ಬೆಂಗಳೂರು: ಸಿದ್ದರಾಮೋತ್ಸವಕ್ಕೆ ಪ್ರತಿಯಾಗಿಯೋ ಏನೋ ಬಿಜೆಪಿ ಸರ್ಕಾರದ ಸಾಧನಾ ಸಮಾವೇಶಕ್ಕೆ `ಜನೋತ್ಸವ’ ಎಂದು ಹೆಸರಿಡಲಾಗಿದೆ. ಈ ಮೂಲಕ ನಮ್ಮಲ್ಲಿ ವ್ಯಕ್ತಿ ಪೂಜೆ ಇಲ್ಲ, ಏನಿದ್ದರೂ ಜನರ ಪೂಜೆ ಎಂಬ ಸಂದೇಶವನ್ನು ಕೇಸರಿ ಪಡೆ ಕೊಟ್ಟಂತೆ ಕಾಣುತ್ತಿದೆ.
ದೊಡ್ಡಬಳ್ಳಾಪುರದಲ್ಲಿ ಬೃಹತ್ ಜನೋತ್ಸವ ಸಮಾವೇಶಕ್ಕೆ ಸಕಲ ಸಿದ್ಧತೆಗಳು ನಡೆದಿವೆ. ಜುಲೈ 29 ಮತ್ತು 30ರಂದು ಎಲ್ಲಾ ಜಿಲ್ಲೆಗಳಲ್ಲಿ ಜನೋತ್ಸವ ಸಮಾವೇಶ ಆಯೋಜಿಸಲು ಬಿಜೆಪಿ ತೀರ್ಮಾನಿಸಿದೆ. ಜನೋತ್ಸವದ ಕಾರ್ಯಕ್ರಮದ ಲೋಗೋ ಬಿಡುಗಡೆ ಮಾಡಿದ್ದು, 3 ಮತ್ತು 1 ಸಂಖ್ಯೆಯನ್ನು ಲೋಗೋದಲ್ಲಿ ಬಳಸಿಕೊಂಡಿದೆ. ಇದನ್ನೂ ಓದಿ: ನೂತನ ಸಂಸತ್ ಭವನದಲ್ಲಿ ಅನುಭವ ಮಂಟಪ ಕಲಾಕೃತಿ ಸ್ಥಾಪನೆ ಕರ್ನಾಟಕದ ಹೆಮ್ಮೆ: ಪ್ರಹ್ಲಾದ್ ಜೋಶಿ
Advertisement
Advertisement
3 ಸಂಖ್ಯೆಯ ಅರ್ಥ ಬಿಜೆಪಿ ಸರ್ಕಾರಕ್ಕೆ 3 ವರ್ಷವಾದರೆ, 1 ಎಂದರೆ ಬೊಮ್ಮಾಯಿ ಸರ್ಕಾರಕ್ಕೆ 1 ವರ್ಷ ಎಂಬ ಅರ್ಥ ಇದೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಟ್ರಯಲ್ ಬ್ಲಾಸ್ಟ್ ನಡೆಸಲು ಮುಂದಾಗಿರುವ ಬೇಬಿಬೆಟ್ಟದ ಆ ಜಾಗ ಮೈಸೂರು ಅರಮನೆಗೆ ಸೇರಿದ್ದು: ಯದುವೀರ್
Advertisement
ಬಿಜೆಪಿಯ ಜನೋತ್ಸಕ್ಕೆ ಕಾಂಗ್ರೆಸ್ ನಾಯಕರು ಟೀಕೆ ವ್ಯಕ್ತಪಡಿಸಿದ್ದಾರೆ. ಇದು ಜನೋತ್ಸವ ಅಲ್ಲ, ಭ್ರಷ್ಟೋತ್ಸವ ಎಂದು ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ. ಬೊಮ್ಮಾಯಿ ಸರ್ಕಾರದ ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಿ, ಎಲ್ಲಾ ವಿಚಾರಗಳಲ್ಲಿ ಸರ್ಕಾರ ವಿಫಲವಾಗಿದೆ. ಭ್ರಷ್ಟಾಚಾರವೇ ಈ ಸರ್ಕಾರದ ಸಾಧನೆ ಎಂದು ಕಾಂಗ್ರೆಸ್ ಬಿಂಬಿಸಿದೆ. ಬನ್ನಿ, ನನ್ನ ಸಾಧನೆ ಸಮಾರಂಭದಲ್ಲಿ ಪಾಲ್ಗೊಳ್ಳಿ ಎಂದು ಸಿಎಂ ಬೊಮ್ಮಾಯಿ ಆಹ್ವಾನ ನೀಡಿರುವಂತೆ ಕಾರ್ಡ್ನಲ್ಲಿ ವ್ಯಂಗ್ಯ ಮಾಡಲಾಗಿದೆ.