ಮಹಿಳಾ ಗಾರ್ಮೆಂಟ್ ನೌಕರರಿಗೆ ಉಚಿತ ಬಿಎಂಟಿಸಿ ಪಾಸ್ – ಮಹಿಳೆಯರಿಗೆ ಮಕ್ಕಳಿಗೆ ಸಿಕ್ಕಿದ್ದು ಏನು?

Public TV
3 Min Read
BMTC 1

– 7 ಹೊಸ ಬಾಲಮಂದಿರಗಳ ಸ್ಥಾಪನೆ

ಬೆಂಗಳೂರು: ರಾಜ್ಯದ ಇತಿಹಾಸದಲ್ಲಿ ಪ್ರಥಮ ಬಾರಿಗೆ ಮಕ್ಕಳ ಆಯವ್ಯಯವನ್ನು ಸಿಎಂ ಯಡಿಯೂರಪ್ಪ ಮಂಡಿಸಿದ್ದಾರೆ. ರಾಜ್ಯದಲ್ಲಿರುವ 18 ವರ್ಷದ ಕೆಳಗಿರುವ ಎಲ್ಲಾ ಮಕ್ಕಳ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆ ಅಡಕವಾಗಿದ್ದು, 2020-21ನೇ ಸಾಲಿನ ಆಯವ್ಯಯದಲ್ಲಿ 36,340 ಕೋಟಿ ರೂ.ಗಳ 279 ಕಾರ್ಯಕ್ರಮಗಳ ಪ್ರಸ್ತಾಪ. ಇದು ಒಟ್ಟಾರೆ ಆಯವ್ಯಯ ಗಾತ್ರದ 15.28 ರಷ್ಟು.

ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ರಾಜ್ಯದಲ್ಲಿ ಏಳು ಹೊಸ ಬಾಲಮಂದಿರಗಳ ಸ್ಥಾಪನೆ. 5.67 ಕೋಟಿ ರೂ. ಅನುದಾನ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿಯಲ್ಲಿ ಬೆಂಗಳೂರಿನ ಹೊಸೂರು ರಸ್ತೆಯಲ್ಲಿರುವ ಸುಧಾರಣಾ ಸಂಸ್ಥೆಗಳ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್. ಐದು ಕೋಟಿ ರೂ. ಅನುದಾನ. ಇದನ್ನೂ ಓದಿ: ಶಿರಸಿಯಲ್ಲಿ 200 ಬೆಡ್ ಆಸ್ಪತ್ರೆ, ಟೆಲಿಮೆಡಿಸನ್ ಸೇವೆ ವಿಸ್ತರಣೆ – ವೈದ್ಯಕೀಯ ಕ್ಷೇತ್ರಕ್ಕೆ ಸಿಕ್ಕಿದ್ದು ಏನು?

BMTC 1 2

ಬಾಲಮಂದಿರದಿಂದ 21 ವರ್ಷ ತುಂಬಿದ ನಂತರ ಬಿಡುಗಡೆ ಹೊಂದುವವರಿಗೆ ಜೀವನೋಪಾಯ ರೂಪಿಸಿಕೊಳ್ಳಲು “ಉಪಕಾರ” ಯೋಜನೆಯಡಿ ಮೂರು ವರ್ಷ ಅವಧಿಗೆ ಮಾಸಿಕ 5000 ರೂ. ಆರ್ಥಿಕ ನೆರವು; ಕೌಶಲ್ಯಾಭಿವೃದ್ಧಿ ತರಬೇತಿಗೆ ಕ್ರಮ. ಒಂದು ಕೋಟಿ ರೂ. ಅನುದಾನ. ಅಂಗನವಾಡಿಗಳಿಗೆ ಪೌಷ್ಟಿಕ ಆಹಾರ ಪದಾರ್ಥಗಳನ್ನು ಸರಬರಾಜು ಮಾಡುವ ಮಹಿಳಾ ಪೂರಕ ಪೌಷ್ಟಿಕ ಉತ್ಪಾದನಾ ಕೇಂದ್ರಗಳ ಆಧುನೀಕರಣಕ್ಕೆ ಮಹಿಳಾ ಅಭಿವೃದ್ಧಿ ನಿಗಮದಿಂದ 20 ಲಕ್ಷ ರೂ. ವರೆಗೆ ಬಡ್ಡಿ ರಹಿತ ಕಿರು ಸಾಲ ಸೌಲಭ್ಯ. 20 ಕೋಟಿ ರೂ. ಅನುದಾನ.

