ಬೆಂಗಳೂರು: 14ನೇ ಬಜೆಟ್ (Karnataka Budget) ಮಂಡಿಸಿ ದಾಖಲೆ ಬರೆಯಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸಾಧನೆ ಅವರಿಗೆ ಟಗರು ಸ್ಪೆಷಲ್ ಗಿಫ್ಟ್ ಕೊಡಲು ತಂಡವೊಂದು ಮುಂದಾಗಿದೆ.
ದಾಖಲೆಯ ಬಜೆಟ್ ಮಂಡಿಸಿದ ಸಿದ್ದುಗೆ ಟಗರು ಉಡುಗೊರೆ ಕೊಡಲು ಯತೀಂದ್ರ ಬ್ರಿಗೇಡ್ ತಂಡ ರೆಡಿಯಾಗಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸಲಿದ್ದಾರೆ. ಇದನ್ನೂ ಓದಿ: ಗ್ಯಾರಂಟಿಗಳ ಜಾರಿ ನಡುವೆ ಹೊಸ ಭರವಸೆ ಹುಟ್ಟಿಸುತ್ತಾ ರಾಜ್ಯ ಸರ್ಕಾರದ ಬಜೆಟ್?
Advertisement
Advertisement
ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿಯಾಗಿ ಏಳು ಬಜೆಟ್‌ಗಳನ್ನು ಮಂಡಿಸಿದ್ದಾರೆ. ಕಾಂಗ್ರೆಸ್-ಜೆಡಿ(ಎಸ್) ಸಮ್ಮಿಶ್ರ ಸರ್ಕಾರದಲ್ಲಿ 2005-07 ಮತ್ತು ಆಗಿನ ಜೆಡಿ ಸರ್ಕಾರದಲ್ಲಿ 1995-2000 ವರೆಗೆ. 1995 ಮತ್ತು 1996 ರಲ್ಲಿ ಹೆಚ್.ಡಿ. ದೇವೇಗೌಡರ ಅಡಿಯಲ್ಲಿ ಎರಡು ಬಾರಿ. 1997, 1998 ಮತ್ತು 1999 ರಲ್ಲಿ ಜೆ.ಹೆಚ್. ಪಟೇಲ್ ಅವರ ಅಡಿಯಲ್ಲಿ ಮೂರು ಬಾರಿ. 2005 ಮತ್ತು 2006 ರಲ್ಲಿ ಎನ್. ಧರಂ ಸಿಂಗ್ ನೇತೃತ್ವದಲ್ಲಿ ಬಜೆಟ್ ಮಂಡಿಸಿದ್ದಾರೆ.
Advertisement
Advertisement
2013ರಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿದಾಗ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದರು. ಆಗ ಹಣಕಾಸು ಖಾತೆಯನ್ನೂ ಹೊಂದಿದ್ದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಸತತ 6 ಬಜೆಟ್ ಮಂಡಿಸಿದ್ದಾರೆ. ಇದನ್ನೂ ಓದಿ: ಇಂದು 14ನೇ ಬಜೆಟ್ ಮಂಡಿಸಲಿರುವ ಸಿಎಂ- ಗ್ಯಾರಂಟಿ ಮಧ್ಯೆ ಹೆಚ್ಚಿದ ನಿರೀಕ್ಷೆ
ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿರುವ ಸಿದ್ದರಾಮಯ್ಯ, ಇಂದು ತಮ್ಮ 14ನೇ ಬಜೆಟ್ ಮಂಡಿಸಲಿದ್ದಾರೆ.
Web Stories