ಬೆಂಗಳೂರು: ಚುನಾವಣಾ ವರ್ಷದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಬಜೆಟ್ ಸಾಕಷ್ಟು ಕುತೂಹಲ ಮೂಡಿಸಿದೆ. ಏಕೆಂದರೆ ಈ ಬಜೆಟ್‌ನಲ್ಲಿ (Karnataka Budget 2023) ಮಹಿಳೆಯರ ಮನಗೆಲ್ಲೋಕೆ ಬೊಮ್ಮಾಯಿ ಸರ್ಕಾರ ಪ್ಲಾನ್ ಮಾಡಿದೆ ಎನ್ನಲಾಗುತ್ತಿದೆ.
ಈಗಾಗಲೇ ಜೆಡಿಎಸ್ (JDS) ಪಂಚರತ್ನ ಯಾತ್ರೆಯಲ್ಲಿ ಮಹಿಳಾ ಸ್ವಸಹಾಯ ಸಂಘಗಳ (Women Self Help Group Society) ಸಾಲ ಮನ್ನಾ ಮಾಡುವುದಾಗಿ ಘೋಷಣೆ ಮಾಡಿದೆ, ಕಾಂಗ್ರೆಸ್ (Karnataka Congress) ಅಧಿಕಾರಕ್ಕೆ ಬಂದ್ರೆ ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ಮನೆ ಯಜಮಾನಿಗೆ ತಿಂಗಳಿಗೆ 2 ಸಾವಿರ ರೂ. ಘೋಷಣೆ ಮಾಡಿದೆ. ಈ ನಿಟ್ಟಿನಲ್ಲಿ ಬೊಮ್ಮಾಯಿ ಸರ್ಕಾರ ಬಜೆಟ್‌ನಲ್ಲಿ ಹೊಸ ಯೋಜನೆಗಳನ್ನ ಘೋಷಣೆ ಮಾಡುವ ಮೂಲಕ ಮಹಿಳೆಯರ ಮನಗೆಲ್ಲೋಕೆ ಬೊಮ್ಮಾಯಿ ಪ್ಲಾನ್ ಮಾಡಿದ್ದಾರಾ? ಎನ್ನುವ ಬಗ್ಗೆ ಕುತೂಹಲ ಮೂಡಿಸಿದೆ.
Advertisement
Advertisement
ಕೊರೊನಾ ಸಮಯದಲ್ಲಿ ಯೋಗಿ ಸರ್ಕಾರ (Uttar Pradesh Government) ಮಹಿಳೆಯರಿಗಾಗಿ ವಿಶೇಷ ಯೋಜನೆಗಳನ್ನ ಘೋಷಣೆ ಮಾಡಿತ್ತು. ಅದರಂತೆ ರಾಜ್ಯದಲ್ಲೂ ಮಹಿಳೆಯರ ಓಲೈಕೆಗೆ ಬೊಮ್ಮಾಯಿ ಪ್ಲಾನ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಚುನಾವಣೆ ಬಜೆಟ್ ನಲ್ಲಿ ಮಹಿಳೆಯರಿಗೆ ಈ ವರ್ಷ ಬಂಪರ್ ನಿರೀಕ್ಷೆಗಳ ಸಾಧ್ಯತೆ ಎಂದು ಹೇಳಲಾಗಿದೆ. ಇದನ್ನೂ ಓದಿ: ರಾಜಸ್ಥಾನದಲ್ಲಿ ನಿರುದ್ಯೋಗಿ ಯುವತಿಯರಿಗೆ 2,500 ರೂ. ಇನ್ನೂ ನೀಡಿಲ್ಲ ಯಾಕೆ – ಕಾಂಗ್ರೆಸ್‌ಗೆ ಬಿಜೆಪಿ ಪ್ರಶ್ನೆ
Advertisement
Advertisement
ಬೊಮ್ಮಾಯಿ ಬಜೆಟ್ ಪ್ಲಾನ್ ಏನು?: ಮಹಿಳಾ ಸ್ವಸಹಾಯ ಸಂಘಗಳಿಗೆ ಶೂನ್ಯ ಬಡ್ಡಿ ದರದಲ್ಲಿ ಅಥವಾ ಕಡಿಮೆ ಬಡ್ಡಿ ದರದಲ್ಲಿ ಹೆಚ್ಚು ಅನುದಾನ ನೀಡುವ ಸಾಧ್ಯತೆ. ಸ್ವಂತ ಉದ್ಯೋಗ ಮಾಡುವ ಮಹಿಳೆಯರಿಗೆ ವಿಶೇಷ ಆರ್ಥಿಕ ಸಹಾಯ ಯೋಜನೆ ಜಾರಿ ಸಾಧ್ಯತೆ. ಮಹಿಳಾ ಸ್ವಸಹಾಯ ಸಂಘಗಳ ಸಾಲಮನ್ನಾ ಮಾಡೋ ಬಗ್ಗೆ ಚಿಂತನೆ. ಇದನ್ನೂ ಓದಿ: ಸೌಹಾರ್ದ ಕ್ರಿಕೆಟ್ ಆಡಲು ಹೋಗಿ ಎಡವಟ್ಟು ಮಾಡಿಕೊಂಡ ಬಿಜೆಪಿ ಕೇಂದ್ರ ಸಚಿವ
ಮಹಿಳೆಯರ ಆರೋಗ್ಯಕ್ಕಾಗಿ ವಿಶೇಷ ಯೋಜನೆ ಘೋಷಣೆ ಸಾಧ್ಯತೆ. ರೈತ ಮಹಿಳೆ ಪ್ರೋತ್ಸಾಹ ಧನ, ಅಥವಾ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಘೋಷಣೆ ಸಾಧ್ಯತೆ. ಹಿಂದುಳಿದ ವರ್ಗದ ಮಹಿಳಾ ಉದ್ಯಮಿಗಳಿಗೆ ಉದ್ಯಮ ಪ್ರಾರಂಭಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಸಾಧ್ಯತೆ. ಪದವಿ ವಿದ್ಯಾರ್ಥಿನಿಯರು, ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ಹೆಚ್ಚಳ ಸಾಧ್ಯತೆ. ವಿಧವಾ ವೇತನ, ಅಸಿಡ್ ದಾಳಿಗೆ ಒಳಗಾದ ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರಿಗೆ ಮಾಶಾಸನ ಹೆಚ್ಚಳ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k