ನೆರೆಹಾವಳಿಯಿಂದ ಹಾನಿಯಾದ 842 ಅಂಗನವಾಡಿ ಕೇಂದ್ರಗಳ ಪುನರ್ ನಿರ್ಮಾಣಕ್ಕೆ 138 ಕೋಟಿ ರೂ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಎಲ್ಲಾ ಕಾರ್ಯಕ್ರಮಗಳನ್ನು ಪಾರದರ್ಶಕವಾಗಿ ಮಹಿಳೆಯರಿಗೆ ತಲುಪಿಸಲು ಮಹಿಳಾ ಸುರಕ್ಷತಾ ಪೋರ್ಟಲ್ ಪ್ರಾರಂಭ. ಇದನ್ನೂ ಓದಿ: ಇಲಾಖಾವಾರು ಹಣ ವಿಂಗಡಣೆ ಇಲ್ಲ: 6 ವಲಯಕ್ಕೆ ಕೊಟ್ಟಿದ್ದೆಷ್ಟು?

education school childrens

ಸ್ತ್ರೀಶಕ್ತಿ ಸ್ವ-ಸಹಾಯ ಸಂಘದ ಉತ್ಪನ್ನಗಳನ್ನು ಸರ್ಕಾರದ ಇಲಾಖೆಗಳಲ್ಲಿ ಅವಶ್ಯಕತೆಗನುಸಾರ ಖರೀದಿಸಲು ಕ್ರಮ. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಟ್ರಾನ್ಸ್ ಜೆಂಡರ್ರವರ ಮೂಲಹಂತದ ಸಮೀಕ್ಷೆ ಕೈಗೊಳ್ಳಲು 70 ಲಕ್ಷ ರೂ. ಅನುದಾನ.

ಶ್ರವಣದೋಷವುಳ್ಳ ವ್ಯಕ್ತಿಗಳ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ವಿತರಿಸಲು 60 ಲಕ್ಷ ರೂ. ಅನುದಾನ. ದೃಷ್ಟಿದೋಷವುಳ್ಳ ವ್ಯಕ್ತಿಗಳಿಗಾಗಿ ಬೆಂಗಳೂರಿನಲ್ಲಿ ಹಾಗೂ ಕಲಬುರಗಿಯಲ್ಲಿ 30 ಲಕ್ಷ ರೂ.ಗಳ ವೆಚ್ಚದಲ್ಲಿ ಬ್ರೈಲ್ ಕಂ ಟಾಕಿಂಗ್ ಲೈಬ್ರರಿ ಸ್ಥಾಪನೆ. ಮೈಸೂರಿನ ಸರ್ಕಾರಿ ಬ್ರೈಲ್ ಮುದ್ರಣಾಲಯಕ್ಕೆ 80 ಲಕ್ಷ ರೂ.ಗಳ ವೆಚ್ಚದಲ್ಲಿ ಆಧುನಿಕ ಮುದ್ರಣ ಯಂತ್ರ ಖರೀದಿ. ಇದನ್ನೂ ಓದಿ: ಮಹದಾಯಿಗೆ 500 ಕೋಟಿ, ಎತ್ತಿನಹೊಳೆಗೆ 1500 ಕೋಟಿ – ನೀರಾವರಿಗೆ ಸಿಕ್ಕಿದ್ದು ಏನು?

