ಬೆಂಗಳೂರು: ಸಿಎಂ ಬಸಬರಾಜ ಬೊಮ್ಮಾಯಿಯವರ ಚೊಚ್ಚಲ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದೆ. ಇಂದು ಮಧ್ಯಾಹ್ನ 12.30ಕ್ಕೆ ಸಿಎಂ ತಮ್ಮ ಮೊದಲ ಪೂರ್ಣ ಬಜೆಟ್ ಮಂಡಿಸುತ್ತಿದ್ದು, ಹತ್ತು ಹಲವು ನಿರೀಕ್ಷೆಗಳನ್ನು ಹುಟ್ಟಿಸಿದೆ.
Advertisement
ಈ ಬಜೆಟ್ ಸಿಎಂಗೂ, ಸರ್ಕಾರಕ್ಕೂ ಸವಾಲಿನ ಬಜೆಟ್ ಆಗಿದೆ. ರೈತಪರ, ಜನಪರ, ಜನಪ್ರಿಯ ಬಜೆಟ್ ಮಾಡುವ ಹುಮ್ಮಸ್ಸಿನಲ್ಲಿರೋ ಸಿಎಂ, ಎಲ್ಲ ವರ್ಗದವರಿಗೆ, ಎಲ್ಲ ವಲಯಗಳಿಗೆ ಮುಟ್ಟುವ ಬಜೆಟ್ ಮಾಡಬೇಕೆಂಬ ಹಂಬಲ ಹೊಂದಿದ್ದಾರೆ. ಗ್ರಾಮೀಣಾಭಿವೃದ್ಧಿ, ಲೋಕೋಪಯೋಗಿ, ಕೃಷಿ, ನೀರಾವರಿ, ಆರೋಗ್ಯ, ಮೂಲ ಸೌಕರ್ಯ, ಪ್ರವಾಸೋದ್ಯಮ ವಲಯಗಳಿಗೆ ಹೆಚ್ಚಿನ ಆದ್ಯತೆ ನೀಡುವ ಸಾಧ್ಯತೆಯಿದೆ. ಇದನ್ನೂ ಓದಿ: 10 ಪ್ರಕರಣ ದಾಖಲಿಸಿ, ನನ್ನನ್ನು ಜೈಲಿಗೆ ಕಳುಹಿಸಲು ಪಣ ತೊಟ್ಟಿದ್ದಾರೆ: ಡಿಕೆ ಶಿವಕುಮಾರ್
Advertisement
Advertisement
ವಿತ್ತೀಯ ಶಿಸ್ತು ಕಾಪಾಡಿಕೊಂಡು ಸಾಲದ ಹೊರೆ ಬೀಳದೆ ಮುಂದಿನ ಚುನಾವಣೆಗೆ ಜನಪ್ರಿಯ ಬಜೆಟ್ ಘೋಷಿಸಲು ಸಿಎಂ ಮುಂದಾಗಿದ್ದಾರೆ. ಇದು ಚುನಾವಣಾ ವರ್ಷವಾಗಿರುವುದರಿಂದ ಜನಪ್ರಿಯ ಯೋಜನೆಗಳ ಘೋಷಣೆ ಮಾಡುವ ಸಾಧ್ಯತೆ ಇದೆ.