ಬೆಂಗಳೂರು: 2024ರ ಒಲಿಂಪಿಕ್ಸ್ ಮತ್ತು ಪ್ಯಾರಾಲಿಂಪಿಕ್ಸ್‌ಗೆ ರಾಜ್ಯದಿಂದ ಕನಿಷ್ಟ 75 ಕ್ರೀಡಾಪಟುಗಳನ್ನು ಸಿದ್ಧಪಡಿಸಲು ‘ಅಮೃತ ಕ್ರೀಡಾ ದತ್ತು ಯೋಜನೆ’ಯಡಿ ತಲಾ 10 ಲಕ್ಷ ರೂ. ಗಳವರೆಗೆ ಪ್ರತಿ ವರ್ಷ ಶ್ರೇಷ್ಠ ಮಟ್ಟದ ತರಬೇತಿ ಪಡೆಯಲು ವಿನಿಯೋಗಿಸಲು ಬಜೆಟ್‍ನಲ್ಲಿ ಸರ್ಕಾರ ಯೋಜನೆ ರೂಪಿಸಿದೆ.
Advertisement
ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್-2021ನ್ನು ಪ್ರಸಕ್ತ ಸಾಲಿನಲ್ಲಿ ಬೆಂಗಳೂರಿನಲ್ಲಿ ಆಯೋಜಿಸಲಾಗುವುದು. ಈ ಕ್ರೀಡಾಕೂಟದಲ್ಲಿ 8,000ಕ್ಕೂ ಅಧಿಕ ಕ್ರೀಡಾಪಟುಗಳು ಹಾಗೂ 20 ವಿವಿಧ ಕ್ರೀಡೆಗಳಲ್ಲಿ ಸ್ಪರ್ಧೆಗಳನ್ನು ಸಂಘಟಿಸಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ. ಇದನ್ನೂ ಓದಿ: ಜಿಎಸ್‍ಟಿ ಪರಿಹಾರ 3 ವರ್ಷ ವಿಸ್ತರಿಸಿ: ರಾಜ್ಯದ ಹಣಕಾಸು ಪರಿಸ್ಥಿತಿಯ ಬಗ್ಗೆ ಸಿಎಂ ಹೇಳಿದ್ದೇನು?
Advertisement
Advertisement
ಕೇಂದ್ರದ ಪ್ರಾಯೋಜಕತ್ವದ ಎನ್.ಎಸ್.ಡಿ.ಎಫ್. ಯೋಜನೆಯಡಿ ಶಿವಮೊಗ್ಗ ನಗರದಲ್ಲಿ ಹೊಸದಾಗಿ ಕ್ರೀಡಾ ಅಕಾಡೆಮಿ ಸ್ಥಾಪಿಸಲು ಉದ್ದೇಶಿಸಿದ್ದು, ಇದಕ್ಕಾಗಿ 20 ಕೋಟಿ ರೂ.ಗಳ ಅನುದಾನವನ್ನು ಒದಗಿಸಲು ಮುಂದಾಗಿದೆ. 50 ವರ್ಷ ಮೇಲ್ಪಟ್ಟ ಕಷ್ಟ ಪರಿಸ್ಥಿತಿಯಲ್ಲಿರುವ ಕುಸ್ತಿ ಕ್ರೀಡಾಪಟುಗಳಿಗೆ ನೀಡುತ್ತಿರುವ ಮಾಸಾಶನವನ್ನು 1,000 ರೂ.ನಂತೆ ಹೆಚ್ಚಿಸಲು ಸರ್ಕಾರ ತೀರ್ಮಾನಿಸಿದೆ. ಇದನ್ನೂ ಓದಿ: ಎಕರೆಗೆ 250 ರೂ. ಗಳಂತೆ ಡೀಸೆಲ್ ಸಹಾಯಧನ – ರೈತರಿಗೆ ಬಜೆಟ್‍ನಲ್ಲಿ ಸಿಕ್ಕಿದ್ದೇನು?
Advertisement