ಬೆಂಗಳೂರು: ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಮೆಗಾ ಜ್ಯುವೆಲ್ಲರಿ ಪಾರ್ಕ್‍ನ್ನು ಬೆಂಗಳೂರಿನಲ್ಲಿ ಸ್ಥಾಪಿಸಲು ಮುಂದಾಗಿದ್ದು, ಇದರಿಂದ ಸುಮಾರು ಹತ್ತು ಸಾವಿರ ಜನರಿಗೆ ಉದ್ಯೋಗವಕಾಶ ಲಭಿಸಲಿದೆ ಎಂದು ಬಸವರಾಜ ಬೊಮ್ಮಾಯಿ ಬಜೆಟ್‍ನಲ್ಲಿ ಘೋಷಿಸಿದ್ದಾರೆ.
ನವ ಕರ್ನಾಟಕ ನವಬಾರತ ನಿರ್ಮಾಣ ಎಂಬ ಧ್ಯೇಯದಡಿಯಲ್ಲಿ ನವಕರ್ನಾಟಕ ನಿರ್ಮಾಣದ ಪರಿಕಲ್ಪನೆಯನ್ನು ಯೋಜನಾ ಬಧ್ಧವಾಗಿ ಪರಿಸರ ಸ್ನೇಹಿ ನವನಗರಗಳನ್ನು ನಿರ್ಮಿಸಲು ಉದ್ದೇಶಿಸಿದೆ. ಚಿನ್ನ ಮತ್ತು ಆಭರಣದ ಕುಶಲಕರ್ಮಿಗಳ ಹಾಗೂ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಸೌಲಭ್ಯವನ್ನು ಒದಗಿಸಲು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಮೆಗಾ ಜ್ಯುವೆಲ್ಲರಿ ಪಾರ್ಕ್‍ನ್ನು ಬೆಂಗಳೂರಿನಲ್ಲಿ ಸ್ಥಾಪಿಸಲು ಮುಂದಾಗಿದ್ದು, ಇದರಿಂದ ಸುಮಾರು ಹತ್ತು ಸಾವಿರ ಜನರಿಗೆ ಉದ್ಯೋಗವಕಾಶ ಲಭಿಸಲಿದೆ. ಇದನ್ನೂ ಓದಿ: ಮೇಕೆದಾಟು ಯೋಜನೆಗೆ 1,000 ಕೋಟಿ ರೂ. ಅನುದಾನ
ರಾಜ್ಯಕ್ಕೆ ವಿದೇಶಿ ಹೊಡಿಕೆಗಳನ್ನು ಆಕರ್ಷಿಸಲು ಬೆಂಗಳೂರಿನಲ್ಲಿ 2022ರ ನವೆಂಬರ್ 2 ರಿಂದ 4ರವರೆಗೆ “ಇನ್ವೆಸ್ಟ್ ಕರ್ನಾಟಕ-2022” ಜಾಗತಿಕ ಹೂಡಿಕೆದಾರರ ಸಭೆಯನ್ನು ಆಯೋಜಿಸಲಾಗಿದೆ. 2019-20ರಿಂದ ಸ್ಥಗಿತಗೊಂಡಿರುವುವ ಮೈಶುಗರ್ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಸರ್ಕಾರ ನಿರ್ಧರಿಸಿದ್ದು, ಈ ನಿಟ್ಟಿನಲ್ಲಿ ಮುಂದಿನ ಎರಡು ವರ್ಷಗಳ ಕಾಲ ಪ್ರಾಯೋಗಿಕವಾಗಿ ಸರ್ಕಾರದ ವತಿಯಿಂದ ಮೈಶುಗರ್ ಕಾರ್ಖಾನೆಯನ್ನು ನಡೆಲಾಗುವುದು. ಕಾರ್ಖಾನೆಯ ಯಂತ್ರೋಪಕರಣಗಳ ದುರಸ್ತಿಗಾಗಿ 50 ಕೋಟಿ ರೂ.ಗಳನ್ನು ಒದಗಿಸುವುದಲ್ಲದೆ ಹಣಕಾಸು ಸಂಸ್ಥೆಗಳಿಂದ ದುಡಿಯುವ ಬಂಡವಾಳವನ್ನು ಪಡೆಯಲು ವ್ಯವಸ್ಥೆ ಮಾಡಲು ತೀರ್ಮಾನಿಸಿದೆ.
