ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ 2018-19ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಗೆ 22,350 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ.
ಹೋಸ ಯೋಜನೆಗಳು:
* ಒಂದೇ ಸೂರಿನಡಿ ವಿದ್ಯಾಭ್ಯಾಸ ಕಲ್ಪಿಸಿ ಶಿಕ್ಷಣದ ಗುಣಮಟ್ಟ ಉತ್ತಮಪಡಿಸಲು ಪ್ರಸಕ್ತ ವರ್ಷದಲ್ಲಿ ಗ್ರಾಮ ಪಂಚಾಯತಿ ಕೇಂದ್ರ ಸ್ಥಾನದಲ್ಲಿ 12ನೇ ತರಗತಿಯವರೆಗೆ 176 ಸಂಯೋಜಿತ ಶಾಲೆಗಳನ್ನು ಪ್ರಾರಂಭಿಸಲಾಗಿದೆ. 2018-19ನೇ ಸಾಲಿನಲ್ಲಿ ಇದನ್ನು ಮುಂದುವರೆಸುತ್ತಾ 100 ಸಂಯೋಜಿತ `ಕರ್ನಾಟಕ ಪಬ್ಲಿಕ್ ಶಾಲೆ’ ಗಳನ್ನು ಪ್ರತಿ ಶಾಲೆಗೆ 5 ಲಕ್ಷ ರೂ.ಗಳಂತೆ 5 ಕೋಟಿ ರೂ.ಗಳ ವೆಚ್ಚದಲ್ಲಿ ಪ್ರಾರಂಭಿಸಲಾಗುವುದು. ಇದಲ್ಲದೇ, ಈ ಶಾಲೆಗಳಲ್ಲಿ ವಿದ್ಯಾರ್ಥಿಗಳಲ್ಲಿ ವಿಶ್ವ ಭ್ರಾತೃತ್ವ ಸೇವಾ ಮನೋಭಾವ, ಶಾಂತಿ, ಶಿಸ್ತು, ಸಂಯಮ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಳೆಸಲು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳ ಪ್ರಾರಂಭ.
Advertisement
Advertisement
* ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಕ್ಕಳ ಸುರಕ್ಷತೆಯು ಸರ್ಕಾರದ ಪ್ರಥಮ ಆದ್ಯತೆಯಾಗಿದೆ. ಇದಕ್ಕಾಗಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಹಂತ ಹಂತವಾಗಿ ಸಿಸಿಟಿವಿ ಕ್ಯಾಮರಾಗಳ ಅಳವಡಿಕೆ.
Advertisement
* ರಾಜ್ಯ ಕೇಂದ್ರ ಗ್ರಂಥಾಲಯಗಳ ಶತಮಾನೋತ್ಸವ ಸ್ಮರಣಾರ್ಥವಾಗಿ ಜಿಲ್ಲಾ, ನಗರ ಮತ್ತು ತಾಲೂಕು ಸಾರ್ವಜನಿಕ ಗ್ರಂಥಾಲಯಗಳನ್ನು ಡಿಜಿಟಲ್ ಗ್ರಂಥಾಲಯಗಳನ್ನಾಗಿ ಮೇಲ್ದರ್ಜೆಗೆ. ಪ್ರಪ್ರಥಮ ಬಾರಿಗೆ ಅಂತರ್ಜಾಲದ ಕ್ಲೌಡ್ ಮೂಲಕ ರಾಜ್ಯದಲ್ಲಿರುವ ಸರ್ಕಾರಿ ಪ್ರೌಢ ಶಾಲೆಗಳಿಗೆ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಸಂಪರ್ಕ ನೀಡಿ ಅಂದಾಜು 10 ಲಕ್ಷ ವಿದ್ಯಾರ್ಥಿಗಳಿಗೆ ಡಿಜಿಟಲ್ ಗ್ರಂಥಾಲಯ ಸೌಲಭ್ಯ. ಈ ಉದ್ದೇಶಕ್ಕೆ 5 ಕೋಟಿ ರೂ.ಗಳನ್ನು ಒದಗಿಸಿದೆ.
Advertisement
* ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವ ಪ್ರತಿ ತಾಲೂಕಿನ ಒಂದು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗೆ (ಎಸ್.ಡಿ.ಎಂ.ಸಿ) `ಅತ್ಯುತ್ತಮ ಎಸ್.ಡಿ.ಎಂ.ಸಿ’ ಪ್ರಶಸ್ತಿಯನ್ನು ನೀಡಲು ಉದ್ದೇಶಿಸಿದೆ.
* ರಾಜ್ಯದಲ್ಲಿ ನೂರು ವರ್ಷಗಳನ್ನು ಪೂರೈಸಿರುವ 100 ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು `ಪಾರಂಪರಿಕ ಶಾಲೆ’ ಗಳೆಂದು ಗುರುತಿಸಿ, ಅವುಗಳನ್ನು ಹಂತ ಹಂತವಾಗಿ ನವೀಕರಿಸಿ ಸಂರಕ್ಷಣೆ.
* ಶಾಲಾ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸಲು, ಎಲ್ಲಾ ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ಸಮಿತಿಗಳ ಪ್ರಾರಂಭ ಹಾಗೂ ಅಗಸ್ತ್ಯ ಫೌಂಡೇಶನ್ ಸಹಭಾಗಿತ್ವದೊಂದಿಗೆ ಎಲ್ಲಾ ಜಿಲ್ಲೆಗಳಲ್ಲಿ 7.5 ಕೋಟಿ ರೂ.ಗಳ ವೆಚ್ಚದಲ್ಲಿ ಸಂಚಾರಿ ವಿಜ್ಞಾನ ಪ್ರಯೋಗಾಲಯಗಳ ಸ್ಥಾಪನೆ.