ಬೆಂಗಳೂರು: ಈ ಬಾರಿ ರಾಜ್ಯ ಬಜೆಟ್‌ನಲ್ಲಿ (Karnataka Budget 2023) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಯಾವುದೇ ಮಠಮಾನ್ಯಗಳಿಗೆ ನೇರ ಅನುದಾನ ನೀಡಿಲ್ಲ. ಬದಲಾಗಿ ಧಾರ್ಮಿಕ ದತ್ತಿ ಇಲಾಖೆಯಡಿ 1,000 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ.
ಧಾರ್ಮಿಕ ದತ್ತಿ ಇಲಾಖೆಯಡಿ 2022-23ನೇ ಸಾಲಿಗೆ ದೇವಸ್ಥಾನ ಮತ್ತು ಮಠಗಳ ಜೀರ್ಣೋದ್ಧಾರ ಕಾಮಗಾರಿಗಳಿಗೆ ಒಟ್ಟು 425 ಕೋಟಿ ರೂ. ಅನುದಾನ ನೀಡಲಾಗಿತ್ತು. ಅಂತೆಯೇ ಮುಂದಿನ 2 ವರ್ಷಗಳಲ್ಲಿ ರಾಜ್ಯದಲ್ಲಿನ ವಿವಿಧ ದೇವಸ್ಥಾನ ಮತ್ತು ಮಠಗಳ ಜೀರ್ಣೋದ್ಧಾರಕ್ಕಾಗಿ ನಮ್ಮ ಸರ್ಕಾರ 1,000 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಸಿಎಂ ಭರವಸೆ ನೀಡಿದರು. ಇದನ್ನೂ ಓದಿ: Karnataka Budget 2023ː ಬೆಂಗ್ಳೂರು ಅಭಿವೃದ್ಧಿಗೆ 9,698 ಕೋಟಿ – ಪ್ರತಿ ವಾರ್ಡ್‌ನಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕ
Advertisement
Advertisement
ಜಗತ್ತಿಗೆ ಸಂಸತ್ತಿನ ಪರಿಕಲ್ಪನೆಯನ್ನು ಪರಿಚಯಿಸಿದ ಬಸವಾದಿ ಶರಣರು ಸ್ಥಾಪಿಸಿದ ಅನುಭವ ಮಂಟಪದ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಶೀಘ್ರದಲ್ಲಿಯೇ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.
Advertisement
Advertisement
ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳ ಇನಾಂ ಜಮೀನುಗಳ ವರ್ಷಾಶನವನ್ನು 48,000 ರೂ.ನಿಂದ 60,000 ರೂ.ಗೆ ಹೆಚ್ಚಿಸಲಾಗುವುದು. ಈ ಸೌಲಭ್ಯದಿಂದ 3,721 ಸಂಸ್ಥೆಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಬೊಮ್ಮಾಯಿ ಬಜೆಟ್ : ಶಂಕರ್ ನಾಗ್ ಹೆಸರಿನಲ್ಲಿ ಟ್ಯಾಕ್ಸಿ, ಆಟೋ ನಿಲ್ದಾಣ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k