ಬೆಂಗಳೂರು: ಗ್ಯಾರಂಟಿ ಯೋಜನೆಗಳ (Guarantee Scheme) ಜಾರಿಗಾಗಿ ಇಡೀ ಜಗತ್ತು ನಮ್ಮತ್ತ ಮೆಚ್ಚುಗೆಯ ನೋಟ ಬೀರಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ.
ತಮ್ಮ ಬಜೆಟ್ ಭಾಷಣದಲ್ಲಿ (Budget Speech) ಸಿಎಂ, ಅನ್ನಭಾಗ್ಯ ಯೋಜನೆಗಳ ಮೂಲಕ ಕೋಟ್ಯಂತರ ಜನರ ಕೈಗೆ ಹಂಚಿಕೆ ಮಾಡಲಾಗುತ್ತಿದೆ. ಈ ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 50,000 ದಿಂದ 55,000 ರೂ. ಗಳನ್ನು ಒದಗಿಸಲಾಗುತ್ತಿದೆ ಎಂದು ತಿಳಿಸಿದರು.
Advertisement
Advertisement
ಸಿಎಂ ಹೇಳಿದ್ದೇನು?
ಸಮಯ ಕಳೆದಂತೆ ಗ್ಯಾರಂಟಿ ಯೋಜನೆಗಳ ಆರ್ಥಿಕ ಮತ್ತು ಸಾಮಾಜಿಕ ಅನುಕೂಲಗಳು ಇನ್ನಷ್ಟು ಸ್ಪಷ್ಟವಾಗಿ ಗೋಚರಿಸಲಿವೆ. ಹಲವು ದೇಶಗಳು ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ನಮ್ಮ ಕೆಲಸದ ಅಧ್ಯಯನ ನಡೆಸಿ, ಶ್ಲಾಘಿಸಿವೆ. ಆದರೆ ಗ್ಯಾರಂಟಿ ಯೋಜನೆಗಳ ಮೇಲಿನ ನನ್ನ ನಂಬಿಕೆ ದೃಢವಾಗಲು ಕೇವಲ ಈ ಅಧ್ಯಯನಗಳಷ್ಟೇ ಕಾರಣವಲ್ಲ.
Advertisement
ಬಸ್ ಹತ್ತುವ ಮುನ್ನ ತಲೆಬಾಗಿ ನಮಸ್ಕರಿಸಿದ ಮಹಿಳೆಯ ಮುಖದಲ್ಲಿದ್ದ ಸಂತೋಷ, ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಲಕ್ಷಾಂತರ ಮಹಿಳೆಯರ ಪ್ರಾರ್ಥನೆ, ಯುವನಿಧಿಯಡಿ ನೆರವು ಪಡೆದ ನಿರುದ್ಯೋಗಿ ಯುವಕನ ಆನಂದಭಾಷ್ಪ- ಇವು ಗ್ಯಾರಂಟಿ ಯೋಜನೆಗಳ ಮೇಲಿನ ನನ್ನ ನಂಬಿಕೆಯನ್ನು ಇನ್ನಷ್ಟು ಬಲಪಡಿಸಿದೆ.
Advertisement
ಅಭಿವೃದ್ಧಿಯ ಫಲವನ್ನು ಅದರ ಹಕ್ಕುದಾರರಾದ ಜನಸಾಮಾನ್ಯರಿಗೆ ಹಿಂತಿರುಗಿಸುವುದರಲ್ಲಿ ಅನನ್ಯವಾದ ಸಂತೃಪ್ತಿಯಿದೆ.10. ಆದರೆ ವಿರೋಧಿಗಳು ಗ್ಯಾರಂಟಿ ಯೋಜನೆಗಳನ್ನು ಬಿಟ್ಟ ಭಾಗ್ಯಗಳೆಂದು ಬಣ್ಣಿಸಿ ರಾಜ್ಯ ದಿವಾಳಿಯಾಗಿದೆ ಎನ್ನುತ್ತಿವೆ ಎಂದು ತಿರುಗೇಟು ನೀಡಿದರು.