ಬೆಂಗಳೂರು: ಎಂಜಿನಿಯರಿಂಗ್, ವೈದ್ಯಕೀಯ, ಪಾಲಿಟೆಕ್ನಿಕ್, ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಉಚಿತ ಲ್ಯಾಪ್‍ಟಾಪ್ ನೀಡುವುದಾಗಿ ಪ್ರಕಟಿಸಿದ್ದಾರೆ. ಹೀಗಾಗಿ ಇಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಉನ್ನತ ಶಿಕ್ಷಣಕ್ಕೆ ಬಜೆಟ್‍ನಲ್ಲಿ ಘೋಷಣೆಯಾದ ಅಂಶಗಳನ್ನು ನೀಡಲಾಗಿದೆ.
ಉನ್ನತ ಶಿಕ್ಷಣ- 4401 ಕೋಟಿ ರೂ.
– ಎಂಜಿನಿಯರಿಂಗ್, ವೈದ್ಯಕೀಯ, ಪಾಲಿಟೆಕ್ನಿಕ್ ಮತ್ತು ಪ್ರಥಮ ದರ್ಜೆ ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ 2017-18ನೇ ಸಾಲಿನಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ. 1.5 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ.
Advertisement
– ಹೈದರಾಬಾದ್ ಕರ್ನಾಟಕ ಯೋಜನೆಯಡಿ ರಾಯಚೂರಿನಲ್ಲಿ ವಿಶ್ವ ವಿದ್ಯಾನಿಲಯ ಸ್ಥಾಪನೆ. ಯಾದಗಿರಿ, ರಾಯಚೂರಿನ ಎಲ್ಲ ಕಾಲೇಜುಗಳು ಹೊಸ ವಿವಿ ವ್ಯಾಪ್ತಿಗೆ.
Advertisement
– 25 ಹೊಸ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳ ಸ್ಥಾಪನೆ – ತಲಾ 4 ಕೋಟಿ
– 23 ಮಹಿಳಾ ಸರ್ಕಾರಿ ಪಾಲಿಟೆಕ್ನಿಕ್ ಹಾಸ್ಟೆಲ್ ನಿರ್ಮಾಣ – ತಲಾ 2 ಕೋಟಿ
– ಬೆಂಗಳೂರು ವಿವಿಯ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜಿಗೆ 25 ಕೋಟಿ.
– ಧಾರವಾಡದ ಕರ್ನಾಟಕ ಕಾಲೇಜಿಗೆ 5 ಕೋಟಿ ಅನುದಾನ
Advertisement
– ಹಂಪಿ ಕನ್ನಡ ವಿವಿ ಬೆಳ್ಳಿಹಬ್ಬದ ಅಂಗವಾಗಿ 25 ಕೋಟಿ
– ಕರ್ನಾಟಕ ವಿವಿ ಮಹಾಯೋಗಿ ವೇಮನ ಅಧ್ಯಯನ ಪೀಠಕ್ಕೆ 7 ಕೋಟಿ
– ಕರ್ನಾಟಕ ವಿವಿಯಲ್ಲಿ ಸಾಹು ಮಹಾರಾಜರ ಅಧ್ಯಯನ ಪೀಠ ಸ್ಥಾಪನೆ.
– ಮಂಗಳೂರು ವಿವಿಯಲ್ಲಿ ಬ್ಯಾರಿ ಅಧ್ಯಯನ ಪೀಠ.
Advertisement
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ – 18,266 ಕೋಟಿ ರೂ.
– ಜುಲೈಯಿಂದ ಶಾಲಾ ಮಕ್ಕಳಿಗೆ ವಾರದಲ್ಲಿ 5 ದಿನ ಹಾಲು ವಿತರಣೆ
– ಬೇಸಿಗೆ, ರಜಾ ದಿನಗಳಿಗಾಗಿ ವಿಶ್ವಾಸ ಕಿರಣ ಯೋಜನೆ
– 1 ನೇ ತರಗತಿಯಿಂದ ಆಂಗ್ಲಭಾಷೆ ಪರಿಣಾಮಕಾರಿ ಯೋಜನೆ
– ಗ್ರಾಮಪಂಚಾಯ್ತಿ ಕೇಂದ್ರಗಳಲ್ಲಿ 12ನೇ ತರಗತಿವರೆಗೆ 176 ಸಂಯೋಜಿತ ಶಾಲೆಗಳು
– 1 ಸಾವಿರ ಪ್ರೌಢ ಶಾಲೆಗಳಿಗೆ ಮತ್ತು ಪಿಯು ಕಾಲೇಜುಗಳಲ್ಲಿ ಐಟಿ@ಸ್ಕೂಲ್
– ಶೂ ಮತ್ತು ಸಾಕ್ಸ್ ವಿತರಣೆ
– 8 ರಿಂದ 10ನೇ ತರಗತಿ ಹೆಣ್ಣುಮಕ್ಕಳಿಗೆ ಚೂಡಿದಾರ ಸಮವಸ್ತ್ರ ವಿತರಣೆ
– ಪ್ರಾಥಮಿಕೆ ಶಾಲೆಗಳಿಗೆ 10 ಸಾವಿರ, ಪ್ರೌಢಶಾಲೆಗಳಿಗೆ 1626, ಪಿಯುಗೆ 1191 ಉಪನ್ಯಾಸಕರನ್ನ ಎರಡು ಹಂತದಲ್ಲಿ ನೇಮಕ
– ಶಿಕ್ಷಣ ಕಿರಣ ಯೋಜನೆಯಡಿ ಶಿಕ್ಷಕರಿಗೆ ಬಯೋಮೆಟ್ರಿಕ್ ಹಾಜರಾತಿ.