ. ಇದನ್ನೂ ಓದಿ: ಹುಬ್ಬಳ್ಳಿ ಅಪಘಾತ ಪ್ರಕರಣ- ಇನ್ನೂ ಐದಾರು ಜನರ ಸ್ಥಿತಿ ಚಿಂತಾಜನಕವಾಗಿದೆ: ಕಿಮ್ಸ್ ನಿರ್ದೇಶಕ
Advertisement
Advertisement
ಲಿಂಗಾಯತ ಕೋಟಾದಲ್ಲಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷರಾಗಿರುವ ಧಾರವಾಡದ ಲಿಂಗರಾಜ್ ಪಾಟೀಲ್, ಮಹಿಳಾ ಹಾಗೂ ಒಕ್ಕಲಿಗ ಕೋಟಾದಲ್ಲಿ ಶಿವಮೊಗ್ಗ ಮೂಲದ ಸಿ. ಮಂಜುಳಾ, ದಲಿತ ಕೋಟಾದಲ್ಲಿ ಎಸ್‍ಸಿ ಘಟಕದ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ ಹಾಗೂ ಒಬಿಸಿ ಕೋಟಾದಲ್ಲಿ ಪಕ್ಷದ ಕಚೇರಿ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದ ಕೇಶವ ಪ್ರಸಾದ್ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಬ್ರ್ಯಾಂಡ್ ಬೆಂಗಳೂರು ಹೆಸರು ಉಳಿಸಿ – ಪ್ರಧಾನಿಗೆ ನಟ ಅನಿರುದ್ಧ್ ಪತ್ರ
Advertisement
ವಿಧಾನ ಪರಿಷತ್‍ಗೆ ಪ್ರವೇಶ ಪಡೆದು ಸಚಿವ ಸಂಪುಟದಲ್ಲಿ ಅವಕಾಶ ಪಡೆಯುತ್ತಾರೆ ಎಂದೇ ಹೇಳಾಗುತ್ತಿದ್ದ ಬಿವೈ ವಿಜಯೇಂದ್ರ ಅವರಿಗೆ ಟಿಕೆಟ್ ನೀಡದೇ ಹೈ ಕಮಾಂಡ್ ನಿರಾಸೆ ಮಾಡಿದೆ. ಈ ಮೂಲಕ ಕುಟುಂಬ ರಾಜಕಾರಣಕ್ಕೆ ಪಕ್ಷ ಮನ್ನಣೆ ಹಾಕುವುದಿಲ್ಲ ಎಂಬ ಸಂದೇಶವನ್ನು ಹೈಕಮಾಂಡ್ ರವಾನಿಸಿದೆ.