ಹಾವೇರಿ: ಡಿ.ಕೆ.ಸುರೇಶ್ (DK Suresh) ಅವರು ಸಂಸದರಾಗಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಜವಾಬ್ದಾರಿ ಅರಿತು ಮಾತನಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (Vijayendra Yediyurappa) ಅವರು ಎಚ್ಚರಿಸಿದರು.
ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ದಕ್ಷಿಣ ಭಾರತದ ರಾಜ್ಯಗಳಿಗೆ ಕೇಂದ್ರವು ಹಣ ಬಿಡುಗಡೆ ಮಾಡುತ್ತಿಲ್ಲ. ಹೀಗೆ ಅನ್ಯಾಯವಾದರೆ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ ಎಂಬ ಡಿ.ಕೆ.ಸುರೇಶ್ ಅವರ ಹೇಳಿಕೆಗೆ ಪ್ರತ್ಯುತ್ತರ ನೀಡಿದರು. ರಾಜ್ಯ ಸರಕಾರವು ಸಂವಿಧಾನದ 75ನೇ ವರ್ಷದ ರಥಯಾತ್ರೆ ಆಚರಣೆ ಮಾಡುತ್ತಿದೆ. ಇಂಥ ಸಂದರ್ಭದಲ್ಲಿ ಸಂಸದರು ಈ ರೀತಿ ಹೇಳಿಕೆ ಕೊಟ್ಟಿರುವುದು ಖಂಡನೀಯ ಎಂದರು. ಇದನ್ನೂ ಓದಿ: ಮದ್ಯ ಪ್ರಿಯರಿಗೆ ಶಾಕ್ – ರಾಜ್ಯದಲ್ಲಿ ಮತ್ತೆ ಬಿಯರ್ ದರ ಏರಿಕೆ
Advertisement
Advertisement
ಯಾವುದೇ ಒಬ್ಬ ಜನಪ್ರತಿನಿಧಿಯು ತಮ್ಮ ಸ್ಥಾನವನ್ನು ಅಲಂಕರಿಸಿದ ಸಂದರ್ಭದಲ್ಲಿ ಸಂವಿಧಾನವನ್ನು ಮುಂದಿಟ್ಟುಕೊಂಡು ಪ್ರತಿಜ್ಞೆ ಮಾಡುತ್ತಾರೆ. ಭಾರತದ ಅಖಂಡತೆ ಮತ್ತು ಸಾರ್ವಭೌಮತ್ವವನ್ನು ಕಾಪಾಡುವುದಾಗಿ ಪ್ರತಿಜ್ಞೆಯನ್ನೂ ಅವರು ಮಾಡಿದ್ದಾರೆ. ಎಲ್ಲೋ ಒಂದು ಕಡೆ ಡಿ.ಕೆ.ಸುರೇಶ್ ಅವರು ಇದನ್ನು ಮರೆತಿರುವಂತಿದೆ ಎಂದು ಆಕ್ಷೇಪಿಸಿದರು.
Advertisement
ಇವರು ಯಾವ ಅಭಿವೃದ್ಧಿ, ಯಾವ ಅನುದಾನದ ಮಾತನಾಡುತ್ತಿದ್ದಾರೆ? ಹಿಂದೆ ಯುಪಿಎ (UPA) ಸರಕಾರದಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಕರ್ನಾಟಕ ರಾಜ್ಯಕ್ಕೆ ಕೇಂದ್ರದಿಂದ 2004 -14 ರವರೆಗೆ 60 ಸಾವಿರ ಕೋಟಿ ರೂ. ಕೊಟ್ಟಿದ್ದರು. 2014 ರಿಂದ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ನರೇಂದ್ರ ಮೋದಿಯವರು (Narendra Modi) ಪ್ರಧಾನಿಯಾದ ನಂತರ 2,36,000 ಕೋಟಿ ಅನುದಾನವನ್ನು ಕರ್ನಾಟಕ ರಾಜ್ಯಕ್ಕೆ ಕೊಟ್ಟಿದ್ದಾರೆ. ಮಾನ್ಯ ಸುರೇಶ್ ಅವರು ಇದನ್ನು ಗಮನಿಸುವಂತೆ ವಿನಂತಿಸಿದರು. ಇದನ್ನೂ ಓದಿ: ಕೇಂದ್ರ ಬಜೆಟ್ 2024 – ಯಾರಿಗೆ ಲಾಭ? ಯಾರಿಗೆ ನಷ್ಟ?
Advertisement
ತೆರಿಗೆ ಹಂಚಿಕೆ (ಟ್ಯಾಕ್ಸ್ ಡೆವಲ್ಯೂಶನ್) ಮೂಲಕ ರಾಜ್ಯಕ್ಕೆ ಯುಪಿಎ ಸರಕಾರದ ಅವಧಿಯಲ್ಲಿ 81 ಸಾವಿರ ಕೋಟಿ ರೂ. ಬಂದಿತ್ತು. ಅದೇ ನಮ್ಮ ನರೇಂದ್ರ ಮೋದಿಜೀ ನೇತೃತ್ವದ ಬಿಜೆಪಿ ಸರಕಾರದಲ್ಲಿ 2,82,000 ಕೋಟಿ ರೂ. ಹಣವನ್ನು ಕೊಡಲಾಗಿದೆ. ಹಾಗಾಗಿ ಅಂಕಿಅಂಶ ಅರ್ಥ ಮಾಡಿಕೊಳ್ಳದೇ ಜವಾಬ್ದಾರಿಯುತ ಸಂಸದರು ಬೇಜವಾಬ್ದಾರಿಯುತವಾಗಿ ನಡೆದುಕೊಂಡಿದ್ದಾರೆ. ಇದು ದುರದೃಷ್ಟಕರ ಎಂದು ಟೀಕಿಸಿದರು.
ಕಾಂಗ್ರೆಸ್ ಪಕ್ಷಕ್ಕೆ ಮತ ಕೊಡದೇ ಇದ್ದರೆ ಗ್ಯಾರಂಟಿಗಳು ರದ್ದು ಎಂಬ ಕಾಂಗ್ರೆಸ್ ಶಾಸಕ ಬಾಲಕೃಷ್ಣ ಅವರ ಹೇಳಿಕೆ ಕೇವಲ ಅವರದಲ್ಲ. ಮಾನ್ಯ ಮುಖ್ಯಮಂತ್ರಿಗಳು ಪರದಾಡುತ್ತಿದ್ದಾರೆ. ರಾಜ್ಯವು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಕೊಂಡಿದೆ. ಅವರು ಕೊಟ್ಟ ಭರವಸೆ, ಗ್ಯಾರಂಟಿಗಳನ್ನು ಈಡೇರಿಸಲು ಸಾಧ್ಯವಾಗುತ್ತಿಲ್ಲ. ರಾಜ್ಯದ ಮುಖ್ಯಮಂತ್ರಿಗಳು ಮತ್ತು ಹಣಕಾಸು ಸಚಿವರೇ ಅವರ ಶಾಸಕರ ಮೂಲಕ ಈ ಹೇಳಿಕೆ ಕೊಟ್ಟಿದ್ದಾರೆ ಎಂಬ ಅನುಮಾನ ಕಾಡುತ್ತಿದೆ ಎಂದು ಪ್ರಶ್ನೆಗೆ ಉತ್ತರವಾಗಿ ತಿಳಿಸಿದರು.