ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು (Siddaramaiah) ಬಜೆಟ್‌ನಲ್ಲಿ ರಾಜಧಾನಿ ಬೆಂಗಳೂರಿಗೆ (Bengaluru) ಬಂಪರ್ ಯೋಜನೆ ಪ್ರಕಟಿಸಿದ್ದಾರೆ. ಆದರೆ ಬಜೆಟ್‌ನಲ್ಲಿ (Budget) ಘೋಷಿಸಿದ ಕೆಲ ಘೋಷಣೆಗಳ ಪೈಕಿ ಬೆಂಗಳೂರಿಗೆ ಸಂಬಂಧಿಸಿದ ಸುರಂಗ (Tunnel) ಮತ್ತು ಸ್ಕೈ ಡೆಕ್ (Sky DecK) ನಿರ್ಮಾಣಕ್ಕೆ ಸ್ಪಷ್ಟತೆ ಸಿಕ್ಕಿಲ್ಲ.
ಸಿಲಿಕಾನ್ ಸಿಟಿಯ ಸಂಚಾರ ದಟ್ಟಣೆಯನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಬೆಂಗಳೂರಲ್ಲಿ ಟ್ರಾಫಿಕ್ (Traffic) ಹೆಚ್ಚಾಗಿರುವ ಹೆಬ್ಬಾಳ ಜಂಕ್ಷನ್ ನಲ್ಲಿ ಪ್ರಾಯೋಗಿಕ ಸುರಂಗ ನಿರ್ಮಾಣದ ಪ್ರಸ್ತಾಪ ಬಜೆಟ್‌ನಲ್ಲಿದೆ. ಈ ಮೂಲಕ ಸುರಂಗ ಮಾರ್ಗದ ನಿರ್ಮಾಣ ಹೊಣೆ ರಾಜ್ಯದ ಮೇಲೆ ಬಿದ್ದಿದೆ. ಇದನ್ನೂ ಓದಿ: ಕಾಂತಾರ-2ನಲ್ಲಿ ದೈವಾರಾಧನೆ ಪ್ರದರ್ಶನವಾದ್ರೆ ಉಗ್ರ ಹೋರಾಟ – ರಿಷಬ್ ಶೆಟ್ಟಿಗೆ ವಿಹೆಚ್‌ಪಿ, ಬಜರಂಗ ದಳ ಎಚ್ಚರಿಕೆ
ಕೆಲ ತಿಂಗಳ ಹಿಂದೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಅವರು ಸುರಂಗವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದಲೇ ನಿರ್ಮಾಣ ಮಾಡುವ ಚಿಂತನೆಯಿದೆ. ಈ ಸುರಂಗ ಮಾರ್ಗದ ನಿರ್ಮಾಣದ ಬಗ್ಗೆ ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಜೊತೆ ಚರ್ಚಿಸಲಾಗಿದೆ ಎಂದಿದ್ದರು. ಇದನ್ನೂ ಓದಿ: ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ನೋಂದಣಿ ಹೆಸರಲ್ಲಿ ದೋಖಾ – ಅಪ್ಲೈ ಮಾಡುವ ಮುನ್ನ ಎಚ್ಚರ!
ಈಗ ಅಂತಿಮವಾಗಿ ಸುರಂಗ ನಿರ್ಮಾಣದ ಹೊಣೆ ರಾಜ್ಯ ಸರ್ಕಾರ ಹೊತ್ತುಕೊಂಡಿದೆ. ಆದರೆ ಸುರಂಗ ನಿರ್ಮಾಣಕ್ಕೆ ಮೀಸಲಿಡಬಹುದಾದ ಹಣದ ಬಗ್ಗೆಯೂ ಬಜೆಟ್‌ನಲ್ಲಿ ಸರಿಯಾದ ಸ್ಪಷ್ಟನೆ ಸಿಕ್ಕಿಲ್ಲ.
ದೇಶದಲ್ಲೇ ಅತೀ ಎತ್ತರದ ಗೋಪುರ ಅಥವಾ ಸ್ಕೈ ಡೆಕ್ ನಿರ್ಮಾಣಕ್ಕೆ ಬಜೆಟ್ ನಲ್ಲಿ ಘೋಷಿಸಲಾಗಿದೆ. ಆದರೆ ನಗರದಲ್ಲಿ 250 ಮೀಟರ್ ಎತ್ತರದ ಸ್ಕೈಡೆಕ್ ಅನ್ನು ಎಲ್ಲಿ ಅಥವಾ ಯಾವ ಸ್ಥಳದಲ್ಲಿ ನಿರ್ಮಿಸಲಾಗುತ್ತದೆ? ಈ ಅತೀ ಎತ್ತರದ ಗೋಪುರ ನಿರ್ಮಾಣಕ್ಕೆ ತಗುಲುವ ವೆಚ್ಚವೆಷ್ಟು? ಈ ಬಗ್ಗೆ ಯಾವುದೇ ಮಾಹಿತಿಯನ್ನು ಬಜೆಟ್‌ನಲ್ಲಿ ಘೋಷಣೆ ಮಾಡಿಲ್ಲ.