ಕಲಬುರಗಿ ಮತ್ತು ವಿಜಯಪುರದಲ್ಲಿ ಮೆಗಾ-ಟೆಕ್ಸ್‌ಟೈಲ್ ಪಾರ್ಕ್‍ಗಳನ್ನು ಕೇಂದ್ರ ಸರ್ಕಾರದ ನೆರವಿನೊಂದಿಗೆ ಸ್ಥಾಪಿಸಲು ಪ್ರಸ್ತಾವನೆಯನ್ನು ಸಲ್ಲಿಸಲು ಸರ್ಕಾರ ಮುಂದಾಗಿದೆ. ಬಳ್ಳಾರಿಯಲ್ಲಿ ಜೀನ್ಸ್ ಮತ್ತು ಉಡುಪುಗಳನ್ನು ಉತ್ತೇಜಿಸಲು ಟೆಕ್ಸ್‌ಟೈಲ್ ಪಾರ್ಕ್‍ನ್ನು ಪ್ರಾರಂಭಿಸಲು ಉದ್ದೇಶಿಸಿದೆ. ಇದನ್ನೂ ಓದಿ: Karnataka Budget: ಈ ವರ್ಷ ಯಾವುದೇ ತೆರಿಗೆ ಹೆಚ್ಚಳ ಇಲ್ಲ
ಧಾರವಾಡ ಜಿಲ್ಲೆಯ ನವಲಗುಂದದಲ್ಲಿ ಹಾಗೂ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನನಲ್ಲಿ ನೂತನ ಜವಳಿ ಪಾರ್ಕ್‍ಗಳನ್ನು ಸಾರ್ವಜನಿಕ -ಖಾದಗಿ ಸಹಭಾಗಿತ್ವದಲ್ಲಿ ಪ್ರಾರಂಭಿಸಲಾಗುವುದು ಇದರಿಂದ್ ಸುಮಾರು 5, ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ. ಕಲಬುರಗಿ ಜಿಲ್ಲೆಯ ಪ್ರಸಿದ್ಧ ಶಹಬಾದ್ ಕಲ್ಲನ್ನು ಹೊಸ ವಿನ್ಯಾಸ ಮತ್ತು ತಂತ್ರಜ್ಞಾನವನ್ನು ಅಳವಡಿಸಿ ವ್ಯಾಪಕ ಮಾರುಕಟ್ಟೆ ಅವಕಾಶಗಳನ್ನು ಕಲ್ಪಿಸಲಾಗುವುದು. ಇದೇ ಮಾದರಿಯಲ್ಲಿ ಇಳ್ಕಲ್ ಗ್ರಾನೈಟ್, ಶಿವರಪಟ್ಟಣದಲ್ಲಿ ಶಿಲ್ಪಕಲೆ ಮತ್ತು ಚಳ್ಳಕೆರೆಯಲ್ಲಿನ ಖಾದ್ಯ ತೈಲ ಉದ್ಯಮಗಳಿಗೆ ಪ್ರೋತ್ಸಾಹಿಸಲು ಮುಂದಾಗಿದೆ.
2021ರ ಏಪ್ರಿಲ್-ಡಿಸೆಂಬರ್ ಅವಧಿಯಲ್ಲಿ ಭಾರತದ ಒಟ್ಟು ವಿದೇಶಿ ನೇರ ಹೂಡಿಕೆಯ (ಎಫ್‍ಡಿಐ) ಹರಿವಿನ ಪ್ರಮಾಣದಲ್ಲಿ ಕರ್ನಾಟಕವು ಶೇ.40ರಷ್ಟುನ್ನು (1.27 ಕೋಟಿ ರೂ.) ಆಕರ್ಷಿಸಿದ್ದು, ರಾಷ್ಟ್ರದಲ್ಲಿಯೇ ಅಗ್ರಸ್ಥಾನದಲ್ಲಿದೆ. ಇದನ್ನೂ ಓದಿ: 125 ಸಿನಿಮಾಗಳಿಂದ 200 ಚಿತ್ರಗಳಿಗೆ ಸಬ್ಸಿಡಿ ಏರಿಕೆ: ಬಜೆಟ್‌ನಲ್ಲಿ ಸಿಎಂ ಬೊಮ್ಮಾಯಿ ಘೋಷಣೆ
ಭಾರತ ಸರ್ಕಾರದ 76 ಕೋಟಿ ರೂ. ವೆಚ್ಚದ ಸೆಮಿಕಂಡಕ್ಟರ್ ಭಾರತ್ ಅಭಿಯಾನದ ಗರಿಷ್ಠ ಲಾಭ ಪಡೆದುಕೊಂಡು ರಾಜ್ಯದಲ್ಲಿ ಸೆಮಿಕಂಡಕ್ಟರ್ ತಯಾರಿಗೆ ಹೂಡಿಕೆಗಳನ್ನು ಆಕರ್ಷಿಸಲು ರಾಜ್ಯ ಸರ್ಕಾರ ವತಿಯಿಂದ ವಿಶೇಷ ಪ್ರೋತ್ಸಾಹಗಳನ್ನು ನೀಡಲು ಸರ್ಕಾರ ಉದ್ದೇಶಿಸಿದೆ ಎಂದು ಬೊಮ್ಮಾಯಿ ಬಜೆಟ್ ಭಾಷಣದಲ್ಲಿ ತಿಳಿಸಿದರು.