ಬೆಂಗಳೂರು: ಕಡಲಿಗಿಳಿದು ಮೀನು ಹಿಡಿಯುವ ಮೀನುಗಾರರ ಹಿತರಕ್ಷಣೆಗೆ ಸರ್ಕಾರ ಪ್ರಮುಖ ಆದ್ಯತೆ ನೀಡಿದೆ. ಮೀನುಗಾರರ ರಕ್ಷಣೆಗೆ ಸಮುದ್ರ ಅಂಬುಲೆನ್ಸ್ ಖರೀದಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಘೋಷಣೆ ಮಾಡಿದ್ದು, ಇದು ರಾಜ್ಯದಲ್ಲೇ ಪ್ರಪ್ರಥಮವಾಗಿದೆ.
ಇಂದು ತಮ್ಮ 15ನೇ ಬಜಟ್ (Karnataka Budget 2024) ಮಂಡನೆ ಮಾಡಿದ ಅವರು, ಮೀನುಗಾರರ ರಕ್ಷಣೆಗೆಂದು ಸಮುದ್ರ ಅಂಬ್ಯುಲೆನ್ಸ್ (Sea Ambulance) ಖರೀದಿಗೆ 7 ಕೋಟಿ ರೂ. ಅನುದಾನ ನೀಡಲಾಗುವುದು ಎಂದರು. ಇದನ್ನೂ ಓದಿ: ಬೆಂಗಳೂರು ಸೇರಿ ಈ 11 ನಗರಗಳಲ್ಲಿ ರಾತ್ರಿ 1 ಗಂಟೆವರೆಗೆ ವ್ಯಾಪಾರ ವಹಿವಾಟು
Advertisement
Advertisement
ಮೀನುಗಾರಿಕೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಮುಂದಿನ ವರ್ಷಗಳಲ್ಲಿ 3,000 ಕೋಟಿ ರೂ.ಗಳಷ್ಟು ಬೃಹತ್ ಗಾತ್ರದ ವಿವಿಧ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುವುದು. ಮತ್ಸ ಆಶಾಕಿರಣ ಯೋಜನೆಯಡಿ ಕರಾವಳಿ ಮೀನುಗಾರರ ಪರಿಹಾರದ ರಾಜ್ಯದ ಪಾಲು 3,000 ರೂ. ಗಳಿಗೆ ಹೆಚ್ಚಳ ಮಾಡುವುದಾಗಿ ಸಿಎಂ ತಿಳಿಸಿದರು.
Advertisement
ವಿವಿಧ ವಸತಿ ಯೋಜನೆಗಳಡಿ 10,000 ವಸತಿರಹಿತ ಮೀನುಗಾರರಿಗೆ ಮನೆ ನಿರ್ಮಿಸಲು ಸಹಾಯಧನ ನೀಡಲಾಗುವುದು ಎಂದರು.