ಕನ್ನಡದ ಹೆಸರಾಂತ ನಟ ಪುನೀತ್ ರಾಜ್ ಕುಮಾರ್ (Puneeth Raj Kumar) ಹಠಾತ್ ನಿಧನ ಕರುನಾಡಿಗೆ ಶಾಕ್ ನೀಡಿತ್ತು. ಹೃದಯಾಘಾತದಿಂದ (Heart Attack) ಅಪ್ಪು ನಿಧನರಾದಾಗ ಆ ಸಾವಿನ ಬಗ್ಗೆ ಹಲವು ರೀತಿಯಲ್ಲಿ ವಿಶ್ಲೇಷಣೆ ಮಾಡಲಾಗಿತ್ತು. ಪುನೀತ್ ಕುಟುಂಬದ ವೈದ್ಯರ ಮೇಲೆಯೇ ಅನುಮಾನ ಪಡುವಂತಹ ಘಟನೆಗಳು ಕೂಡ ನಡೆದವು. ಪುನೀತ್ ಅವರಿಗೆ ಹಠಾತ್ ಹೃದಯಬೇನೆ ಕಾಣಿಸಿಕೊಂಡಾಗ ಯಾವ ರೀತಿಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಬೇಕಿತ್ತು ಎಂದೆಲ್ಲ ಚರ್ಚೆ ಆಯಿತು. ಅದೆಲ್ಲವನ್ನೂ ಪರಿಗಣಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿಯ ಬಜೆಟ್ (Karnataka Budget 2023)ನಲ್ಲಿ ಪುನೀತ್ ಹೆಸರಿನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಒಂದಷ್ಟು ಅನುದಾನ ನೀಡಿದ್ದಾರೆ.
ಪುನೀತ್ ರಾಜ್ ಕುಮಾರ್ ಅವರ ಸ್ಮರಣಾರ್ಥವಾಗಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು Automated External Defibrillators (AED) ಗಳನ್ನು ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲಾಗುವುದು. ಇದಕ್ಕಾಗಿ ಆರು ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಮ್ಮ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ:ನೀಲಿ ತಾರೆ ಮಿಯಾ ತೆಲುಗಿನ ಡೈರೆಕ್ಟರ್ ಆರ್‌ಜಿವಿ
ಇತ್ತೀಚಿನ ದಿನಗಳಲ್ಲಿ ಹೃದಯಾಘಾತಕ್ಕೆ ಬಲಿಯಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ವಯಸ್ಸಿನ ಹಂಗಿಲ್ಲದೇ ಹಠಾತ್ ಸಾವುಗಳು ಆಗುತ್ತಿವೆ. ಆರೋಗ್ಯವಂಥರು ಎನಿಸಿಕೊಂಡವರು ಕೂಡ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಹಾಗಾಗಿಯೇ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಯಲು ಆರು ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಬಜೆಟ್ ನಲ್ಲಿ ತಿಳಿಸಿದ್ದಾರೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]