ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ(PM Narendra Modi) ಕಾರ್ಯಕ್ರಮಕ್ಕೆ ಸುಮಾರು 2 ಲಕ್ಷ ಮಂದಿಯನ್ನು ಸೇರಿಸಲು ಕರ್ನಾಟಕ ಬಿಜೆಪಿ(Karnataka BJP) ನಿರ್ಧಾರ ತೆಗೆದುಕೊಂಡಿದೆ.
ನವೆಂಬರ್ 10 ರಂದು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಿರ್ಮಾಣಗೊಂಡಿರುವ 108 ಅಡಿ ಎತ್ತರದ ಕೇಂಪೇಗೌಡರ(Kempegowda) ಪ್ರತಿಮೆಯನ್ನು ಮತ್ತು ಎರಡನೇ ಟರ್ಮಿನಲ್ ಉದ್ಘಾಟನೆ ಮಾಡಲಿದ್ದಾರೆ. ಇದನ್ನೂ ಓದಿ: ಸೋಮವಾರ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 12ನೇ ಕಂತು ಬಿಡುಗಡೆ
Advertisement
ಪ್ರಧಾನಿ ಶ್ರೀ @narendramodi ಯವರು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳ ಉದ್ಘಾಟನೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ @nalinkateel ಅವರು ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪೂರ್ವಭಾವಿ ಸಭೆ ನಡೆಸಿದರು. pic.twitter.com/r6gHxJKHjf
— BJP Karnataka (@BJP4Karnataka) October 16, 2022
Advertisement
ಈ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಇಂದು ಪಕ್ಷದ ಕಚೇರಿಯಲ್ಲಿ ರಾಜ್ಯಾಧಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಬೆಂಗಳೂರಿನ ಶಾಸಕರ ಜೊತೆ ಪೂರ್ವಭಾವಿ ಸಿದ್ಧತೆಗಾಗಿ ಸಭೆ ನಡೆಸಲಾಯಿತು.
Advertisement
ಇಂದಿನ ಸಭೆಯಲ್ಲಿ ಮೋದಿ ಕಾರ್ಯಕ್ರಮ ಯಶಸ್ವಿಗೊಳಿಸುವ ಬಗ್ಗೆ ಚರ್ಚೆ ನಡೆಸಲಾಯಿತು. ಬೆಂಗಳೂರು ನಗರದಿಂದ 1 ಲಕ್ಷ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ 50 ಸಾವಿರ, ಚಿಕ್ಕಬಳ್ಳಾಪುರ ಹಾಗೂ ತುಮಕೂರಿನಿಂದ ತಲಾ 25 ಸಾವಿರ ಜನ ಸೇರಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಮುಂದಿನ ವಾರ ಈ ಸಂಬಂಧ ಮತ್ತೊಮ್ಮೆ ಸಭೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ.