ಬೆಂಗಳೂರು: ಫೆಬ್ರವರಿ 7 ರಿಂದ ಬಜೆಟ್ ಪೂರ್ವಭಾವಿ ಸಿದ್ಧತೆ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬುಧವಾರ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿವಿಧ ಇಲಾಖೆಗಳೊಂದಿಗೆ ಆಯವ್ಯಯ ಪೂರ್ವಭಾವಿ ಸಭೆಗಳನ್ನು ಮುಂದಿನ ವಾರದಿಂದ ನಡೆಸಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ದೆಹಲಿಯಲ್ಲಿ ಡಿಸಿಎಂ ಪಟ್ಟಕ್ಕಾಗಿ ಶ್ರೀರಾಮುಲು ಲಾಬಿ
ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ದೊರೆಯಲಿರುವ ಸಾಲ ಹಾಗೂ ಅನುದಾನಗಳ ಆಧಾರದ ಮೇಲೆ ರಾಜ್ಯ ಸರ್ಕಾರದ ಆಯವ್ಯಯದ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದರು.
ಆಯವ್ಯಯಕ್ಕೂ ಮುನ್ನ ರಾಜ್ಯದ ಎಲ್ಲಾ ಸಂಸದರೊಂದಿಗೆ ಸಭೆ ಸೇರುವ ವಾಡಿಕೆಯಿದೆ. ಈ ಸಭೆಗೆ ಸಮಯ ನಿಗದಿಯಾಗುತ್ತಿದೆ. ಅಂತರರಾಜ್ಯ ಜಲವಿವಾದಗಳಲ್ಲಿ ರಾಜ್ಯವನ್ನು ಪ್ರತಿನಿಧಿಸುವ ವಕೀಲರನ್ನೂ ಭೇಟಿಯಾಗಲಿದ್ದು, ಸೋಮವಾರ ದೆಹಲಿಗೆ ಪ್ರಯಾಣ ಬೆಳೆಸುತ್ತೇನೆ. ನಾಳೆ ದೆಹಲಿಗೆ ಹೋಗಬೇಕು ಎಂದುಕೊಂಡಿದ್ದೆ. ಆದರೆ ಸಂಸದರ ಸಲಹೆ ಮೇರೆಗೆ ಸೋಮವಾರ ಹೋಗಲು ನಿರ್ಧರಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಬಜೆಟ್‍ನಲ್ಲಿ ಮುಂದಿನ 25 ವರ್ಷಗಳ ಮುಂದಾಲೋಚನೆಯಿದೆ: ಬಿ.ಸಿ.ಪಾಟೀಲ್