ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 2018-19ನೇ ಸಾಲಿನ ಬಜೆಟ್ ನಲ್ಲಿ ಉನ್ನತ ಶಿಕ್ಷಣ ಇಲಾಖೆಗೆ 4,514 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದಾರೆ.
ಹೊಸ ಯೋಜನೆಗಳು
* ಸಾಮಾಜಿಕ ಸಮಾನತೆಯ ಹರಿಕಾರ, ಪ್ರಪಂಚದಲ್ಲಿಯೇ ಪ್ರಪ್ರಥಮವಾಗಿ ಸಂಸದೀಯ ವ್ಯವಸ್ಥೆಯನ್ನು ಜಾರಿಗೆ ತಂದಿರುವ ಕ್ರಾಂತಿಯೋಗಿ ಶ್ರೀ ಬಸವಣ್ಣನವರ ಚಿಂತನೆಗಳು ನಾಡಿನಾದ್ಯಂತ ಪಸರಿಸಲು, ಅವರ ಚಿಂತನೆಗಳನ್ನು ಇನ್ನೂ ಹೆಚ್ಚಿನ ಅಧ್ಯಯನಕ್ಕೆ ಒಳಪಡಿಸಲು ಅನುಕೂಲವಾಗುವಂತೆ ಮೈಸೂರು ವಿಶ್ವವಿದ್ಯಾಲಯದಲ್ಲಿ ಬಸವ ಅಧ್ಯಯನ ಕೇಂದ್ರವನ್ನು ಸ್ಥಾಪಿಸಲು 2 ಕೋಟಿ ರೂ. ಅನುದಾನ. ಇದನ್ನೂ ಓದಿ: ಕರ್ನಾಟಕ ಬಜೆಟ್ ಮುಖ್ಯಾಂಶಗಳು: ರೈತರ ಸಾಲ ಮನ್ನಾ
Advertisement
* ರಾಜ್ಯದಲ್ಲಿ ಉನ್ನತ ಶಿಕ್ಷಣವನ್ನು ಇನ್ನು ಹೆಚ್ಚು ಉತ್ಕೃಷ್ಟಗೊಳಿಸಲು ಚಿಕ್ಕಮಗಳೂರಿನಲ್ಲಿ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರವನ್ನು ಹಾಗೂ ಬಾಗಲಕೋಟೆಯ ಜಮಖಂಡಿಯಲ್ಲಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರವನ್ನು ಸ್ಥಾಪಿಸಲು ತಲಾ 1ಕೋಟಿ ರೂ. ಅನುದಾನ. ಇದನ್ನೂ ಓದಿ: ರಾಜ್ಯ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ಬಂಪರ್ ಆಫರ್- ಹೊಸ ಯೋಜನೆಗಳೇನು?
Advertisement
* ಹೆಚ್ಚಿನ ಸಂಖ್ಯೆಯಲ್ಲಿ ಹೆಣ್ಣುಮಕ್ಕಳು ಉನ್ನತ ಶಿಕ್ಷಣ ಪಡೆಯುವುದನ್ನು ಉತ್ತೇಜಿಸಲು ಎಲ್ಲಾ ಸರ್ಕಾರಿ ಕಾಲೇಜುಗಳಲ್ಲಿ ಪದವಿ ಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶ ಪಡೆಯುವ ಎಲ್ಲಾ ವಿದ್ಯಾರ್ಥಿನಿಯರಿಗೆ ಪೂರ್ಣ ಶುಲ್ಕ ವಿನಾಯಿತಿ ನೀಡಲಾಗಿದೆ. ಇದರಿಂದ 95 ಕೋಟಿ ರೂ.ಗಳ ವೆಚ್ಚದಲ್ಲಿ 3.7 ಲಕ್ಷ ವಿದ್ಯಾರ್ಥಿನಿಯರು ಪ್ರಯೋಜನವನ್ನು ಪಡೆಯಲಿದ್ದಾರೆ. ಇದನ್ನೂ ಓದಿ: ರಾಜ್ಯ ಬಜೆಟ್: ತೋಟಗಾರಿಕಾ ಇಲಾಖೆ ಹೊಸ ಯೋಜನೆಗಳು ಇಲ್ಲಿವೆ
Advertisement
* ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಕೊಂಕಣಿ ಅಧ್ಯಯನ ಪೀಠವನ್ನು ಸ್ಥಾಪಿಸಲಾಗುವುದಾಗಿ ತಮ್ಮ ಬಜೆಟ್ ನಲ್ಲಿ ಸಿಎಂ ತಿಳಿಸಿದ್ದಾರೆ.