Private School Students

ರಾಜ್ಯದ 500 ಅಂಧ ವಿದ್ಯಾರ್ಥಿಗಳಿಗೆ ತಲಾ 25,000 ರೂ.ಗಳ ಮೊತ್ತದ ಟಾಕಿಂಗ್ ಮೊಬೈಲ್, ಬ್ರೈಲ್ ವಾಚ್ ಹಾಗೂ ವಾಕಿಂಗ್ ಸ್ಟಿಕ್‍ಗಳನ್ನೊಳಗೊಂಡ ಕಿಟ್ ವಿತರಣೆ. 1.25 ಕೋಟಿ ರೂ. ಅನುದಾನ. ಅಂಧ ತಾಯಂದಿರಿಗೆ ನೀಡುವ ಮಾಸಿಕ 2000 ರೂ. ಶಿಶುಪಾಲನಾ ಭತ್ಯೆ ಯೋಜನೆ ಮಗುವಿನ ಮೊದಲ ಎರಡು ವರ್ಷಗಳಿಂದ ಐದು ವರ್ಷದ ವರೆಗೆ ವಿಸ್ತರಣೆ.

“ಮುಖ್ಯಮಂತ್ರಿಗಳ ಆರೋಗ್ಯ ಸುರಕ್ಷಾ” ಯೋಜನೆಯಡಿಯಲ್ಲಿ ಒಂದು ಲಕ್ಷ ನೋಂದಾಯಿತ ಕಟ್ಟಡ ಕಾರ್ಮಿಕರು ಮತ್ತು ಅವರ ಕುಟುಂಬದ ಸದಸ್ಯರುಗಳಿಗೆ ಅನುಮೋದಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು “ಉಚಿತ ಪ್ರಿಪೇಯ್ಡ್ ಹೆಲ್ತ್ ಕಾರ್ಡ್” ವಿತರಣೆ. “ವನಿತಾ ಸಂಗಾತಿ” ಯೋಜನೆಯಡಿ ಗಾರ್ಮೆಂಟ್ ಉದ್ಯಮಗಳಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಕಾರ್ಮಿಕರಿಗೆ ಉಚಿತ ಬಿಎಂಟಿಸಿ ಮಾಸಿಕ ಬಸ್ ಪಾಸ್ ವಿತರಣೆಗೆ 25 ಕೋಟಿ ರೂ. ಅನುದಾನ.

SSLC STUDENTS 6

ನಗರ ಪ್ರದೇಶಗಳಲ್ಲಿ ದುಡಿಯುತ್ತಿರುವ ಕಟ್ಟಡ ಕಾರ್ಮಿಕರು ಮತ್ತು ಅವರ ಕುಟುಂಬಸ್ಥರ ಆರೋಗ್ಯ ರಕ್ಷಣೆಗೆ 10 “ಮೊಬೈಲ್ ಕ್ಲಿನಿಕ್” ಪ್ರಾರಂಭ. ಕಟ್ಟಡ ಕಾರ್ಮಿಕರ ಮಕ್ಕಳ ಪಾಲನೆಗೆ ಕಟ್ಟಡ ನಿರ್ಮಾಣ. ಸ್ಥಳದಲ್ಲಿ 10 ಸಂಚಾರಿ ಶಿಶುಪಾಲನಾ ಕೇಂದ್ರಗಳನ್ನು ಒಳಗೊಂಡಂತೆ ಒಟ್ಟು 110 “ಕಿತ್ತೂರು ರಾಣಿ ಚೆನ್ನಮ್ಮ” ಶಿಶು ಪಾಲನಾ ಕೇಂದ್ರಗಳ ಸ್ಥಾಪನೆ.

“ಆಹಾರ” ತಂತ್ರಾಂಶ ಉನ್ನತೀಕರಿಸಲು ಕ್ರಮ. ಕಾನೂನು ಮಾಪನ ಶಾಸ್ತ್ರ ಇಲಾಖೆಯ ಚಟುವಟಿಕೆಗಳ ಮೇಲ್ವಿಚಾರಣೆ ಮತ್ತು ಉಸ್ತುವಾರಿ ಬಿಗಿಗೊಳಿಸಲು “ಇ-ಮಾಪನ” ತಂತ್ರಾಂಶ ಉನ್ನತೀಕರಣ.

Share This Article
Leave a Comment

Leave a Reply

Your email address will not be published. Required fields are marked *