ಮಂಡ್ಯ: ಕೆಆರ್‌ಪೇಟೆ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ನೀಡಿದ್ದ ಆಶ್ವಾಸನೆಗಳನ್ನು ಇಂದಿನ ರಾಜ್ಯ ಬಜೆಟ್‍ನಲ್ಲಿ ಹುಸಿಗೊಳಿಸಿದ್ದಾರೆ.
ಮಂಡ್ಯ ನಾನು ಜನಿಸಿದ ಜಿಲ್ಲೆ, ಈ ಜಿಲ್ಲೆಯನ್ನು ಅಭಿವೃದ್ಧಿಗೊಳಿಸುವುದು ನನ್ನ ಕರ್ತವ್ಯ. ಹೀಗಾಗಿ ನಾನು ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿ ಮಾಡುತ್ತೇನೆ. ಎರಡು ಸಕ್ಕರೆ ಕಾರ್ಖಾನೆಗಳನ್ನು ಪುನರಾಂಭ ಮಾಡುತ್ತೇನೆ. ಹೀಗಾಗಿ ನಾರಾಯಣಗೌಡ ಅವರನ್ನು ಗೆಲ್ಲಿಸಿ ಎಂದು ಕೆಆರ್‌ಪೇಟೆ ಉಪಚುನಾವಣೆಯಲ್ಲಿ ಯಡಿಯೂರಪ್ಪ ಅವರು ಜಿಲ್ಲೆಯ ಜನರಿಗೆ ಆಶ್ವಾಸನೆ ನೀಡಿದ್ದರು. ಇದನ್ನೂ ಓದಿ: ಮಾರಾಟ ತೆರಿಗೆ ಏರಿಕೆ – ಹೆಚ್ಚಳವಾಗಲಿದೆ ಪೆಟ್ರೋಲ್, ಡೀಸೆಲ್ ದರ
Advertisement
Advertisement
ಆದರೆ ಇಂದು ನಡೆದ ಬಜೆಟ್‍ನಲ್ಲಿ ಸಕ್ಕರೆ ನಾಡಿಗೆ ಯಾವುದೇ ಉಡುಗೊರೆ ನೀಡಿಲ್ಲ. ಅಲ್ಲದೇ ಮುಚ್ಚಿರುವ ಮೈ ಶುಗರ್ ಹಾಗೂ ಪಿಎಸ್‍ಎಸ್‍ಕೆ ಕಾರ್ಖಾನೆಗಳನ್ನು ಪ್ರಾರಂಭ ಮಾಡುವುದರ ಬಗ್ಗೆಯೂ ಯಾವುದೇ ಪ್ರಸ್ತಾಪ ಸಹ ಆಗಿಲ್ಲ. ಇದರಿಂದ ಮಂಡ್ಯ ಜಿಲ್ಲೆಯ ಕಬ್ಬು ಬೆಳೆಗಾರರು ಹಾಗೂ ರೈತರ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ಹೀಗಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.