ನವದೆಹಲಿ: ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿಕೊಂಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರೂ ಆಗಿರುವ ಬಿ.ವೈ ವಿಜಯೇಂದ್ರ (BY Vijayendra) ಅವರಿಂದು ಪ್ರಧಾನಿ ಮೋದಿ (PM Modi) ಅವರನ್ನು ಭೇಟಿಯಾಗಿ, ಆಶೀರ್ವಾದ ಪಡೆದಿದ್ದಾರೆ.
ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿಕೊಂಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸನ್ಮಾನ್ಯ ಪ್ರಧಾನಿ ಶ್ರೀ @narendramodi ಜೀ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆಯಲಾಯಿತು.
ವಿಕಸಿತ ಭಾರತ ನಿರ್ಮಾಣಕ್ಕಾಗಿ ಮಹಾಸಂಕಲ್ಪ ತೊಟ್ಟು ತಪಸ್ವಿ ಸಾಧಕರಂತೆ ದೇಶ ಕಟ್ಟುವ ಕಾಯಕದಲ್ಲಿ ತಮ್ಮನ್ನು ಸಮರ್ಪಿಸಿಕೊಂಡಿರುವ ಹೆಮ್ಮೆಯ ಪ್ರಧಾನಿ ಮೋದಿಜೀಯವರ… pic.twitter.com/okGgDi3YIG
— Vijayendra Yediyurappa (@BYVijayendra) December 18, 2024
Advertisement
ಪ್ರಧಾನಿ ಭೇಟಿಯಾದ ಫೋಟೋವನ್ನು ತಮ್ಮ ಎಕ್ಸ್‌ನಲ್ಲಿ ಹಂಚಿಕೊಂಡಿರುವ ವಿಜಯೇಂದ್ರ, ಮೋದಿ ಅವರ ಹಾಡಿಹೊಗಳಿದ್ದಾರೆ. ವಿಕಸಿತ ಭಾರತ ನಿರ್ಮಾಣಕ್ಕಾಗಿ ಮಹಾಸಂಕಲ್ಪ ತೊಟ್ಟು ತಪಸ್ವಿ ಸಾಧಕರಂತೆ ದೇಶ ಕಟ್ಟುವ ಕಾಯಕದಲ್ಲಿ ತಮ್ಮನ್ನು ಸಮರ್ಪಿಸಿಕೊಂಡಿರುವ ಹೆಮ್ಮೆಯ ಪ್ರಧಾನಿ ಮೋದಿಜೀಯವರ ಕಾರ್ಯ ಶೈಲಿ ನಮ್ಮಂಥ ಕಾರ್ಯಕರ್ತರಿಗೆ ನಿತ್ಯ ಚೈತನ್ಯದ ಚಿಲುಮೆಯಾಗಿದೆ. ಅವರ ಆಶೀರ್ವಾದದ ಮಾರ್ಗದರ್ಶನ ರಾಜ್ಯದಲ್ಲಿ ಪಕ್ಷ ಕಟ್ಟುವ ಕಾರ್ಯಕ್ಕೆ ಅದಮ್ಯ ಉತ್ಸಾಹ ತುಂಬಿದೆ, ಇಂದಿನ ಅವರ ಭೇಟಿಯ ಸಂದರ್ಭದ ಮಾತುಗಳು ಸಂಘಟನೆಯ ಬಲವೃದ್ಧಿಯ ಜೊತೆ ಜೊತೆಗೇ ರಾಷ್ಟ್ರ ಬಲಿಷ್ಠಗೊಳಿಸುವ ಮಹಾ ಕಾರ್ಯದಲ್ಲಿ ಯುವಜನರ ಸಹಭಾಗಿತ್ವ ನಿರೀಕ್ಷೆ ಮೀರಿ ತೊಡಗಿಸಿಕೊಳ್ಳುವಂತೆ ಕಾರ್ಯಕ್ರಮಗಳನ್ನು ರೂಪಿಸಲು ಪ್ರೇರಣೆ ನೀಡಿತು ಎಂದಿದ್ದಾರೆ.
Advertisement
Advertisement
ಭಾರತದ ಆರ್ಥಿಕ, ಔದ್ಯೋಗಿಕ, ಶೈಕ್ಷಣಿಕ ಕ್ಷೇತ್ರಗಳ ಪ್ರಗತಿ ಜಾಗತಿಕ ಮಟ್ಟದಲ್ಲಿ ಅಗ್ರ ಸಾಧನೆಗೈಯಲು ಮಹತ್ವದ ಪಾತ್ರ ವಹಿಸಲಿದ್ದು, ಈ ನಿಟ್ಟಿನಲ್ಲಿ ಕರ್ನಾಟಕದ ಕೊಡುಗೆ ಮುಂಚೂಣಿ ಸ್ಥಾನದಲ್ಲಿರುವಂತೆ ಕಾಳಜಿ ವಹಿಸಲು ಕೇಂದ್ರ ಸರ್ಕಾರದ ಯೋಜನೆಗಳು ಜನರಿಗೆ ತಲುಪುವಂತಾಗಬೇಕು. ಇದಕ್ಕಾಗಿ ಪಕ್ಷದ ಕಾರ್ಯಕರ್ತರು ಯೋಜಿತವಾಗಿ ತೊಡಗಿಸಿಕೊಳ್ಳಲು ಕಾರ್ಯಕ್ರಮ ರೂಪಿಸಲು ಮಾನ್ಯ ಪ್ರಧಾನಿಗಳು ಸೂಚಿಸಿದರು ಎಂದು ಬರೆದುಕೊಂಡಿದ್ದಾರೆ.
Advertisement
ರಾಜ್ಯದ ವಿದ್ಯಮಾನಗಳ ಕುರಿತು ಚರ್ಚೆ:
ಪ್ರಧಾನಿ ಭೇಟಿಯಾಗಿರುವ ವಿಜಯೇಂದ್ರ ಅವರು ರಾಜ್ಯದಲ್ಲಿ ನಡೆಯುತ್ತಿರುವ ಪಕ್ಷದ ವಿದ್ಯಮಾನ, ವಿವಿಧ ಸಮಿತಿಗಳ ಚುನಾವಣೆ, ರಾಜ್ಯಾಧ್ಯಕ್ಷರ ಚುನಾವಣೆ ಸಂಬಂಧ ಮಹತ್ವದ ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.
ರೆಬಲ್ ನಾಯಕರಾದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ತಂಡದಿಂದ ಇದೇ ಡಿ.26, 27ರಂದು ವಕ್ಫ್ ವಿರುದ್ಧ 2ನೇ ಹಂತದ ಹೋರಾಟ ನಡೆಸಲು ಸಿದ್ಧತೆ ನಡೆಯುತ್ತಿದೆ. ಅಲ್ಲದೇ ದಾವಣಗೆರೆಯಲ್ಲಿ ಪ್ರತ್ಯೇಕ ಸಮಾವೇಶ, ಹೈಕಮಾಂಡ್ ಸಂದೇಶದ ಬಳಿಕವೂ ಯತ್ನಾಳ್ ತಂಡದಿಂದ ನಿರೀಕ್ಷಿತ ಸಹಕಾರ ಸಿಕ್ಕಿಲ್ಲ ಎಂಬೆಲ್ಲ ಬೆಳವಣಿಗೆಗಳ ಬಗ್ಗೆ ವರಿಷ್ಠರೊಂದಿಗೆ ಚರ್ಚಸುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.