ನವದೆಹಲಿ: ವಾಲ್ಮೀಕಿ ನಿಗಮ, ಮುಡಾ ಹಗರಣ ಹಿನ್ನೆಲೆಯಲ್ಲಿ ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ನವದೆಹಲಿಯಲ್ಲಿ ಬಿಜೆಪಿ (BJP Protest) ಸಂಸದ ಪ್ರತಿಭಟನೆ ನಡೆಸಿದ್ದಾರೆ.
ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ ಸಂಸದರು ದೆಹಲಿಯ ಸಂಸತ್‌ನ ಗಾಂಧಿ ಪ್ರತಿಮೆ ಎದುರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುವಲ್ಲಿ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಪಾಕ್ ದುಸ್ಸಾಹಸ ಮೆರೆದಾಗಲೆಲ್ಲಾ ಸೋಲು ಕಂಡಿದೆ: ಕಾರ್ಗಿಲ್‌ನಲ್ಲಿ ಮೋದಿ ಭಾಷಣ
Advertisement
Advertisement
ಮುಡಾ ಹಾಗೂ ವಾಲ್ಮೀಕಿ ನಿಗಮದಲ್ಲಿ ಅಕ್ರಮ ನಡೆದಿದೆ. ಇದರ ಬಗ್ಗೆ ಸೂಕ್ತ ತನಿಖೆ ಅತ್ಯಗತ್ಯ. ವಾಲ್ಮೀಕಿ ನಿಗನ ಹಗರಣ ಮತ್ತು ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
Advertisement
ಮುಡಾ ಆಸ್ತಿಯನ್ನು ಕಾಂಗ್ರೆಸ್ ಲೂಟಿ ಮಾಡಿದೆ. ಕೋಟಿಗಟ್ಟಲೆ ಲಾಭ ಮಾಡಿಕೊಂಡಿದೆ. ಇದೆಲ್ಲವೂ ಸಿಎಂ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ನಡೆದಿದೆ. ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಪ್ರತಿಭಟಿಸಿ ಸತ್ಯವನ್ನು ಜನರ ಮುಂದೆ ತರುವುದು ನಮ್ಮ ಕರ್ತವ್ಯ ಎಂದು ಸಂಸದ ಬಸವರಾಜ ಬೊಮ್ಮಾಯಿ ಮಾತನಾಡಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಭಾರೀ ಮಳೆಗೆ ಪ್ರವಾಹ ಪರಿಸ್ಥಿತಿ; ಪುಣೆಯಲ್ಲಿ 6 ಮಂದಿ ಬಲಿ
Advertisement
ಪ್ರತಿಭಟನೆಯಲ್ಲಿ ಬಿಜೆಪಿ ನಾಯಕರಾದ ಜಗದೀಶ್ ಶೆಟ್ಟರ್, ಗೋವಿಂದ್ ಕಾರಜೋಳ, ಪಿಸಿ ಮೋಹನ್, ಬಿ.ವೈ ರಾಘವೇಂದ್ರ, ವಿಶ್ವೇಶ್ವರ ಹೆಗಡೆ ಕಾಗೇರಿ, ಯದುವೀರ್ ಒಡೆಯರ್, ಜಗ್ಗೇಶ್, ಈರಣ್ಣ ಕಡಾಡಿ, ನಾರಾಯಣ ಸಾ ಬಾಂಡಗೆ, ಲೇಹರ್ ಸಿಂಗ್, ಪಿಸಿ ಗದ್ದಿಗೌಡರ್, ಡಾ. ಮಂಜುನಾಥ್, ಮಲ್ಲೇಶ್ ಬಾಬು, ಕ್ಯಾ. ಬ್ರಿಜೇಶ್ ಚೌಟಾ, ರಮೇಶ್ ಜಿಗಜಿಣಗಿ ಭಾಗಿಯಾಗಿದ್ದರು.