– 3 ಕೋಟಿ ರೂ. ವೆಚ್ಚದಲ್ಲಿ ಸಿಮ್ಯುಲೇಷನ್ ಲ್ಯಾಬ್
– ಬಡ ರೋಗಿಗಳಿಗೆ ಉಚಿತ ಪೆರಿಟೋನಿಯಲ್ ಡಯಾಲಿಸಿಸ್ ಸೇವೆ
ಬೆಂಗಳೂರು: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಉತ್ತರ ಕನ್ನಡಕ್ಕೆ ದೊಡ್ಡ ಆಸ್ಪತ್ರೆ ತರಬೇಕೆಂಬ ಅಭಿಯಾನ ಬಹಳ ಜೋರಾಗಿ ನಡೆದಿತ್ತು. ಈ ಅಭಿಯಾನದ ಬಿಸಿ ರಾಜ್ಯ ಸರ್ಕಾರಕ್ಕೆ ತಟ್ಟಿದ್ದು ಈ ಬಾರಿ ಬಜೆಟ್ ನಲ್ಲಿ ಶಿರಸಿ ತಾಲೂಕು ಆಸ್ಪತ್ರೆಯನ್ನು 200 ಬೆಡ್ ಸಾಮಥ್ರ್ಯ ಆಸ್ಪತ್ರೆಯನ್ನಾಗಿ ಮಾಡುವುದಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.
ಮುಖ್ಯಾಂಶಗಳು:
ಏಷ್ಯಾ ಖಂಡದ ದೇಶಗಳ ಶಿಕ್ಷಣ ಸಚಿವರ ಶೈಕ್ಷಣಿಕ ಸಮಾವೇಶ ಮತ್ತು ಬೃಹತ್ ವಸ್ತು ಪ್ರದರ್ಶನ ಆಯೋಜನೆ. ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ / ಆರೋಗ್ಯ ಕ್ಷೇಮ ಕೇಂದ್ರಗಳಲ್ಲಿ ಹಂತ ಹಂತವಾಗಿ 19 ಕೋಟಿ ರೂ. ವೆಚ್ಚದಲ್ಲಿ ಟೆಲಿಮೆಡಿಸನ್ ಸೇವೆ ವಿಸ್ತರಣೆ.
ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲ್ಲೂಕು ಸರ್ಕಾರಿ ಆಸ್ಪತ್ರೆ 200 ಹಾಸಿಗೆ ಆಸ್ಪತ್ರೆಯಾಗಿ ಮೇಲ್ದರ್ಜೆಗೆ. ಆರು ವರ್ಷದೊಳಗಿನ ಮಕ್ಕಳಲ್ಲಿ ಜನ್ಮಜಾತ ಕಿವುಡುತನ ಪತ್ತೆ ಹಚ್ಚಿ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರ ಚಿಕಿತ್ಸೆ ನಡೆಸಿ, ಶ್ರವಣಯಂತ್ರ ಒದಗಿಸಿ ಗುಣಪಡಿಸುವ ಯೋಜನೆಗೆ 28 ಕೋಟಿ ರೂ. ಅನುದಾನ.
ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಪ್ರಾಯೋಗಿಕವಾಗಿ ಎರಡು ಜಿಲ್ಲೆಗಳಲ್ಲಿ ತಾಲ್ಲೂಕು ಆಸ್ಪತ್ರೆಗಳ ತೀವ್ರ ನಿಗಾ ಘಟಕ ನಿರ್ವಹಣೆ. ರಾಜ್ಯದ ಆಯ್ದ ಐದು ಜಿಲ್ಲೆಗಳಲ್ಲಿ ಐದು ಕೋಟಿ ರೂ. ವೆಚ್ಚದಲ್ಲಿ ಬಡ ರೋಗಿಗಳಿಗೆ ಉಚಿತ ಪೆರಿಟೋನಿಯಲ್ ಡಯಾಲಿಸಿಸ್ ಸೇವೆ.
