ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲೂ (Karnataka Legislative Council) ಬಿಜೆಪಿ-ಜೆಡಿಎಸ್ (BJP-JDS) ಮೈತ್ರಿ ಮುಂದುವರಿದಿದೆ. ಬಿಜೆಪಿ 5 ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಒಂದು ಸ್ಥಾನವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ.
ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯಿಂದ ಶನಿವಾರ ಟಿಕೆಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ಪದವೀಧರ ಕ್ಷೇತ್ರದಿಂದ ಎ.ದೇವೇಗೌಡಗೆ ಟಿಕೆಟ್ ನೀಡಲಾಗಿದೆ. ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವೈ.ಎ.ನಾರಾಯಣಸ್ವಾಮಿ ಟಿಕೆಟ್ ಗಿಟ್ಟಿಸಿದ್ದಾರೆ. ಇದನ್ನೂ ಓದಿ: ನಿಮ್ಮ ನಾಚಿಕೆಗೇಡಿನ ನಡವಳಿಕೆ ತೋರಿಸುವ ವೀಡಿಯೋ ನನ್ನ ಬಳಿ ಇದೆ – ರಾಜ್ಯಪಾಲರ ವಿರುದ್ಧ ದೀದಿ ಗುಡುಗು
Advertisement
Advertisement
ಈಶಾನ್ಯ ಪದವೀಧರ ಕ್ಷೇತ್ರದಿಂದ ಅಮರನಾಥ ಪಾಟೀಲ್, ನೈರುತ್ಯ ಪದವೀಧರ ಕ್ಷೇತ್ರದಿಂದ ಡಾ. ಧನಂಜಯ್ ಸರ್ಜಿ, ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಇ.ಸಿ.ನಿಂಗರಾಜುಗೆ ಟಿಕೆಟ್ ನೀಡಲಾಗಿದೆ.
Advertisement
ಬಿಜೆಪಿ ಉಳಿದ ನೈರುತ್ಯ ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ. ಈ ಕ್ಷೇತ್ರದಿಂದ ಮೇಲ್ಮನೆ ಹಾಲಿ ಸದಸ್ಯ ಎಸ್.ಎಲ್.ಭೋಜೇಗೌಡ ಅವರಿಗೆ ಟಿಕೆಟ್ ನೀಡುವುದು ಖಚಿತವಾಗಿದೆ. ಆದರೆ ಈವರೆಗೆ ಅಧಿಕೃತ ಘೋಷಣೆಯಾಗಿಲ್ಲ. ಇದನ್ನೂ ಓದಿ: ಕಾಂಗ್ರೆಸ್ ಪಕ್ಷ 50 ಸ್ಥಾನ ಕೂಡ ಗಳಿಸಲ್ಲ: ಮೋದಿ ಭವಿಷ್ಯ
Advertisement
ಜೂ.3 ರಂದು ಚುನಾವಣೆ ನಡೆಯಲಿದೆ. ಈಗಾಗಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಮೇ 16 ರಂದು ಉಮೇದುವಾರಿಕೆ ಸಲ್ಲಿಕೆಗೆ ಕೊನೆ ದಿನವಾಗಿದೆ. ಮೇ 17 ನಾಮಪತ್ರ ಪರಿಶೀಲನೆ, ಮೇ 20 ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿದೆ. ಜೂ.6 ರಂದು ಮತ ಎಣಿಕೆ ನಡೆಯಲಿದೆ.