ಬೆಂಗಳೂರು: ರಾಜ್ಯದಲ್ಲಿ ಉತ್ತಮ ಶಿಕ್ಷಣ ನೀಡುವ ನಿಟ್ಟಿನಲ್ಲಿ ರಾಜ್ಯ ಶಿಕ್ಷಣ ನೀತಿ ಜಾರಿಗೆ ತರಲಾಗುತ್ತಿದೆ ಎಂದು ಸಚಿವ ಮಧು ಬಂಗಾರಪ್ಪ (Madhu Bangarappa) ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎನ್‍ಇಪಿ (NEP) ರದ್ದುಗೊಳಿಸಿರುವ ವಿಚಾರವಾಗಿ ಪ್ರತಿಕ್ರಿಯೆ ನಿಡಿದ್ದಾರೆ. ರಾಜ್ಯ ಶಿಕ್ಷಣ ನೀತಿಯನ್ನ ಜಾರಿಗೆ ತರಲು 8 ತಿಂಗಳುಗಳ ಕಾಲಾವಕಾಶ ಇದೆ. ಸಣ್ಣ ತಂಡ ಮಾಡಿ ಪಠ್ಯ ಬದಲಾವಣೆ ಮಾಡಿದ ರೀತಿಯಲ್ಲಿ ರಾಜ್ಯ ಶಿಕ್ಷಣ ನೀತಿಯನ್ನು ಜಾರಿಗೆ ತರಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಬಿಜೆಪಿಗೆ ಕುಟುಕಿದ್ದಾರೆ. ಇದನ್ನೂ ಓದಿ: Karnataka Budget 2023 – NEP ರದ್ದು, ಬರಲಿದೆ ರಾಜ್ಯದ್ದೇ ಹೊಸ ಶಿಕ್ಷಣ ನೀತಿ
ರಾಜ್ಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲು ದೊಡ್ಡ ತಂಡವನ್ನು ರಚಿಸಲಾಗಿದೆ. ಭಾಷೆಗಳಿಗೆ ಪ್ರಯೋಗಿಕ ತರಗತಿಗಳನ್ನು ಮಾಡುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತದೆ. ಈ ನೀತಿಯಲ್ಲಿ ರಾಜ್ಯ ಸಿಲೆಬಸ್, ನ್ಯಾಷನಲ್ ಸಿಲೆಬಸ್ ಎನ್ನುವ ವ್ಯತ್ಯಾಸ ಇರುವುದಿಲ್ಲ ಎಂದಿದ್ದಾರೆ.
ಇದಕ್ಕೂ ಮುನ್ನ ಬಜೆಟ್ (Karnataka Budget) ಭಾಷಣದಲ್ಲಿ ಕೇಂದ್ರ ಸರ್ಕಾರ ಸಿದ್ಧಪಡಿಸಿದ ಹೊಸ ಶಿಕ್ಷಣ ನೀತಿಯನ್ನು ರದ್ದುಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಕೇಂದ್ರ ಸರ್ಕಾರ ಜಾರಿಗೊಳಿಸಿದ ರಾಷ್ಟ್ರೀಯ ಶಿಕ್ಷಣ ನೀತಿಯು ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿರುವಂತಹ ಹಾಗೂ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿರುವ ಅವೈಜ್ಞಾನಿಕ ಅಂಶಗಳನ್ನು ಒಳಗೊಂಡಿದೆ. ಬಹುಧರ್ಮ, ಬಹುಭಾಷೆ, ಬಹುಸಂಸ್ಕೃತಿ ಇರುವ ನಮ್ಮ ದೇಶಕ್ಕೆ ಏಕರೂಪದ ಶಿಕ್ಷಣ ವ್ಯವಸ್ಥೆ ಹೊಂದಿಕೊಳ್ಳುವುದಿಲ್ಲ ಎಂದಿದ್ದರು.
ಉನ್ನತ ಶಿಕ್ಷಣವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ವಿದ್ಯಾರ್ಥಿಗಳಿಗೆ ಉದ್ಯೋಗಾಧಾರಿತ ಶಿಕ್ಷಣವನ್ನು ನೀಡಿ ಯುವಜನರನ್ನು ಸಾಮಾಜಿಕವಾಗಿ ಆರ್ಥಿಕವಾಗಿ ಸಬಲಗೊಳಿಸಲು ಒತ್ತು ನೀಡಲಾಗುತ್ತದೆ. ಸ್ಥಳೀಯವಾದ ಸಾಮಾಜಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ವಾಸ್ತವಾಂಶಗಳನ್ನು ಒಳಗೊಂಡ ಹೊಸ ಶಿಕ್ಷಣ ನೀತಿಯನ್ನು ರೂಪಿಸಲಾಗುತ್ತದೆ ಎಂದು ಹೇಳಿದ್ದರು. ಅಲ್ಲದೇ ಚುನಾವಣಾ ಪ್ರಣಾಳಿಕೆಯಲ್ಲೇ ಹೊಸ ಶಿಕ್ಷಣ ನೀತಿಯನ್ನು ರದ್ದುಗೊಳಿಸಲಾಗುವುದು ಕಾಂಗ್ರೆಸ್ (Congress) ಘೋಷಿಸಿತ್ತು. ಇದನ್ನೂ ಓದಿ: ಒಂದು ವರ್ಗಕ್ಕೆ ಕೊಟ್ಟು ಇನ್ನೊಂದು ವರ್ಗಕ್ಕೆ ಟೋಪಿ, ವೈಟ್ ಟ್ಯಾಪಿಂಗ್ YST ಮುಂದುವರಿದ ಭಾಗ: ಹೆಚ್‍ಡಿಕೆ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]