– ರಾಜ್ಯ ನಾಯಕರಿಗೆ ಬಿಜೆಪಿ ಹೈಕಮಾಂಡ್‌ನಿಂದ ಸಂದೇಶ
ಬೆಂಗಳೂರು: ಗುಜರಾತ್, ಹಿಮಾಚಲ ಪ್ರದೇಶದ ಕಾರ್ಯತಂತ್ರದಂತೆ ಈ ಬಾರಿಯ ಕರ್ನಾಟಕ ಚುನಾವಣೆಯಲ್ಲಿ(Karnataka Election) ಹಿರಿಯರಿಗೆ ಟಿಕೆಟ್ ನೀಡುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಬಿಜೆಪಿ ಹೈಕಮಾಂಡ್(BJP High Command) ಈಗಲೇ ರವಾನಿಸಿದೆ.
ಡಿ. 5ರಂದು ಗುಜರಾತ್ ಚುನಾವಣೆ ಮುಗಿದಿದ್ದು ಅಂದು ದೆಹಲಿಯಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ನಡೆದಿದೆ. ಈ ಸಭೆಯಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಭಾಗಿಯಾಗಿದ್ದರು. ಈ ವೇಳೆ ಹೈಕಮಾಂಡ್ ರಾಜ್ಯ ನಾಯಕರಿಗೆ ಮುಖ್ಯವಾದ ಸಂದೇಶಗಳನ್ನು ಕಳುಹಿಸಿದೆ.
ಸಂದೇಶ ಏನು?
ಮಾಜಿ ಸಿಎಂ ಯಡಿಯೂರಪ್ಪ(Yediyurappa) ಅವರಂತೆ ಹಿರಿಯ ನಾಯಕರು ಅವರೇ ಸ್ವಯಂ ನಿವೃತ್ತಿ ಘೋಷಿಷಿಕೊಳ್ಳಬೇಕು. ಹಿರಿಯ ಸಚಿವರಿಗೆ ಮನವರಿಕೆ ಮಾಡಿಕೊಡುವಂತೆ ಕೆಲ ನಾಯಕರಿಗೆ ನಿರ್ದೇಶನ ನೀಡಬೇಕು. ಇದನ್ನೂ ಓದಿ: ರಾಹುಲ್ ಟೀಂ ಚುನಾವಣಾ ಸಮೀಕ್ಷೆಗೆ ಸಿದ್ದು ಸಿಡಿಮಿಡಿ
ಸ್ವಯಂ ನಿವೃತ್ತಿ ನಿರ್ಧಾರ ತಮ್ಮದೇ, ಪಕ್ಷದಿಂದ ಮಾಡಿಸಿದ್ದಲ್ಲ. ಪಕ್ಷಕ್ಕೂ ತಮ್ಮ ನಿರ್ಧಾರಕ್ಕೂ ಸಂಬಂಧ ಇಲ್ಲ ಎಂಬುದನ್ನು ಸ್ಪಷ್ಟವಾಗಿ ಘೋಷಿಸಬೇಕು. ಕಾರ್ಯಕರ್ತರ ವಲಯ ಹಾಗೂ ನಿಮ್ಮ ಕ್ಷೇತ್ರಗಳಲ್ಲಿ ಗೊಂದಲ ಆಗದಂತೆ ನಿಗಾ ವಹಿಸಬೇಕು. ಈ ಸಂದೇಶವನ್ನು 73 ವರ್ಷದ ಮೀರಿದ ಕೆಲ ಹಿರಿಯರಿಗೆ ತಲುಪಿಸುವಂತೆ ರಾಜೇಶ್‍ಗೆ ಹೈಕಮಾಂಡ್ ಸೂಚನೆ ನೀಡಿದೆ.
ಬೂತ್ ಮಟ್ಟದಲ್ಲಿ ವ್ಯಕ್ತಿಗಿಂತ ಪಕ್ಷವೇ ಸ್ಟ್ರಾಂಗ್ ಪಾಲಿಸಿ ಅಳವಡಿಕೆ ಮಾಡಬೇಕು. ಕಾರ್ಯಕರ್ತರೇ ನಮ್ಮ ಶಕ್ತಿ. ಈ ನಿಟ್ಟಿನಲ್ಲಿ ಪಕ್ಷವನ್ನು ಬಲಪಡಿಸಬೇಕೆಂಬ ಸಂದೇಶವನ್ನು ಕಳುಹಿಸಲಾಗಿದೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.