ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 14ನೇ ಬಜೆಟ್ (Karnataka Budget 2023) ಮಂಡನೆ ಮಾಡಿದ್ದು, ಚಿತ್ರರಂಗಕ್ಕೂ ಭರ್ಜರಿ ಕೊಡುಗೆಯನ್ನು ನೀಡಿದ್ದಾರೆ. ಅದರಲ್ಲೂ ಹಲವು ವರ್ಷಗಳಿಂದ ಚರ್ಚೆಯಲ್ಲಿರುವ ಚಿತ್ರನಗರಿ (Film City) ಕುರಿತು ಈ ಬಾರಿಯೂ ಬಜೆಟ್ ನಲ್ಲಿ ಘೋಷಣೆ ಮಾಡಿದ್ದು, ಮೈಸೂರಿನಲ್ಲಿ (Mysore) ಚಿತ್ರನಗರಿ ಮಾಡುವುದಾಗಿ ಬಜೆಟ್ ನಲ್ಲಿ ತಿಳಿಸಿದ್ದಾರೆ.
2015-16ನೇ ಸಾಲಿನಲ್ಲಿ ಮೈಸೂರು ಜಿಲ್ಲೆಯಲ್ಲಿ ಜಾಗತಿಕ ಮಟ್ಟದ ಚಿತ್ರನಗರಿ ಸ್ಥಾಪಿಸಲು ಘೋಷಿಸಲಾಗಿತ್ತು. ನಂತರದ ಸರಕಾರವು ಸದರಿ ಚಿತ್ರನಗರಿಯನ್ನು ಬೆಂಗಳೂರಿಗೆ ಸ್ಥಳಾಂತರಗೊಳಿಸಲು ಉದ್ದೇಶಿಸಿತ್ತು. ಆದರೆ, ಇಲ್ಲಿವರೆಗೂ ಅನುಷ್ಠಾನಗೊಂಡಿಲ್ಲ. ಈ ಬಾರಿ ಮೈಸೂರು ಜಿಲ್ಲೆಯಲ್ಲೇ ಚಿತ್ರನಗರಿ ಮಾಡುವುದಾಗಿ ಘೋಷಿಸಿದ್ದಾರೆ. ಇದನ್ನೂ ಓದಿ:ರಿಷಬ್ ಶೆಟ್ಟಿ ಹುಟ್ಟುಹಬ್ಬಕ್ಕೆ ಭೂರಿ ಭೋಜನ, ಭರ್ಜರಿ ತಯಾರಿ
ಈ ಹಿಂದೆ ಸಿದ್ದರಾಮಯ್ಯನವರ ಸರಕಾರವೇ ಮೈಸೂರಿನಲ್ಲಿ ಚಿತ್ರನಗರಿ ಮಾಡುವುದಾಗಿ ತಿಳಿಸಿತ್ತು. ಆ ಘೋಷಣೆಯಂತೆ ಮೈಸೂರು ಜಿಲ್ಲೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿಯನ್ನು ನಿರ್ಮಿಸಲು ಮತ್ತೆ ಮುಂದಾಗಿದೆ. ಅದನ್ನು ಈ ಬಾರಿಯ ಬಜೆಟ್ ನಲ್ಲಿ ಘೋಷಣೆ ಮಾಡಿದೆ.
ಹಲವಾರು ಬಾರಿ ಚಿತ್ರನಗರಿಯ ಬಗ್ಗೆ ಬಜೆಟ್ ನಲ್ಲಿ ಪ್ರಸ್ತಾಪವಾಗಿದೆ. ಕಾಂಗ್ರೆಸ್ ಸರಕಾರ ಮೈಸೂರಿನಲ್ಲಿ ಚಿತ್ರನಗರಿ ಎಂದಿದ್ದರೆ, ಜೆಡಿಎಸ್ ಸರಕಾರ ರಾಮನಗರದಲ್ಲಿ ಚಿತ್ರನಗರಿ ಮಾಡುವುದಾಗಿ ತಿಳಿಸಿತ್ತು. ಬಿಜೆಪಿ ಸರಕಾರವು ಅದನ್ನು ಬೆಂಗಳೂರಿನಲ್ಲೇ ಮಾಡುವುದಾಗಿ ಘೋಷಣೆ ಮಾಡಿತ್ತು. ಇದೀಗ ಮತ್ತೆ ಚಿತ್ರನಗರಿ ಮೈಸೂರು ಪಾಲಾಗಿದೆ.
Web Stories