ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ: ಪಟ್ಟು ಬಿಡದ ಈಶ್ವರಪ್ಪ

Public TV
2 Min Read
eshwarappa

– ಯಡಿಯೂರಪ್ಪ, ವಿಜಯೇಂದ್ರ ತಾಯಿಯಂತಿರುವ ಪಕ್ಷದ ಕುತ್ತಿಗೆ ಹಿಸುಕುತ್ತಿದ್ದಾರೆ
– ಯತ್ನಾಳ್, ಸಿ.ಟಿ.ರವಿಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಬಹುದಿತ್ತು

ಶಿವಮೊಗ್ಗ: ಚುನಾವಣೆಗೆ ಸ್ಪರ್ಧೆ ಮಾಡಿಯೇ ಮಾಡ್ತೀನಿ. ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಮಾಜಿ ಡಿಸಿಎಂ ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ. ಮಗನಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ಬಂಡಾಯ ಎದ್ದಿರುವ ಈಶ್ವರಪ್ಪ (K.S.Eshwarappa) ಮನವೊಲಿಕೆ ಪ್ರಯತ್ನ ವಿಫಲವಾದಂತಿದೆ.

ಶಿವಮೊಗ್ಗದಲ್ಲಿ (Shivamogga) ಮಾತನಾಡಿದ ಈಶ್ವರಪ್ಪ, ಮೊನ್ನೆ ಶಿವಮೊಗ್ಗದ ಕಾರ್ಯಕರ್ತರು ಹಿತೈಷಿಗಳು ಸಭೆ ಮಾಡಿ ಅಭಿಪ್ರಾಯ ಹೇಳಿದ್ದಾರೆ. ಅಷ್ಟು ಜನ ಸೇರುತ್ತಾರೆ ಅಂತಾ ನಾನು ಅಂದುಕೊಂಡಿರಲಿಲ್ಲ. ನಾನು ಈಗಾಗಲೇ ಘೋಷಣೆ ಮಾಡಿದ್ದೇನೆ. ಚುನಾವಣೆಗೆ ಸ್ಪರ್ಧೆ ಮಾಡಿಯೇ ಮಾಡ್ತೇನೆ. ನನ್ನ ಮನವೊಲಿಸಲು ಆರಗ ಜ್ಞಾನೇಂದ್ರ, ರವಿಕುಮಾರ್, ಅರುಣ್ ಬಂದಿದ್ದರು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 3 ಸೀಟ್‌ ಕೇಳಿದ್ದೀವಿ, ತಗೊಳ್ತೀವಿ: ಬಿಜೆಪಿ ವರಿಷ್ಠರ ಭೇಟಿ ಬಳಿಕ ಹೆಚ್‌ಡಿಕೆ ಮಾತು

BS YEDIYURAPPA

ನಾನು ಚುನಾವಣೆಗೆ ಏಕೆ ಸ್ಪರ್ಧೆ ಮಾಡ್ತಿದ್ದೇನೆ ಎಂಬುದನ್ನು ಅವರ ಗಮನಕ್ಕೆ ತಂದೆ. ರಾಜ್ಯದ ಬಿಜೆಪಿಯ ಹಲವು ನಾಯಕರಿಗೆ ಮೋಸ ಮಾಡಿದ್ದಾರೆ. ಹಿಂದುತ್ವದ ಪರವಾಗಿ ಕೆಲಸ ಮಾಡಿದವರಿಗೆ ಮೋಸ ಮಾಡಿದ್ದಾರೆ. ಯಡಿಯೂರಪ್ಪ ಕುಟುಂಬದ ಕೈಯಲ್ಲಿ ಪಕ್ಷ ಇದ್ದು ಒದ್ದಾಡುತ್ತಿದೆ. ಯಡಿಯೂರಪ್ಪ ಲಿಂಗಾಯತ ನಾಯಕರು. ವರಿಷ್ಠರು ಅವರನ್ನು ನಂಬಿದ್ದಾರೆ. ಯಡಿಯೂರಪ್ಪ ಕೆಜೆಪಿ ಕಟ್ಟಿದ್ದಾಗ ಪಡೆದಿದ್ದು 6 ಸೀಟ್. ಇದು ಯಡಿಯೂರಪ್ಪ ಅವರ ನಾಯಕತ್ವ. ಲಿಂಗಾಯತ ನಾಯಕರು ಬೇಕು ಅಂದ್ರೆ ಯತ್ನಾಳ್ ಅವರನ್ನು ಅಧ್ಯಕ್ಷರನ್ನಾಗಿ ಮಾಡಬಹುದಿತ್ತು. ಯಡಿಯೂರಪ್ಪ ಹಠ ಹಿಡಿದು ತಮ್ಮ ಮಗನನ್ನು ಅಧ್ಯಕ್ಷರನ್ನಾಗಿ ಮಾಡಿದರು. ಒಕ್ಕಲಿಗರನ್ನು ಮಾಡುವುದಾದರೆ ಸಿ.ಟಿ.ರವಿ ಮಾಡಬಹುದಿತ್ತು. ಸಿ.ಟಿ.ರವಿ ಯಾವುದರಲ್ಲಿ ಕಡಿಮೆ ಆಗಿದ್ದರು? ಅವರಿಗೆ ಏಕೆ ಟಿಕೆಟ್ ತಪ್ಪಿಸಿದರು ಎಂದು ಬಿಎಸ್‌ವೈ ವಿರುದ್ಧ ಕಿಡಿಕಾರಿದ್ದಾರೆ.

