ಬೆಂಗಳೂರು: ಕರ್ನಾಟಕ ಹಾಗೂ ಪಂಜಾಬ್‌ನಲ್ಲಿ ಕಾಂಗ್ರೆಸ್ ನಾಯಕರು ಶೀತಲ ಸಮರ ನಡೆಸುತ್ತಿದ್ದಾರೆ ಎಂದು ಆರೋಪಿಸಿರುವ ರಾಜ್ಯ ಬಿಜೆಪಿ, ಸಿದ್ದರಾಮಯ್ಯ ಮತ್ತು ನವಜೋತ್ ಸಿಂಗ್ ಸಿಧು ವಿರುದ್ಧ ಹರಿಹಾಯ್ದಿದೆ.
ಪಂಜಾಬ್‌ನಲ್ಲಿ ಚುಣಾವಣೆಗೆ ದಿನಗಣನೆ ಆರಂಭವಾದರೂ ಬಂಡಾಯ ಶಮನವಾಗಿಲ್ಲ. ಅಲ್ಲಿ ಸಿಧು, ಇಲ್ಲಿ ಸಿದ್ದು. ಕಾಂಗ್ರೆಸ್ ಹೈಕಮಾಂಡ್‌ಗೆ ಮೂರ್ಛೆ ರೋಗ ತರಿಸುವುದಕ್ಕೆ ಇವರಿಬ್ಬರೇ ಸಾಕು ಎಂದು ಟ್ವೀಟ್ ಮಾಡಿ ಬಿಜೆಪಿ ವಾಗ್ದಾಳಿ ನಡೆಸಿದೆ. ಇದನ್ನೂ ಓದಿ: Punjab Election: ಚನ್ನಿ ಕಾಂಗ್ರೆಸ್ ಸಿಎಂ ಅಭ್ಯರ್ಥಿ – ರಾಹುಲ್ ಗಾಂಧಿ ಅಧಿಕೃತ ಘೋಷಣೆ
Advertisement
ಬಿಜೆಪಿ ಟ್ವೀಟ್‌ನಲ್ಲೇನಿದೆ?
ರಾಜ್ಯ ಕಾಂಗ್ರೆಸ್ ಶೀತಲ ಸಮರದ ಬಿಸಿ ಈಗ ದಿಲ್ಲಿ ನಾಯಕರಿಗೂ ತಟ್ಟಿದೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ಮಧ್ಯೆ ತೇಪೆ ಹಚ್ಚಲು ರಾಹುಲ್ ಗಾಂಧಿ ಅವರು ತಮ್ಮ ಆಪ್ತ ಸಲಹೆಗಾರರನ್ನೇ ಸಿದ್ದರಾಮಯ್ಯ ನಿವಾಸಕ್ಕೆ ಕಳುಹಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸ್ಥಿತಿ ತೀವ್ರ “ನಿಗಾ” ಘಟಕ ಸೇರುವಂತಾಗಿದೆಯೇ?
Advertisement
ಪಂಜಾಬ್‌ನಲ್ಲಿ ಚುನಾವಣೆಗೆ ದಿನಗಣನೆ ಆರಂಭವಾದರೂ ಬಂಡಾಯ ಶಮನವಾಗಿಲ್ಲ.
ಅಲ್ಲಿ ಸಿಧು, ಇಲ್ಲಿ ಸಿದ್ದು !!!
ಕಾಂಗ್ರೆಸ್ ಹೈಕಮಾಂಡ್‌ಗೆ ಮೂರ್ಛೆ ರೋಗ ತರಿಸುವುದಕ್ಕೆ ಇವರಿಬ್ಬರೇ ಸಾಕು.#ಕಾಂಗ್ರೆಸ್‌ಕಲಹ
— BJP Karnataka (@BJP4Karnataka) February 6, 2022
Advertisement
ಒಂದೆಡೆ ಅಧ್ಯಕ್ಷರು ಹಿಜಬ್ ಬಗ್ಗೆ ಪಕ್ಷದವರಿಗೆ ಎಲ್ಲಿಯೂ ಮಾತನಾಡಬೇಡಿ ಎಂದು ಹೇಳುತ್ತಿದ್ದಾರೆ. ಆದರೆ ಸಿದ್ದರಾಮಯ್ಯ ಅವರು ಅಧ್ಯಕ್ಷರ ಮಾತನ್ನು ಧಿಕ್ಕರಿಸಿ ಹಿಜಬ್ ಬಗ್ಗೆ ಎಲ್ಲೆಡೆ ಮಾತನಾಡುತ್ತಿದ್ದಾರೆ. ಮಾನ್ಯ ಕೆಪಿಸಿಸಿ ಅಧ್ಯಕ್ಷರೇ, ಮುಂದಿನ ನೋಟಿಸ್ ಸಿದ್ದರಾಮಯ್ಯ ಹೆಸರಿಗೆ ಕಳುಹಿಸುತ್ತೀರಾ? ಇದನ್ನೂ ಓದಿ: ಸಿದ್ದರಾಮಯ್ಯರ ಮುತ್ಸದ್ಧಿತನ ಮಸುಕಾಗಿ ತಾಲಿಬಾನ್ ಭೂತ ಹೊಕ್ಕಿದೆ: ಸಿ.ಟಿ. ರವಿ
Advertisement
ಕಾಂಗ್ರೆಸ್ ಪಕ್ಷಕ್ಕೆ ಪಂಚರಾಜ್ಯಗಳ ಚುನಾವಣೆ ಬಗ್ಗೆ ತಲೆಕೆಡಿಸಿಕೊಳ್ಳಬೇಕೋ ಇಲ್ಲ ಸಿಧು, ಸಿದ್ದರಾಮಯ್ಯ ಅವರ ಬಗ್ಗೆ ತಲೆ ಕೆಡಿಸಿಕೊಳ್ಳಬೇಕೋ ಎಂಬುದು ತಿಳಿಯದಾಗಿದೆ.
ಇವರಿಬ್ಬರ ಜಗಳದಿಂದ ರಾಹುಲ್ ಗಾಂಧಿ ಅವರು ಬೇಸತ್ತು ಹೋಗಿದ್ದಾರೆ. ಪರಿಹಾರಕ್ಕಾಗಿ ಮತ್ತೊಂದು ವಿದೇಶ ಪ್ರವಾಸ ಮಾಡುವುದು ಖಚಿತವಾಗಿದೆ.#ಕಾಂಗ್ರೆಸ್‌ಕಲಹ
— BJP Karnataka (@BJP4Karnataka) February 6, 2022
ಕಾಂಗ್ರೆಸ್ ಪಕ್ಷಕ್ಕೆ ಪಂಚರಾಜ್ಯಗಳ ಚುನಾವಣೆ ಬಗ್ಗೆ ತಲೆಕೆಡಿಸಿಕೊಳ್ಳಬೇಕೋ ಇಲ್ಲ ಸಿಧು, ಸಿದ್ದರಾಮಯ್ಯ ಅವರ ಬಗ್ಗೆ ತಲೆ ಕೆಡಿಸಿಕೊಳ್ಳಬೇಕೋ ಎಂಬುದು ತಿಳಿಯದಾಗಿದೆ. ಇವರಿಬ್ಬರ ಜಗಳದಿಂದ ರಾಹುಲ್ ಗಾಂಧಿ ಅವರು ಬೇಸತ್ತು ಹೋಗಿದ್ದಾರೆ. ಪರಿಹಾರಕ್ಕಾಗಿ ಮತ್ತೊಂದು ವಿದೇಶ ಪ್ರವಾಸ ಮಾಡುವುದು ಖಚಿತವಾಗಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.