ಬೆಂಗಳೂರು: ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Madal Virupakshappa) ಅವರು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ನಿಗಮದ (KSDL) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಸೂಚನೆ ಮೇರೆಗೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಗುರುವಾರ ರಾತ್ರಿಯೇ ರಾಜೀನಾಮೆಗೆ ಸಿಎಂ ಸೂಚನೆ ನೀಡಿದ್ದರು. ಜೊತೆಗೆ ಕಾನೂನು ಕ್ರಮ ಎದುರಿಸುವಂತೆಯೂ ಸೂಚಿಸಿದ್ದರು. ಇದನ್ನೂ ಓದಿ: ಲೋಕಾಯುಕ್ತ ಸರ್ವ ಸ್ವತಂತ್ರವಾಗಿ ಕೆಲಸ ಮಾಡ್ಲಿ, ತಪ್ಪಿತಸ್ಥರಿಗೆ ಶಿಕ್ಷೆಯಾಗ್ಲಿ: ಸಿಎಂ
Advertisement
Advertisement
ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳ್ 40 ಲಕ್ಷ ರೂ. ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಪ್ರಶಾಂತ್ ಮತ್ತು ಸಹಚರರನ್ನು ಬಂಧಿಸಲಾಗಿದ್ದು, ನ್ಯಾಯಾಲಯದ ಮುಂದೆ ಹಾಜರು ಪಡಿಸಲು ಲೋಕಾಯುಕ್ತ ಮುಂದಾಗಿದೆ. ಅಲ್ಲದೇ ಬಂಧಿತರನ್ನು ಪೊಲೀಸ್ ಕಸ್ಟಡಿಗೆ ವಹಿಸುವಂತೆ ಮನವಿ ಮಾಡಲಿದೆ.
Advertisement
ಲೋಕಾಯುಕ್ತ ದಾಳಿಗೂ ನನಗೂ ಯಾವುದೇ ಸಂಬಂಧವಿಲ್ಲ. ಇದು ನನ್ನ ಹಾಗೂ ನನ್ನ ಕುಟುಂಬದ ವಿರುದ್ಧದ ಷಡ್ಯಂತ್ರವಾಗಿದೆ. ಆದಾಗ್ಯೂ ನನ್ನ ಮೇಲೆ ಆಪಾದನೆ ಬಂದಿರುವುದರಿಂದ ನಾನು ನೈತಿಕ ಹೊಣೆ ಹೊತ್ತು ಕೆಎಸ್‌ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ನನ್ನ ರಾಜೀನಾಮೆ ಅಂಗೀಕರಿಸಬೇಕು ಎಂದು ಮುಖ್ಯಮಂತ್ರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
Advertisement
ಪ್ರಶಾಂತ್‌ನನ್ನು ಬಂಧಿಸಿದ ಬೆನ್ನಲ್ಲೇ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿ ಒಟ್ಟು 7.72 ಕೋಟಿ ಹಣವನ್ನು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ಲೋಕಾಯುಕ್ತ ದಾಳಿ ವೇಳೆ ಬಿಜೆಪಿ ಶಾಸಕನ ಪುತ್ರನ ಮನೆಯಲ್ಲಿ ಸಿಕ್ಕಿದ್ದು ಬರೋಬ್ಬರಿ 6 ಕೋಟಿ!
ರಾಜ್ಯ ಲೆಕ್ಕಪತ್ರ ಇಲಾಖೆಯ ಜಂಟಿ ನಿಯಂತ್ರಕರಾಗಿರುವ ಪ್ರಶಾಂತ್, ಬೆಂಗಳೂರು ಜಲ ಮಂಡಳಿಯಲ್ಲಿ ಮುಖ್ಯ ಲೆಕ್ಕಾಧಿಕಾರಿ ಹುದ್ದೆಯಲ್ಲಿದ್ದಾರೆ. ತಂದೆ ಮಾಡಾಳ್ ವಿರೂಪಾಕ್ಷಪ್ಪ ಅಧ್ಯಕ್ಷರಾಗಿರುವ ಕೆಎಸ್‌ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಿ, ರಾಸಾಯನಿಕ ಸರಬರಾಜು ವೇಳಾಪಟ್ಟಿ ಮತ್ತು ಕಾರ್ಯಾದೇಶ ವಿತರಿಸಲು 81 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಗುತ್ತಿಗೆದಾರ ಶ್ರೇಯಸ್ ಕಶ್ಯಪ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು.