ಬೆಂಗಳೂರು: ವಿಶ್ವ ವಿಖ್ಯಾತ ಮೈಸೂರಿನ ಪ್ರವಾಸಿ ತಾಣಗಳನ್ನು ಇನ್ನು ಮುಂದೆ ಡಬಲ್ ಡೆಕ್ಕರ್ ಬಸ್ಸಿನಲ್ಲಿ ವೀಕ್ಷಣೆ ಮಾಡಬಹುದು. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ(ಕೆಎಸ್ಟಿಡಿಸಿ) ವತಿಯಿಂದ ಮೈಸೂರಿನಲ್ಲಿ ಲಂಡನ್ ಬಿಗ್ ಬಸ್ ಮಾದರಿಯ 6 ಡಬಲ್ ಡೆಕ್ಕರ್ ತೆರೆದ ಬಸ್ ಸೇವೆ ಆರಂಭಿಸಲು 5 ಕೋಟಿ ರೂ. ಅನುದಾನವನ್ನು ಸಿಎಂ ಬಜೆಟ್ ನಲ್ಲಿ ಘೋಷಿಸಿದ್ದಾರೆ.
ಪ್ರವಾಸೋದ್ಯಮಕ್ಕೆ ಸಿಕ್ಕಿದ್ದು ಏನು?
ಬಾದಾಮಿಯನ್ನು ವಿಶ್ವವಿಖ್ಯಾತ ಪ್ರವಾಸಿ ತಾಣವನ್ನಾಗಿ ಮತ್ತು ಕರಕುಶಲ ಮಾರುಕಟ್ಟೆಯನ್ನಾಗಿ ಅಭಿವೃದ್ಧಿ ಪಡಿಸಲು 25 ಕೋಟಿ ರೂ. ಅನುದಾನ.
Advertisement
Advertisement
ಪ್ರವಾಸಿಗರನ್ನು ಆಕರ್ಷಿಸಲು ‘ಕರ್ನಾಟಕ ಅಂತರಾಷ್ಟ್ರೀಯ ಪ್ರವಾಸೋದ್ಯಮ ಪ್ರದರ್ಶನ’ ಆಯೋಜನೆಗೆ 2 ಕೋಟಿ ರೂ. ಅನುದಾನ. ಹಂಪಿಯಲ್ಲಿ ‘ಹಂಪಿ ವ್ಯಾಖ್ಯಾನ ಕೇಂದ್ರ’ ಹಾಗೂ ವಿಜಯಪುರದಲ್ಲಿ ‘ವಿಜಯಪುರ ಪ್ರವಾಸೋದ್ಯಮ ವ್ಯಾಖ್ಯಾನ ಕೇಂದ್ರ ವನ್ನು ಸ್ಥಾಪಿಸಲು ತಲಾ 1 ಕೋಟಿ ರೂ. ಅನುದಾನ.
Advertisement
ಪಣಂಬೂರು ಮತ್ತು ಸಸಿಹಿತ್ಲುವಿನಲ್ಲಿ ಕಡಲ ತೀರದ ಪ್ರವಾಸೋದ್ಯಮ ಅಭಿವೃದ್ಧಿಗೆ 7 ಕೋಟಿ ರೂ. ಅನುದಾನ. ಇಲಾಖೆಯ ಒಟ್ಟು 834 ಸಂರಕ್ಷಿತ ಸ್ಮಾರಕಗಳಲ್ಲಿ, 600 ಸ್ಮಾರಕಗಳ ಸಮೀಕ್ಷೆ ಹಾಗೂ ಸಂರಕ್ಷಣೆಗೆ ಕ್ರಮ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv