ಬೆಂಗಳೂರು: ಪ್ರತಿವರ್ಷ ಬಜೆಟ್ ನಲ್ಲಿ ಇಲಾಖೆಗಳಿಗೆ ಅನುದಾನ ಪ್ರಕಟವಾಗುತ್ತಿತ್ತು. ಆದರೆ ಈ ಬಾರಿ ಇಲಾಖೆಗಳಿಗೆ ಪ್ರತ್ಯೇಕವಾಗಿ ಪ್ರಕಟವಾಗದೇ 6 ವಲಯಗಳಾಗಿ ವಿಂಗಡಿಸಿ ಅನುದಾನವನ್ನು ಪ್ರಕಟಿಸಲಾಗಿದೆ.
ಬಜೆಟ್ ಭಾಷಣದಲ್ಲಿ ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಲು 6 ವಲಯಗಳನ್ನಾಗಿ ವಿಂಗಡನೆ ಮಾಡಿ ಬಜೆಟ್ ಮಂಡಿಲಸಲಾಗಿದೆ ಎಂದು ತಮ್ಮ ನಿರ್ಧಾರಕ್ಕೆ ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಮಹದಾಯಿಗೆ 500 ಕೋಟಿ, ಎತ್ತಿನಹೊಳೆಗೆ 1500 ಕೋಟಿ – ನೀರಾವರಿಗೆ ಸಿಕ್ಕಿದ್ದು ಏನು?
Advertisement
Advertisement
ಈ ವರ್ಷ 2,37,893 ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ್ದರೆ, ಕಳೆದ ವರ್ಷ ಕುಮಾರಸ್ವಾಮಿ 2,34,153 ಕೋಟಿ ರೂ. ಗಾತ್ರದ ಬಜೆಟ್ ಮಂಡಿದ್ದರು. ಇದನ್ನೂ ಓದಿ: ಸಂಚಾರಿ ಕೃಷಿ ಹೆಲ್ತ್ ಕ್ಲಿನಿಕ್, ಸಣ್ಣ ರೈತರಿಗೆ 10 ಸಾವಿರ – ಕೃಷಿಗೆ ಸಿಕ್ಕಿದ್ದು ಏನು?
Advertisement
1. ಕೃಷಿ ಮತ್ತು ಪೂರಕ ಚಟುವಟಿಕೆ – 32,259 ಕೋಟಿ ರೂ.
2. ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ – 72,093 ಕೋಟಿ ರೂ.
3. ಆರ್ಥಿಕ ಅಭಿವೃದ್ಧಿಗೆ ಪ್ರಚೋದನೆ – 55,732 ಕೋಟಿ ರೂ.
4. ಬೆಂಗಳೂರು ಸಮಗ್ರ ಅಭಿವೃದ್ಧಿ – 8,772 ಕೋಟಿ ರೂ.
5. ಸಂಸ್ಕೃತಿ, ಪರಂಪರೆ ಹಾಗೂ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ – 4,552 ಕೋಟಿ ರೂ.
6. ಆಡಳಿತ ಸುಧಾರಣೆ, ಸಾರ್ವಜನಿಕ ಸೇವೆ – 10,194 ಕೋಟಿ ರೂ.