ಕೆ.ಸಿ. ಜನರಲ್ ಆಸ್ಪತ್ರೆ ಮತ್ತು ಇತರೆ ಐದು ಆಸ್ಪತ್ರೆಗಳ ತುರ್ತು ವೈದ್ಯಕೀಯ ಚಿಕಿತ್ಸಾ ವಿಭಾಗಗಳನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಮೇಲ್ದರ್ಜೆಗೇರಿಸಿ ಉತ್ಕøಷ್ಟತಾ ಕೇಂದ್ರಗಳನ್ನಾಗಿ ಅಭಿವೃದ್ಧಿಪಡಿಸಲು ಐದು ಕೋಟಿ ರೂ. ಅನುದಾನ.
ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಮತ್ತು ಸಿ.ವಿ. ರಾಮನ್ ಆಸ್ಪತ್ರೆಗಳಲ್ಲಿ ಹೃದಯ ರೋಗದ ಚಿಕಿತ್ಸೆಗಾಗಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದೊಂದಿಗೆ ಕ್ಯಾತ್‍ಲ್ಯಾಬ್ ಸ್ಥಾಪನೆ. ಹಾವೇರಿ ಜಿಲ್ಲೆಯಲ್ಲಿ 20 ಕೋಟಿ ರೂ. ವೆಚ್ಚದಲ್ಲಿ 20 ಹಾಸಿಗೆಗಳ ಆಯುಷ್ ಸಂಯುಕ್ತ ಆಸ್ಪತ್ರೆ ಪ್ರಾರಂಭ. ಐದು ಕೋಟಿ ರೂ.ಗಳ ಅನುದಾನ ಒದಗಿಸಲಾಗುವುದು.
ರಾಜ್ಯದ 17 ವೈದ್ಯಕೀಯ ಕಾಲೇಜು ಆಸ್ಪತ್ರೆಗಳ ನವಜಾತ ಶಿಶುವಿನ ತೀವ್ರ ನಿಗಾ ಘಟಕಗಳ ಹಂತ ಹಂತವಾಗಿ ಉನ್ನತೀಕರಣ ಹಾಗೂ ರಾಜ್ಯದ ವಿವಿಧ ಭಾಗಗಳಲ್ಲಿ ಮಂಗಳೂರಿನ ವಿಭಾಗೀಯ ಆಧುನಿಕ ಮಕ್ಕಳ ಆರೋಗ್ಯ ಕೇಂದ್ರದ ಮಾದರಿಯ ಕೇಂದ್ರಗಳ ಸ್ಥಾಪನೆ.
ಎಲ್ಲಾ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ತಲಾ ಮೂರು ಕೋಟಿ ರೂ. ವೆಚ್ಚದಲ್ಲಿ ಸಿಮ್ಯುಲೇಷನ್ ಲ್ಯಾಬ್ ಮತ್ತು ತಲಾ 30 ಲಕ್ಷ ರೂ. ವೆಚ್ಚದಲ್ಲಿ ಮಾಲಿಕ್ಯುಲಾರ್ ಬಯಾಲಜಿ ಲ್ಯಾಬ್ ಸ್ಥಾಪನೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಆರ್ಥಿಕ ನೆರವಿನೊಂದಿಗೆ ಚರ್ಮಶಾಸ್ತ್ರ ಮತ್ತು ಸೌಂದರ್ಯವರ್ಧಕ ಶಾಸ್ತ್ರದ ಸಂಸ್ಥೆ ಮತ್ತು ಜಿರಿಯಾಟ್ರಿಕ್ಸ್ ಸಂಸ್ಥೆಗಳ ಸ್ಥಾಪನೆ.
ವೈದ್ಯಕೀಯ, ಶುಶ್ರೂಷಾ, ಅರೆ-ವೈದ್ಯಕೀಯ ಮತ್ತು ಫಾರ್ಮಸಿ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಒಂದು ಕೇಂದ್ರೀಕೃತ ಉದ್ಯೋಗ ಕೋಶ ಸ್ಥಾಪನೆ.