ಚಿಕ್ಕಮಗಳೂರು: ಕಾಂಗ್ರೆಸ್ಸಿಗರಿಗೆ ಇನ್ಮುಂದೆ ಚೆಂಡು ಹೂವೇ ಶಾಶ್ವತ, ಇನ್ನು ಮುಂದೆ ಅವರು ಕಿವಿಗೆ ಚೆಂಡು ಹೂವು ಇಟ್ಟುಕೊಂಡೇ ಓಡಾಡಬೇಕು ಎಂದು ಕಾಂಗ್ರೆಸ್ (Congress) ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ (CT Ravi) ವ್ಯಂಗ್ಯವಾಡಿದರು.
ಬಜೆಟ್ ಬಳಿಕ ನಗರದ ಬಸವನಹಳ್ಳಿಯಲ್ಲಿರುವ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಬಜೆಟ್ ವಿರುದ್ಧ ಕಾಂಗ್ರೆಸ್ ಕಿವಿಗೆ ಹೂವಿಟ್ಟು ಪ್ರತಿಭಟನೆ ನಡೆಸಿದ್ದಕ್ಕೆ ಪ್ರತಿಕ್ರಿಯೆ ನೀಡಿದರು. ಬಿಜೆಪಿ (BJP) ಮತ್ತೆ ಅಧಿಕಾರಕ್ಕೆ ಬರುವುದು ಶತಸಿದ್ಧ. ರಾಜ್ಯದಲ್ಲಿ ಕಮಲವೇ ಮತ್ತೆ ಅರಳುವುದು. ಜನ ಕಾಂಗ್ರೆಸ್ಸಿಗೆ ಚೆಂಡುಹೂವು ಇಡಿಸುವ ಬದಲು, ನಾವೇ ಇಟ್ಟುಕೊಳ್ಳೋಣ ಎಂದು ಕಿವಿಗೆ ಇಟ್ಟುಕೊಂಡಿದ್ದಾರೆ ಎಂದು ಲೇವಡಿ ಮಾಡಿದರು.
Advertisement
Advertisement
ಕಾಂಗ್ರೆಸ್ ಕರ್ನಾಟಕದಲ್ಲಿ (Karnataka) ಮತ್ತೆ ಬಿಜೆಪಿಯೇ ಗೆಲ್ಲುವುದು ಎಂದು ಪರೋಕ್ಷವಾಗಿ ಒಪ್ಪಿಕೊಂಡಿದೆ. ಕಾಂಗ್ರೆಸ್ಸಿಗರು ಕಿವಿಗೆ ಚೆಂಡು ಹೂವನ್ನು ಇಟ್ಟುಕೊಂಡು ರಾಜ್ಯದ ಜನತೆಯ ಹಿತವನ್ನು ಬಯಸಿದ್ದಾರೆ. ರಾಜ್ಯದ ಹಿತವೂ ಬಿಜೆಪಿಯ ಗೆಲುವಿನ ಜೊತೆಗಿದೆ. ಕಾಂಗ್ರೆಸ್ ರಾಜ್ಯದ ಹಿತ ಹಾಗೂ ಬಿಜೆಪಿಯ ಗೆಲುವನ್ನು ಬಯಸಿದ್ದಕ್ಕೆ ಕಾಂಗ್ರೆಸ್ಸಿಗೆ ಧನ್ಯವಾದ ತಿಳಿಸಿದರು.
Advertisement
Advertisement
ಬಜೆಟ್ ಬಗ್ಗೆ ಮಾತನಾಡಿದ ಅವರು, ಬೊಮ್ಮಾಯಿ ಬಜೆಟ್ ಜನರಲ್ಲಿ ಹೊಸ ಆಶಯ ಬಿಂಬಿಸುವ ಬಜೆಟ್ ಆಗಿದೆ. ಇದೊಂದು ಸರ್ವಸ್ಪರ್ಶಿ, ಸರ್ವವ್ಯಾಪಿಯಾಗಿರುವ ಬಜೆಟ್ ಆಗಿದ್ದು, ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ, ಗೃಹಿಣಿ ಶಕ್ತಿ ಯೋಜನೆ, ಮೂಲ ಸೌಲಭ್ಯ, ನೀರಾವರಿಗೆ ಕೊಟ್ಟಿರುವ ವಿಶೇಷ ಯೋಜನೆ ಜನರಲ್ಲಿ ಹೊಸ ಭರವಸೆ ಮೂಡಿಸಿದೆ ಎಂದರು. ಇದನ್ನೂ ಓದಿ: ನಕಲು ತಡೆಗೆ ಕಠಿಣ ಕ್ರಮ – ವಾರ್ಷಿಕ ಪರೀಕ್ಷೆಯ ಮೊದಲ ದಿನವೇ 4 ಲಕ್ಷ ವಿದ್ಯಾರ್ಥಿಗಳು ಗೈರು
ಚಿಕ್ಕಮಗಳೂರಿಗೂ ಜವಳಿ ಪಾರ್ಕ್, ಶೃಂಗೇರಿಗೆ 100 ಬೆಡ್ ಹಾಸಿಗೆಯುಳ್ಳ ಆಸ್ಪತ್ರೆ, ಕಾಫಿನಾಡಿಗೆ ನೂತನ ವಿಶ್ವವಿದ್ಯಾನಿಲಯ ವಿವಿಧ ಯೋಜನೆ ನೀಡಿದೆ. ಇದು ಅಭಿವೃದ್ಧಿ ಕರ್ನಾಟಕದ ಆಶಯದ ಬಜೆಟ್ ಎಂದು ವರ್ಣಿಸಿದರು. ಆದರೆ, ನಮಗೊಂದು ನೋವಿದೆ. ದತ್ತಪೀಠ ಅಭಿವೃದ್ಧಿ ಪ್ರಾಧಿಕಾರ ಮಾಡಿ ಅಂತ ಕೇಳಿಕೊಂಡಿದ್ದೆ. ಅದರಲ್ಲಿರುವ ತಾಂತ್ರಿಕ ತೊಡಕಿನ ಬಗ್ಗೆ ನನಗೆ ಫೋನ್ ಮಾಡಿ ತಿಳಿಸಿದ್ದಾರೆ. ದತ್ತಪೀಠ ಅಭಿವೃದ್ಧಿ ಪ್ರಾಧಿಕಾರಕ್ಕೆ ಇರುವ ತಾಂತ್ರಿಕ ತೊಡಕು ನಿವಾರಿಸಿ ದತ್ತಪೀಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿಸುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ರಾಮನಗರದಲ್ಲಿ ರಾಮಮಂದಿರ ನಿರ್ಮಾಣ: ಬಜೆಟ್ ಮಂಡಿಸಿ ಸಿಎಂ ಭರವಸೆ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k