ಹಿಂದುಳಿದ ವರ್ಗದ ನಾಯಕನನ್ನು ಅಧ್ಯಕ್ಷರಾಗಿ ಮಾಡುವುದಾದರೆ ನನ್ನ ಏಕೆ ಮಾಡಲಿಲ್ಲ. ನಾನು ಯಾವುದರಲ್ಲಿ ಕಡಿಮೆ ಇದ್ದೆ. ನಾನು ಯಾವಾಗ ಪಕ್ಷ ತೊರೆದು ಹೊರಗೆ ಹೋಗಿದ್ದೆ. ಪಕ್ಷ ಹೇಳಿದಾಗಲೆಲ್ಲಾ ನಾನು ಪಕ್ಷಕ್ಕೆ ರಾಜೀನಾಮೆ ನೀಡಿದೆ. ಯಡಿಯೂರಪ್ಪ, ವಿಜಯೇಂದ್ರ ತಾಯಿಯಂತಿರುವ ಪಕ್ಷದ ಕುತ್ತಿಗೆ ಹಿಸುಕುತ್ತಿದ್ದಾರೆ. ಆ ಪಕ್ಷ ರಕ್ಷಣೆಗೆ ನಾನು ಸ್ಪರ್ಧೆ ಮಾಡ್ತಿದ್ದೇನೆ. ಯಡಿಯೂರಪ್ಪ ಹಾಗೂ ಕುಟುಂಬದಿಂದ ಪಕ್ಷ ರಕ್ಷಣೆ ಆಗಬೇಕು. ಇದಕ್ಕಾಗಿ ನನ್ನ ಸ್ಪರ್ಧೆ. ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಶಿವಮೊಗ್ಗದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ – ಬಿಎಸ್‌ವೈ ವಿರುದ್ಧ ಗುಡುಗಿದ ಈಶ್ವರಪ್ಪ

Basangouda Patil Yatnal BS YEDIYURAPPA

ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯಬೇಡಿ ಅಂತಾ ರಾಜ್ಯದಿಂದ ಹಲವರು ಪೋನ್ ಮಾಡ್ತಿದ್ದಾರೆ. ಅವರೆಲ್ಲರ ಒತ್ತಾಯಕ್ಕಾಗಿ ಸ್ಪರ್ಧೆ ಮಾಡ್ತಿದ್ದೇನೆ. ಯಾರು ಮನವೊಲಿಸಿದರೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಶಿವಮೊಗ್ಗದ ಈಶ್ವರಪ್ಪ ನಿವಾಸಕ್ಕೆ ಆನಂದ ಗುರೂಜಿ ಭೇಟಿ ನೀಡಿದ್ದರು. ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಆಶೀರ್ವಾದ ಮಾಡಿದ್ದಾರೆ. ಅವರ ಆಶೀರ್ವಾದ ವಿಶ್ವಾಸಕ್ಕೆ ಚಿರಋಣಿ ಎಂದು ಈಶ್ವರಪ್ಪ ತಿಳಿಸಿದ್ದಾರೆ. ಇದನ್ನೂ ಓದಿ: ಬಿಎಸ್‌ವೈ ವಿರುದ್ಧ ಈಶ್ವರಪ್ಪ ಗರಂ – ಶಿವಮೊಗ್ಗದಿಂದ ಕಾಂತೇಶ್‌ ಸ್ಪರ್ಧೆ?

Share This Article