ಈ ಬಾರಿಯ ಬಜೆಟ್ ನಲ್ಲಿ (Karnataka Budget) ಸಿನಿಮಾ (Cinema) ರಂಗಕ್ಕೆ ಬಂಪರ್ ಕೊಡುಗೆ ನೀಡಲಾಗುತ್ತದೆ ಎಂದು ನಂಬಲಾಗಿತ್ತು. ಅದರಲ್ಲೂ ಫಿಲ್ಮ್ ಸಿಟಿ, ಚಲನಚಿತ್ರ ನೀತಿ ಕುರಿತಂತೆ ಹಲವಾರು ಕೊಡುಗೆಗಳನ್ನು ನಿರೀಕ್ಷೆ ಮಾಡಲಾಗಿತ್ತು. ಆದರೆ, ಚಿತ್ರೋದ್ಯಮಕ್ಕೆ ಹೇಳಿಕೊಳ್ಳುವಂತಹ ಯೋಜನೆಗಳು ಘೋಷಣೆ ಆಗಿಲ್ಲ.
Advertisement
ಸಿಎಂ ಬಸವರಾಜ ಬೊಮ್ಮಾಯಿಗೂ (Basavaraja Bommai) ಸಿನಿಮಾ ರಂಗಕ್ಕೂ ಹತ್ತಿರದ ನಂಟಿದೆ. ಅಲ್ಲದೇ, ಇವರ ಸಚಿವ ಸಂಪುಟದ ಅನೇಕ ಸದಸ್ಯರು ಸಿನಿಮಾ ಕ್ಷೇತ್ರದೊಂದಿಗೆ ಪ್ರತ್ಯೆಕ್ಷ ಹಾಗೂ ಪರೋಕ್ಷವಾಗಿ ಬಾಂಧವ್ಯ ಇಟ್ಟುಕೊಂಡಿದ್ದಾರೆ. ಇತ್ತೀಚೆಗಷ್ಟೇ ಸಿನಿಮಾ ರಂಗಕ್ಕೆ ಆಗಬೇಕಾದ ಕೆಲಸಗಳ ಕುರಿತಾಗಿ ಹಿರಿಯ ನಿರ್ದೇಶಕರ ನಿಯೋಗ ಸಿಎಂ ಭೇಟಿ ಮಾಡಿ ಮನವಿ ಸಲ್ಲಿಸಲಾಗಿತ್ತು. ಈಗಾಗಿ ಅನೇಕ ನಿರೀಕ್ಷೆಗಳು ಇದ್ದವು. ಇದನ್ನೂ ಓದಿ: ತುಪ್ಪದ ಹುಡುಗಿ ಹಾಟ್ ಹಾಟ್, ಪಡ್ಡೆಹುಡುಗರ ನಿದ್ದೆಗೆಡಿಸಿದ `ರಾ’ಗಿಣಿ
Advertisement
Advertisement
ಈ ಬಾರಿಯ ಬಜೆಟ್ ನಲ್ಲಿ ಸಿನಿಮಾ ರಂಗಕ್ಕೆ ಸಿಕ್ಕಿದ್ದೇನು ಎಂದು ನೋಡುವುದಾದರೆ, ಕನ್ನಡ ಚಿತ್ರರಂಗಕ್ಕೆ ಪ್ರೋತ್ಸಾಹ ನೀಡಲು ರಾಜ್ಯದ ಟೈರ್ -2 ನಗರಗಳಲ್ಲಿ 100 ರಿಂದ 200 ಆಸನಗಳ ಸಾಮರ್ಥ್ಯವುಳ್ಳ ಮಿನಿ ಥಿಯೇಟರ್ ಗಳನ್ನು ಸ್ಥಾಪಿಸಲು ಪ್ರೋತ್ಸಾಹ ನೀಡಲಾಗುತ್ತಿದೆ.
Advertisement
ಜೊತೆಗೆ ನಗರ ಹಾಗೂ ಪಟ್ಟಣಗಳಲ್ಲಿ ಖಾಲಿ ಇರುವ ಜಾಗಗಳನ್ನು ಗುರುತಿಸಿ, ಖ್ಯಾತ ನಟರಾದ ದಿವಗಂತ ಶಂಕರ್ ನಾಗ್ ಅವರ ಹೆಸರಿನಲ್ಲಿ ಟ್ಯಾಕ್ಸ್ ಹಾಗೂ ಆಟೋ ನಿಲ್ದಾಣಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಬಜೆಟ್ ನಲ್ಲಿ ಉಲ್ಲೇಖಿಸಲಾಗಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k