ಬೆಂಗಳೂರು: 100 ಆಳ ಸಮುದ್ರ ಮೀನುಗಾರಿಕಾ ದೋಣಿಗಳಿಗೆ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯೊಂದಿಗೆ ಸಂಯೋಜಿಸಿ “ಮತ್ಸ್ಯ ಸಿರಿ” ಎಂಬ ವಿಶೇಷ ಯೋಜನೆ ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ರೂಪಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
Advertisement
ಬೊಮ್ಮಾಯಿ ಹೇಳಿದ್ದೇನು?
300 ಕಿ.ಮೀ.ಗೂ ಹೆಚ್ಚು ಉದ್ದದ ಕರಾವಳಿ ತೀರವನ್ನು ಹೊಂದಿರುವ ಕರ್ನಾಟಕದಲ್ಲಿ ಪ್ರಸ್ತುತ ಬಹುತೇಕ ಮೀನು ಉತ್ಪಾದನೆಯು ತೀರ ಸಮೀಪದ ನೀರಿನಲ್ಲಿಯೇ ಆಗುತ್ತಿದ್ದು, ಆಳಸಮುದ್ರ ಮೀನುಗಾರಿಕೆಯಲ್ಲಿ ಸಾಮಥ್ರ್ಯ ವೃದ್ಧಿಗೆ ವಿಫುಲ ಅವಕಾಶಗಳಿವೆ. ಈ ನಿಟ್ಟಿನಲ್ಲಿ ಆಳಸಮುದ್ರ ಮೀನುಗಾರಿಕೆಯನ್ನು ಇನ್ನಷ್ಟು ಪ್ರಚುರ ಪಡಿಸಿ, ವಿಶೀಷ್ಟ ತಳಿಗಳ ಮೀನು ಮತ್ತು ಚಿಪ್ಪು ಮೀನುಗಳ ಉತ್ಪಾದನೆಯ ಮೂಲಕ ಮೀನುಗಾರರ ಆದಾಯವನ್ನು ಹೆಚ್ಚಿಸಲು ನಮ್ಮ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ 100 ಆಳ ಸಮುದ್ರ ಮೀನುಗಾರಿಕಾ ದೋಣಿಗಳಿಗೆ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯೊಂದಿಗೆ ಸಂಯೋಜಿಸಿ “ಮತ್ಸ್ಯ ಸಿರಿ” ಎಂಬ ವಿಶೇಷ ಯೋಜನೆ ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ರೂಪಿಸಲಾಗುವುದು.
Advertisement
Advertisement
ಪ್ರಸ್ತಕ ಸಾಲಿನಲ್ಲಿ 5000 ವಸತಿ ರಹಿತ ಮೀನುಗಾರರಿಗೆ ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಆದ್ಯತೆ ಮೇರೆಗೆ ಮನೆಗಳನ್ನು ನಿರ್ಮಿಸಲಾಗುವುದು.
Advertisement
ರೈತ ಬಾಂದವರ ಬಹುದಿನಗಳ ಬೇಡಿಕೆಯನ್ನು ಈಡೇರಿಸಲು “ಯಶಸ್ವಿನಿ” ಯೋಜನೆಯನ್ನು ಪರಿಷ್ಕರಿಸಿ ಮರು ಜಾರಿಗೊಳಿಸಲು ನಮ್ಮ ಸರ್ಕಾರವು ನಿರ್ಧರಿಸಿದೆ. ಈ ಯೋಜನೆಯಿಂದ ಗ್ರಾಮೀಣ ಪ್ರದೇಶದ ರೈತ ಕುಟುಂಬಗಳಿಗೆ ಅತ್ಯುತ್ತಮ ವೈದ್ಯಕೀಯ ಸೌಲಭ್ಯಗಳನ್ನು ಲಭಿಸಲಿದ್ದು, ಈ ಉದ್ದೇಶಕ್ಕಾಗಿ ರಾಜ್ಯ ಸರ್ಕಾರದಿಂದ 300 ಕೋಟಿ ರೂ. ಗಳನ್ನು ಒದಗಿಸಲಾಗುವುದು.
ಸಹಕಾರ ಸಂಸ್ಥೆಗಳ ಮೂಲಕ ಅನುಷ್ಠಾನಗೋಳಿಸುತ್ತಿರುವ ಬಡ್ಡಿ ಸಹಾಯಧನ ಯೋಜನೆಯಡಿ 2021-22ನೇ ಸಾಲಿನಲ್ಲಿ ಇಲ್ಲಿಯ ತನಕ ಒಟ್ಟು 22.50 ಲಕ್ಷ ರೈತರಿಗೆ 16,335 ಕೋಟಿ ರೂ.ಗಳ ಕೃಷಿ ಸಾಲವನ್ನು ವಿತರಿಸಲಾಗಿದ್ದು, ಇದರಲ್ಲಿ 2.5 ಲಕ್ಷ ಹೊಸ ರೈತರಿಗೆ ಸಾಲ ವಿತರಿಸಲಾಗಿದೆ. 2022-23ನೇ ಸಾಲಿನಲ್ಲಿ ಒಟ್ಟು 33 ಲಕ್ಷ ರೈತರಿಗೆ 24,000 ಕೋಟಿ ರೂ. ಗಳ ಕೃಷಿ ಸಾಲವನ್ನು ವಿತರಿಸುವ ಗುರಿ ಹೊಂದಿದ್ದು, ಇದರಲ್ಲಿ 3 ಲಕ್ಷ ಹೊಸ ರೈತರಿಗೆ ಸಾಲವನ್ನು ನೀಡಲಾಗುವುದು.