ಬೆಂಗಳೂರು: ರಾಜ್ಯದ ಆರ್ಥಿಕತೆಯು (Karnataka Economy) 2023-24ನೇ ಸಾಲಿನಲ್ಲಿ ಶೇ.6.6ರಷ್ಟು (ಸ್ಥಿರ ಬೆಲೆಗಳಲ್ಲಿ) ಬೆಳವಣಿಗೆಯಾಗಲಿದೆ ಎಂದು ಅಂದಾಜಿಸಲಾಗಿದೆ. ರಾಜ್ಯದ ಈ ಶ್ಲಾಘನೀಯ ಬೆಳವಣಿಗೆಯು, ದೇಶದ ಆರ್ಥಿಕತೆಯನ್ನು ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದೆ. 2022-23ಕ್ಕೆ ಹೋಲಿಸಿದರೆ ಪ್ರಸಕ್ತ ವರ್ಷದಲ್ಲಿ GST ತೆರಿಗೆ ಸಂಗ್ರಹಣೆಯು ಶೇ.18ರಷ್ಟು ಹೆಚ್ಚಳ ಕಂಡಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Advertisement
ಸಿಎಂ ಹೇಳಿದ್ದೇನು?
ತಮ್ಮ ಬಜೆಟ್ ಭಾಷಣದಲ್ಲಿ ಮಾತನಾಡಿದ ಅವರು, ಸೇವಾ ಮತ್ತು ಕೈಗಾರಿಕಾ ವಲಯಗಳು ರಾಜ್ಯದ ಆರ್ಥಿಕ ಪ್ರಗತಿಯಲ್ಲಿ ಪ್ರಮುಖ ಪಾತ್ರ ವಹಿಸಿವೆ. ಕಳೆದ ಸಾಲಿಗೆ ಹೋಲಿಸಿದರೆ, 2023-24ನೇ ಸಾಲಿನಲ್ಲಿ ಸೇವಾ ವಲಯವು ಶೇ.8.7ರಷ್ಟು (ಸ್ಥಿರ ಬೆಲೆಗಳಲ್ಲಿ) ಮತ್ತು ಕೈಗಾರಿಕೆ ವಲಯವು ಶೇ.7.5ರಷ್ಟು (ಸ್ಥಿರ ಬೆಲೆಗಳಲ್ಲಿ) ಬೆಳವಣಿಗೆ ಸಾಧಿಸಿದೆ. ಪ್ರಸಕ್ತ ವರ್ಷದಲ್ಲಿ ಮುಂಗಾರು ವೈಫಲ್ಯದಿಂದ ರಾಜ್ಯವು ತೀವ್ರ ಬರಗಾಲ ಎದುರಿಸಬೇಕಾಯಿತು. ಇದರಿಂದಾಗಿ ಕೃಷಿ ಕ್ಷೇತ್ರವು ಶೇ.1.8ರಷ್ಟು (ಸ್ಥಿರ ಬೆಲೆಗಳಲ್ಲಿ) ಋಣಾತ್ಮಕ ಬೆಳವಣಿಗೆ ಹೊಂದಿದೆ. ಇದನ್ನೂ ಓದಿ: Karnataka State Budget 2024- ರಾಜ್ಯ ಬಜೆಟ್ ನಲ್ಲಿ ಬಸವಣ್ಣ: ಸಾಂಸ್ಕೃತಿಕ ನಾಯಕನಿಗೆ ಜೈಕಾರ
Advertisement
Advertisement
ಜಾಗತಿಕ ಆರ್ಥಿಕ ಬೆಳವಣಿಗೆಯಲ್ಲಿನ ಕುಸಿತ ಹಾಗೂ ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿನ ಬಡ್ಡಿ ದರಗಳ ಹೆಚ್ಚಳದಿಂದ ಪ್ರಸಕ್ತ ವರ್ಷದ ಮೊದಲ ಆರು ತಿಂಗಳಲ್ಲಿ ನಮ್ಮ ದೇಶಕ್ಕೆ ವಿದೇಶಿ ನೇರ ಹೂಡಿಕೆಯ ಕುಸಿತದ ನಡುವೆಯೂ, ರಾಜ್ಯದಲ್ಲಿ ಸೆಪ್ಟೆಂಬರ್ 2023ರ ಅಂತ್ಯದವರೆಗೆ 2.8 ಶತಕೋಟಿ ಅಮೇರಿಕನ್ ಡಾಲರ್‌ಗಳಷ್ಟು ವಿದೇಶಿ ಹೂಡಿಕೆಯಾಗಿರುತ್ತದೆ. ಇದು ವಿದೇಶಿ ಬಂಡವಾಳದಾರರಿಗೆ ರಾಜ್ಯವು ಆಕರ್ಷಕ ಹೂಡಿಕೆ ಕೇಂದ್ರವಾಗಿರುವುದನ್ನು ಸಾಬೀತುಪಡಿಸಿದೆ. ಇದನ್ನೂ ಓದಿ: Karnataka Budget 2024: ಅಲ್ಪಸಂಖ್ಯಾತರಿಗೆ ಬಂಪರ್ ಕೊಡುಗೆ – ವಕ್ಫ್ ಆಸ್ತಿ ಸಂರಕ್ಷಣೆಗೆ 100 ಕೋಟಿ ರೂ. ಘೋಷಣೆ
Advertisement
ಕರ್ನಾಟಕ ರಾಜ್ಯವು ದೇಶದಲ್ಲಿ ಅತಿ ಹೆಚ್ಚು ಜಿಎಸ್‌ಟಿ (ಸರಕು ಮತ್ತು ಸೇವಾ ತರಿಗೆ) ಸಂಗ್ರಹಿಸುವ 2ನೇ ರಾಜ್ಯವಾಗಿದ್ದು, 2022-23ಕ್ಕೆ ಹೋಲಿಸಿದರೆ ಪ್ರಸಕ್ತ ವರ್ಷದಲ್ಲಿ ಜಿಎಸ್‌ಟಿ ತೆರಿಗೆ ಸಂಗ್ರಹಣೆಯು ಶೇ.18ರಷ್ಟು ಹೆಚ್ಚಳ ಕಂಡಿದೆ. ಸ್ವಂತ ತೆರಿಗೆ ರಾಜಸ್ವವು ಹಿಂದಿನ ವರ್ಷಕ್ಕೆ ಹೋಲಿಸಿದರೆ 2023-24ರಲ್ಲಿ ಶೇ.12ರಷ್ಟು ಬೆಳವಣಿಗೆಯನ್ನು ಸಾಧಿಸಲಿದೆ. ಗ್ಯಾರಂಟಿ ಯೋಜನೆಗಳಿಂದ ಜನರ ಆದಾಯ ಪ್ರಮಾಣ ಹೆಚ್ಚಾಗಿದೆ ಎಂದು ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: Karnataka Budget 2024- ರಶ್ಮಿಕಾ ನೋವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ: ಡೀಪ್ ಫೇಕ್ ವಿರುದ್ಧ ಕ್ರಮಕ್ಕೆ ನಿರ್ಧಾರ