ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರು ಶಿವಮೊಗ್ಗದಲ್ಲಿ ಕೊಲೆಯಾಗಿರುವ ಹರ್ಷ ಅವರ ಕುಟುಂಬದವರನ್ನು ಇಂದು ಭೇಟಿ ಮಾಡಿ ಸಾಂತ್ವನ ಹೇಳಿದರು.
ಸಚಿವರಾದ ಕೆ.ಎಸ್.ಈಶ್ವರಪ್ಪ, ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯ ಪ್ರಕೋಷ್ಠಗಳ ಸಂಚಾಲಕರಾದ ಭಾನುಪ್ರಕಾಶ್, ಶಾಸಕ ಯು. ರಾಜೇಶ್ ನಾಯ್ಕ್, ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಅವರು ಈ ಸಂದರ್ಭದಲ್ಲಿ ಇದ್ದರು.
Advertisement
Advertisement
ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಚಿವ ಕೆ.ಎಸ್. ಈಶ್ವರಪ್ಪ (KS Eshwarappa) ಅವರು, ಹಿಂದೂ ಸಂಘಟನೆಯ ಹರ್ಷ ಕಗ್ಗೊಲೆ (Harsha Murder) ಆಗುವ ಕಲ್ಪನೆ ನಮಗ್ಯಾರಿಗೂ ಇರಲಿಲ್ಲ. ಕಗ್ಗೊಲೆ ಆದ ತಕ್ಷಣ ಕೊಲೆಗಡುಕ ಗೂಂಡಾಗಳನ್ನು ರಾಜ್ಯ ಸರ್ಕಾರ ಬಂಧಿಸಿದೆ. ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ಇಲ್ಲಿಗೆ ಬಂದು ಕುಟುಂಬಕ್ಕೆ ಸಾಂತ್ವನ ಹೇಳಿದ್ದು, ಸಹಕಾರದ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಶಿವಮೊಗ್ಗ ಪ್ರಕರಣ ಎರಡು ಪೊಲೀಸ್ ಠಾಣೆ ಮೇಲೆ ಕ್ರೈಂ ಆಡಿಟ್‌ಗೆ ಆದೇಶ: ಆರಗ ಜ್ಞಾನೇಂದ್ರ
Advertisement
Advertisement
ಕೊಲೆಗಡುಕರು ಮತ್ತು ಘಟನೆಯ ಹಿಂದಿರುವ ಶಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ತಿಳಿಸಿದ್ದಾರೆ. ರಾಜ್ಯ ಸರ್ಕಾರದಿಂದಲೂ ಪರಿಹಾರ ಕೊಡುವುದಾಗಿ ತಿಳಿಸಿದ್ದಾರೆ ಎಂದ ಅವರು, ಹರ್ಷ ಕುಟುಂಬಕ್ಕೆ ನೆರವಾದ ಹಿಂದೂ ಸಂಘಟನೆಗಳಿಗೆ ಕೃತಜ್ಞತೆ ಸಲ್ಲಿಸಿದರು. ಇದನ್ನೂ ಓದಿ: ಹತ್ಯೆಗೂ ಮೊದಲು ಅಪರಿಚಿತ ಹುಡುಗಿಯರಿಂದ ಹರ್ಷಗೆ ಪದೇ ಪದೇ ವೀಡಿಯೋ ಕಾಲ್
ಈ ವಿಚಾರದಲ್ಲಿ ಆರೋಪ ಮಾಡಿದವರಿಗೆ ನಿಧಾನಕ್ಕೆ ಉತ್ತರ ಲಭಿಸಲಿದೆ. ಪಕ್ಷ ಮತ್ತು ಸರ್ಕಾರ ಕೈಗೊಳ್ಳುವ ಕ್ರಮ ನಿಧಾನವಾಗಿ ಗೊತ್ತಾಗಲಿದೆ ಎಂದು ಅವರು ಹೇಳಿದರು.