ಬೆಂಗಳೂರು: ಇಂದು ಸಂಜೆ ಶಾಸಕಾಂಗ ಸಭೆಯ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಮತ್ತು ಅರವಿಂದ ಬೆಲ್ಲದ್ (Arvind Bellad) ನಡೆ ಕುತೂಹಲ ಮೂಡಿಸಿದೆ.
ಇಂದು ಬೆಳಗ್ಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರನ್ನು ಆರ್‌ಟಿ ನಗರದ ಮನೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇದನ್ನೂ ಓದಿ: 68 ಸಾವಿರ ದಂಡ ಪಾವತಿಸಿದ್ದೇನೆ – ಲುಲು ಮಾಲ್‌ಗೆ ಕರೆಂಟ್ ಶಾಕ್ ಕೊಟ್ಟ ಕುಮಾರಸ್ವಾಮಿ
ಪ್ರತಿಪಕ್ಷದ ನಾಯಕನ ಸ್ಥಾನವನ್ನು ಉತ್ತರ ಕರ್ನಾಟಕ (North Karnatka) ಭಾಗದವರಿಗೆ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಬಿಜೆಪಿ (BJP) ಮತ ಬ್ಯಾಂಕ್ ಇರುವ ಉತ್ತರ ಕರ್ನಾಟಕದವರಿಗೆ ಆದ್ಯತೆ ನೀಡದಿದ್ದರೆ ಲೋಕಸಭೆ ಚುನಾವಣೆಯಲ್ಲಿ (Loka Sabha Election) ಸಮಸ್ಯೆಯಾಗುವ ಬಗ್ಗೆ ಬೊಮ್ಮಾಯಿ ಜತೆ ಇಬ್ಬರು ನಾಯಕರು ಚರ್ಚಿಸಿದ್ದಾರೆ.
ಶಾಸಕಾಂಗ ಪಕ್ಷದ ಸಭೆಗೂ ಮುನ್ನ ದೆಹಲಿಯಿಂದ ಆಗಮಿಸಿದ ಕೇಂದ್ರದ ವೀಕ್ಷಕರು ಮಾಜಿ ಸಿಎಂ ಯಡಿಯೂರಪ್ಪ ಭೇಟಿ ಮಾಡಿದ್ದಾರೆ. ನಿರ್ಮಲಾ ಸೀತಾರಾಮನ್ ಮತ್ತು ದುಷ್ಯಂತ್ ಗೌತಮ್ ಕುಮಾರ್ ಬೆಳಗ್ಗೆ ಧವಳಗಿರಿ ನಿವಾಸದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾದರು.