ಬೆಂಗಳೂರು: ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ ಎಂದು ಮತ್ತೆ ರಾಜ್ಯ ಸರ್ಕಾರದ ವಿರುದ್ಧ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ (Harish Poonja) ಕಿಡಿಕಾರಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಬಜೆಟ್ (karnataka Budget 2024) ಮಂಡನೆಯ ಸಂಬಂಧ ಬಿಜೆಪಿ ಇಂದು ವಿಧಾನಸೌಧದ ಹೊರಗೆ ಪ್ರತಿಭಟನೆ ನಡೆಸುತ್ತಿದೆ. ಈ ಬೆನ್ನಲ್ಲೇ ಶಾಸಕರು ಪ್ರತಿಭಟನೆಯ ಫೋಟೋಗಳ ಜೊತೆ ‘ನಮ್ಮ ತೆರಿಗೆ ನಮ್ಮ ಹಕ್ಕು, ನಮ್ಮ ತೆರಿಗೆ ನಮಗೆ ಕೊಡಿ. ದಕ್ಷಿಣ ಕನ್ನಡದ ತೆರಿಗೆ ದಕ್ಷಿಣ ಕನ್ನಡಕ್ಕೆ ನೀಡಿ. ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ’ ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
Advertisement
Advertisement
ಈ ಹಿಂದೆ ಆಗಿದ್ದ ವಿವಾದವೇನು?: ಈ ಹಿಂದೆ ಹರೀಶ್ ಪೂಂಜ ಅವರು ಫೇಸ್‍ಬುಕ್‍ನಲ್ಲಿ’ಹಿಂದೂಗಳ ತೆರಿಗೆ ಹಿಂದೂಗಳಿಗೆ ಸಲ್ಲಬೇಕು. ಈ ಹಣ ಹಿಂದೂಗಳ ಅಭಿವೃದ್ಧಿಗೆ ಮಾತ್ರ ಸಲ್ಲಿಕೆಯಾಗಬೇಕು. ಹಿಂದೂಗಳು ಕಟ್ಟಿದ ತೆರಿಗೆ ಹಣ ಇತರ ಧರ್ಮದ ಜನರಿಗೆ ಸೇರುವುದು ಅನ್ಯಾಯ’ ಎಂದು ಪೆÇೀಸ್ಟ್ ಹಾಕಿದ್ದರು. ಇದು ರಾಜ್ಯಾದ್ಯಂತ ಭಾರೀ ಚರ್ಚೆಯನ್ನು ಹುಟ್ಟು ಹಾಕಿತ್ತು. ಇದನ್ನೂ ಓದಿ: Karnataka Budget 2024: ಅಲ್ಪಸಂಖ್ಯಾತರಿಗೆ ಬಂಪರ್ ಕೊಡುಗೆ – ವಕ್ಫ್ ಆಸ್ತಿ ಸಂರಕ್ಷಣೆಗೆ 100 ಕೋಟಿ ರೂ. ಘೋಷಣೆ
Advertisement
Advertisement
ಹೇಳಿಕೆ ಬಗ್ಗೆ ಸಮರ್ಥನೆ: ತಮ್ಮ ಪೋಸ್ಟ್ ವಿವಾದವಾಗುತ್ತಿದ್ದಂತೆಯೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಶಾಸಕರು, ಸಂಸದ ಡಿ.ಕೆ. ಸುರೇಶ್ ಅವರ ದೇಶ ವಿಭಜನೆ ಹೇಳಿಕೆಗೆ ಸಾಮಾನ್ಯ ರೀತಿ ಖಂಡಿಸಿದ್ರೆ ಅವರಿಗೆ ಅರ್ಥ ಆಗಲ್ಲ. ಅದಕ್ಕಾಗಿ ಈ ರೀತಿ ಹೇಳಿಕೆ ನೀಡುತ್ತಿದ್ದೇನೆ. ಹಿಂದೂಗಳ ತೆರಿಗೆಯನ್ನು ಹಿಂದೂಗಳ ಅಭಿವೃದ್ಧಿಗೆ ನೀಡಿ ಎಂದು ಕೇಳುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸುವ ಮೂಲಕ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು. ಇದನ್ನೂ ಓದಿ: ಕಿಕ್ ಪ್ರಿಯರಿಗೆ ಶಾಕ್- ಅಬಕಾರಿಗೆ ಬಿಗ್ ಟಾರ್ಗೆಟ್: ಹಿಂದಿನ ಬಜೆಟ್‌ನಲ್ಲಿ ಗುರಿ ಎಷ್ಟಿತ್ತು?