ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಂದು ತಮ್ಮ 15 ನೇ ಬಜೆಟ್ (Karnataka Budget 2024) ಮಂಡನೆ ಮಾಡಿದ್ದು, ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಪಶುವೈದ್ಯಕೀಯ ಕಾಲೇಜು ಕಾರ್ಯಾರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.
ರಾಜ್ಯದ ಆಯ್ದ 20 ತಾಲೂಕುಗಳ ಪಶು ಆಸ್ಪತ್ರೆಗಳನ್ನು ಪಾಲಿಕ್ಲಿನಿಕ್‌ಗಳನ್ನಾಗಿ ಮೇಲ್ದರ್ಜೆಗೇರಿಸಲು 10 ಕೋಟಿ ರೂ. ಅನುದಾನ ನೀಡಲಾಗುವುದು. ಇನ್ನು ದುಸ್ಥಿತಿಯಲ್ಲಿರುವ 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣ ಮಾಡುವ ಗುರಿ ಇದೆ ಎಂದು ಸಿಎಂ ತಿಳಿಸಿದರು.
ಕರ್ನಾಟಕ ರೈತ ಸಮೃದ್ಧಿ ಯೋಜನೆಯೊಂದಿಗೆ ಸಂಯೋಜಿಸಿ ಕುರಿ ಸಾಕಾಣಿಕೆ, ಹೈನುಗಾರಿಕೆ, ಹಂದಿ ಮತ್ತು ಕೋಳಿ ಸಾಕಾಣಿಕೆಗೆ ಉತ್ತೇಜನ ನೀಡಲಾಗುವುದು ಎಂದು ಹೇಳಿದರು. ಇದನ್ನೂ ಓದಿ: Karnataka Budget 2024 – ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜ್‍ಗಳನ್ನು ಐಐಟಿಯಂತೆ ಅಭಿವೃದ್ಧಿ
ವಲಸೆ ಕುರಿಗಾರರ ಅಭ್ಯುದಯಕ್ಕೆ ಕ್ರಮ ಹಾಗೂ ಅವರ ಮೇಲಿನ ಶೋಷಣೆ ಮತ್ತು ದೌರ್ಜನ್ಯ ತಡೆಯಲು ‘ಕುರಿಗಾಹಿಗಳ ಮತ್ತು ಸ್ವತ್ತುಗಳ ಮೇಲೆ ದೌರ್ಜನ್ಯ ತಡೆ ಕಾಯ್ದೆ’ ಜಾರಿಗೊಳಿಸುವ ಯೋಜನೆಯಿಂದೆ ಎಂದರು.