ಬೆಂಗಳೂರು: ಮುಖ್ಯಮಂತ್ರಿಗಳ ಮಾತೃಶ್ರೀ ಯೋಜನೆಯ ಸಹಾಯಧನ ಮಾಸಿಕ 1 ಸಾವಿರ ರೂ. ಗಳಿಂದ 2 ಸಾವಿರ ರೂ. ಗಳಿಗೆ ಹೆಚ್ಚಳ ಮಾಡಲಾಗುವುದು. 2019ರ ನವೆಂಬರ್ 1ರಿಂದ ಜಾರಿಯಾಗಲಿರುವ ಈ ಯೋಜನೆಗೆ 470 ಕೋಟಿ ರೂ. ಅನುದಾನ ನೀಡುವುದಾಗಿ ಸಿಎಂ ಹೇಳಿದ್ದಾರೆ.
ಸಿಕ್ಕಿದ್ದು ಏನು?
ಅಂಗನವಾಡಿ ಕಾರ್ಯಕರ್ತೆಯರಿಗೆ 500 ರೂ. ಹಾಗೂ ಸಹಾಯಕಿಯರಿಗೆ 250 ರೂ. ಗೌರವಧನ 2019ರ ನವೆಂಬರ್ 1 ರಿಂದ ಹೆಚ್ಚಳ. 60 ಕೋಟಿ ರೂ. ಹೆಚ್ಚುವರಿ ಅನುದಾನ.
Advertisement
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಎಲ್ಲ ಮಟ್ಟದ ಕರ್ಮಚಾರಿಗಳಿಗೆ ತರಬೇತಿ ನೀಡಲು ಬಳ್ಳಾರಿಯಲ್ಲಿ ರಾಜ್ಯಮಟ್ಟದ ತರಬೇತಿ ಕೇಂದ್ರ ಹಾಗೂ ಚಿತ್ರದುರ್ಗ, ಮೈಸೂರು, ಬೆಳಗಾವಿ ಮತ್ತು ಕಲಬುರಗಿಯಲ್ಲಿ ವಿಭಾಗ ಮಟ್ಟದ ತರಬೇತಿ ಕೇಂದ್ರ ಪ್ರಾರಂಭಿಸಲು 5 ಕೋಟಿ ರೂ. ಅನುದಾನ.
Advertisement
Advertisement
ನಗರ ಪ್ರದೇಶಗಳಲ್ಲಿ 100 ಹೊಸ ಅಂಗನವಾಡಿ ಕೇಂದ್ರ ಪ್ರಾರಂಭಿಸಲು ಕ್ರಮ. 1000 ಅಂಗನವಾಡಿ ಕಟ್ಟಡಗಳ ದುರಸ್ತಿ ಕಾಮಗಾರಿಗೆ 10 ಕೋಟಿ ರೂ. ಅನುದಾನ.
Advertisement
ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೊಸ ಬಾಲಕಿಯರ ಬಾಲಮಂದಿರ ಪ್ರಾರಂಭಿಸಲು ಕ್ರಮ. ರಾಜ್ಯದ 10 ಜಿಲ್ಲೆಗಳ ಮಕ್ಕಳ ವಿಶೇಷ ನ್ಯಾಯಾಲಯಗಳನ್ನು ಮಕ್ಕಳ -ಸ್ನೇಹಿ ನ್ಯಾಯಾಲಯಗಳನ್ನಾಗಿ ಪರಿವರ್ತಿಸಲು ಒಟ್ಟು 3 ಕೋಟಿ ರೂ. ಅನುದಾನ
ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ. ಇಲಾಖೆ ವತಿಯಿಂದ ಪ್ರಾಸ್ಥೆಟಿಕ್ಸ್ ಮತ್ತು ಆರ್ಥೊಟಿಕ್ಸ್ ಸರ್ಟಿಫಿಕೇಟ್ ಕೋರ್ಸ್‍ಗಳನ್ನು ಪ್ರಾರಂಭಿಸಲು ಕ್ರಮ. ಇಲಾಖೆಯು ಖಾಸಗಿ ಸಹಯೋಗದಿಂಗೆ ನಡೆಸುತ್ತಿರುವ ತರಬೇತಿ ಕೇಂದ್ರಗಳಲ್ಲಿ ಶ್ರವಣ ದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಹಾಗೂ ಬುದ್ಧಿಮಾಂದ್ಯ ಮಕ್ಕಳ ಶಿಕ್ಷಕರ ತರಬೇತಿ ಕಾರ್ಯಕ್ರಮವನ್ನು ಕೈಗೊಳ್ಳಲಾಗುವುದು.
ರಾಜ್ಯದಲ್ಲಿ ಬೆನ್ನುಹುರಿ ಅಪಘಾತಕ್ಕೆ ಒಳಗಾದವರ, ಹೆಮಿಪ್ಲೆಜಿಯಾ, ಮಲ್ಟಿಪಲ್ ಸ್ಲೆರೋಸಿಸ್, ಹಾಗೂ ಅಮಿಯೋಟ್ರೋಪಿಕ್ ಲ್ಯಾಟರಲ್ ಸ್ಲೆರೋಸಿಸ್ ಖಾಯಿಲೆಗಳಿಂದ ಬಳಲುತ್ತಿರುವ ರೋಗಿಗಳ ಪುನರ್ವಸತಿ ಕೇಂದ್ರ ಪ್ರಾರಂಭಿಸಲು 2 ಕೋಟಿ ರೂ. ಅನುದಾನ.
2,000 ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ(ರೆಟ್ರೋಫಿಟೆಡ್) ಉಚಿತವಾಗಿ ನೀಡಲು 15 ಕೋಟಿ ರೂ. ಅನುದಾನ. 1,000 ದಮನಿತ ಮಹಿಳೆಯರಿಗೆ ಉದ್ಯಮಶೀಲತೆ ಮತ್ತು ಕೌಶಲ್ಯ ತರಬೇತಿ ಹಾಗೂ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ನೆರವು ನೀಡಲು 11.5 ಕೋಟಿ ರೂ. ಅನುದಾನ; ರಾಜ್ಯ ಸರ್ಕಾರದ ವಸತಿ ಯೋಜನೆಗಳಲ್ಲಿ ದಮನಿತ ಮಹಿಳೆಯರಿಗೆ ಮೀಸಲಾತಿ ನೀಡಲು ಕ್ರಮ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv