ಬೆಂಗಳೂರು: ಬಜೆಟ್ ಭಾಷಣದಲ್ಲೂ ಸಿಎಂ ಸಿದ್ದರಾಮಯ್ಯ (CM Siddaramaiah) ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದು ಅವೈಜ್ಞಾನಿಕವಾಗಿ ಜಿಎಸ್‌ಟಿ (GST) ಜಾರಿ ಮಾಡಿದ ಪರಿಣಾಮ ರಾಜ್ಯಕ್ಕೆ (Karnataka) ಕಳೆದ ಏಳು ವರ್ಷಗಳ ಅವಧಿಯಲ್ಲಿ ಒಟ್ಟು 59,274 ಕೋಟಿ ರೂ. ನಷ್ಟವಾಗಿದೆ ಎಂದು ಕಿಡಿಕಾರಿದ್ದಾರೆ.
ಬಜೆಟ್ ಭಾಷಣದಲ್ಲಿ ಏನಿದೆ?
ಕರ್ನಾಟಕ ರಾಜ್ಯವು ದೇಶದಲ್ಲಿ ಅತಿ ಹೆಚ್ಚು ಜಿಎಸ್‌ಟಿ ತೆರಿಗೆ ಸಂಗ್ರಹಿಸುವ 2ನೇ ರಾಜ್ಯವಾಗಿದ್ದು, 2022-23ಕ್ಕೆ ಹೋಲಿಸಿದರೆ ಪ್ರಸಕ್ತ ವರ್ಷದಲ್ಲಿ ಜಿಎಸ್‌ಟಿ ತೆರಿಗೆ ಸಂಗ್ರಹಣೆಯು 18%ರಷ್ಟು ಹೆಚ್ಚಳ ಕಂಡಿದೆ. ಸ್ವಂತ ತೆರಿಗೆ ರಾಜಸ್ವವು ಹಿಂದಿನ ವರ್ಷಕ್ಕೆ ಹೋಲಿಸಿದರೆ 2023-24ರಲ್ಲಿ 12%ರಷ್ಟು ಬೆಳವಣಿಗೆಯನ್ನು ಸಾಧಿಸಲಿದೆ.
Advertisement
Advertisement
ಗ್ಯಾರಂಟಿ ಯೋಜನೆಗಳಿಂದ ಜನರ ಆದಾಯ ಪ್ರಮಾಣ ಹೆಚ್ಚಾಗಿ, ರಾಜ್ಯದ ಸರಕು ಮತ್ತು ಸೇವಾ ತೆರಿಗೆಯನ್ನು ಪರಿಚಯಿಸುವ ಮೂಲಕ ರಾಜ್ಯಗಳ ತೆರಿಗೆ ಸಂಗ್ರಹಣೆಯು 14% ರಷ್ಟು ಬೆಳವಣಿಗೆ ಹೊಂದಲಿದ್ದು, ಒಂದು ವೇಳೆ ಅಂದಾಜಿಗಿಂತ ಕಡಿಮೆ ಸಂಗ್ರಹವಾದಲ್ಲಿ, ಕೇಂದ್ರ ಸರ್ಕಾರದಿಂದ ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರಗಳಿಗೆ ಭರವಸೆ ನೀಡಲಾಗಿತ್ತು. 14% ರಷ್ಟು ಬೆಳವಣಿಗೆ ದರದಂತೆ 2017 ರಿಂದ 2023-24ರವರೆಗೆ ರಾಜ್ಯದಲ್ಲಿ ಒಟ್ಟು 4,92,296 ಕೋಟಿ ರೂ.ಗಳ ಜಿಎಸ್‌ಟಿ ತೆರಿಗೆ ಸಂಗ್ರಹಣೆಯಾಗುತ್ತದೆ ಎಂದು ಅಂದಾಜಿಸಲಾಗಿತ್ತು. ಆದರೆ ವಾಸ್ತವಿಕವಾಗಿ ರಾಜ್ಯದಲ್ಲಿ 3,26,764 ಕೋಟಿ ರೂ.ಗಳ ಜಿಎಸ್‌ಟಿ ತೆರಿಗೆ ಸ್ವೀಕೃತವಾಗಿದೆ.
Advertisement
ಜಿಎಸ್‌ಟಿ ತೆರಿಗೆ ಸಂಗ್ರಹಣೆಯಲ್ಲಿನ ಕೊರತೆ 1,65,532 ಕೋಟಿ ರೂ.ಗಳಿಗೆ ಎದುರಾಗಿ, ಕೇಂದ್ರ ಸರ್ಕಾರವು ರಾಜ್ಯಕ್ಕೆ ಕೇವಲ 1,06,258 ಕೋಟಿ ರೂ. ಪರಿಹಾರವನ್ನು ಮಾತ್ರ ಬಿಡುಗಡೆ ಮಾಡಿದೆ. ಜಿಎಸ್‌ಟಿ ತೆರಿಗೆಯ ಈ ಅವೈಜ್ಞಾನಿಕ ಅನುಷ್ಠಾನದಿಂದ ರಾಜ್ಯಕ್ಕೆ ಕಳೆದ ಏಳು ವರ್ಷಗಳ ಅವಧಿಯಲ್ಲಿ ಒಟ್ಟು 59,274 ಕೋಟಿ ರೂ.ಗಳ ನಷ್ಟವಾಗಿರುತ್ತದೆ. ಇದನ್ನೂ ಓದಿ: Karnataka Budget: ರಾಜ್ಯದ ಗ್ರಾಮೀಣ ರಸ್ತೆಗಳಿನ್ನು ಪ್ರಗತಿ ಪಥ, ಕಲ್ಯಾಣ ಪಥ.!
Advertisement
15ನೇ ಹಣಕಾಸು ಆಯೋಗವು 2020-21ಕ್ಕೆ ಅನ್ವಯವಾಗುವಂತೆ ನೀಡಿದ್ದ ಮಧ್ಯಂತರ ವರದಿಯ ಶಿಫಾರಸ್ಸಿನಿಂದ ರಾಜ್ಯಕ್ಕಾದ ಅನ್ಯಾಯವನ್ನು ಸರಿಪಡಿಸುವಲ್ಲಿ ವಿಫಲವಾಯಿತು. ಹಿಂದಿನ ಹಿಂದಿನ ಸರ್ಕಾರವು ಕೈಚೆಲ್ಲಿ ಕೂತಿದ್ದರ ಪರಿಣಾಮವಾಗಿ ಅಂತಿಮ ವರದಿಯ ಶಿಫಾರಸ್ಸಿನಲ್ಲಿಯೂ ಸಹ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಹೆಚ್ಚು ನಷ್ಟ ಅನುಭವಿಸಬೇಕಾಯಿತು.
ರಾಜ್ಯದ ಜಿಎಸ್‌ಡಿಪಿ ಲೆಕ್ಕಾಚಾರ ಮಾಡುವ ವಿಧಾನದಲ್ಲಿ ಬದಲಾವಣೆ ಹಾಗೂ 1971ರ ಬದಲು 2011ರ ಜನಗಣತಿ ವರದಿಯ ಬಳಕೆಯಿಂದಾಗಿ ಅಭಿವೃದ್ಧಿಶೀಲ ರಾಜ್ಯಗಳಿಗೆ ಭಾರೀ ನಷ್ಟವುಂಟಾಗಿದೆ. 14ನೇ ಹಣಕಾಸು ಆಯೋಗ ಶಿಫಾರಸ್ಸು ನೀಡಿದ್ದ ಹಂಚಿಕೆಯ ಸೂತ್ರವನ್ನು ಪಾಲಿಸಿದ್ದರೆ ಕರ್ನಾಟಕ ರಾಜ್ಯಕ್ಕೆ 2,77,350 ಕೋಟಿ ರೂ.ಗಳ ತೆರಿಗೆ ಪಾಲು ಸ್ವೀಕೃತವಾಗುತ್ತಿತ್ತು. ಆದರೆ 15 ಹಣಕಾಸು ಆಯೋಗದ ಶಿಫಾರಸ್ಸಿನಿಂದ ರಾಜ್ಯಕ್ಕೆ 2,15,253 ಕೋಟಿ ರೂ.ಗಳು ಮಾತ್ರ ಹಂಚಿಕೆಯಾಗಲಿದೆ ಎಂದು ಸರ್ಕಾರ ಅಂದಾಜಿಸಲಾಗಿದೆ. 15ನೇ ಹಣಕಾಸು ಆಯೋಗದ ಆರು ವರ್ಷದ ಅವಧಿಯಲ್ಲಿ ಕೇಂದ್ರದಿಂದ ರಾಜ್ಯಗಳಿಗೆ ಹಂಚಿಕೆಯಾಗುವ ಒಟ್ಟು ತೆರಿಗೆ ಹಂಚಿಕೆಯಲ್ಲಿ, ರಾಜ್ಯಕ್ಕೆ 62,098 ಕೋಟಿ ರೂ.ಗಳಷ್ಟು ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
ಇದಲ್ಲದೆ15ನೇ ಹಣಕಾಸು ಆಯೋಗವು ಮೊದಲನೆಯ ವರದಿಯಲ್ಲಿ 2020-21ನೇ ವರ್ಷಕ್ಕೆ 5,495 ಕೋಟಿ ರೂ. ವಿಶೇಷ ಅನುದಾನ ಒದಗಿಸುವಂತೆ ಹಾಗೂ ಅಂತಿಮ ವರದಿಯಲ್ಲಿ ಬೆಂಗಳೂರಿನ ಅಭಿವೃದ್ಧಿಗೆ 6,000 ಕೋಟಿ ರೂ. ರಾಜ್ಯ ಕೇಂದ್ರಿತ ಅನುದಾನವನ್ನು ಶಿಫಾರಸ್ಸು ಮಾಡಿತ್ತು. ಆದರೆ ಈ ಶಿಫಾರಸ್ಸುಗಳನ್ನು ಕೇಂದ್ರ ಸರ್ಕಾರವು ತಿರಸ್ಕರಿಸಿರುತ್ತದೆ. ರಾಜ್ಯದಲ್ಲಿ ಡಬಲ್ ಇಂಜಿನ್ ಎಂದು ಹೇಳಿಕೊಳ್ಳುವ ಸರ್ಕಾರ ಇದ್ದರೂ ಸಹ ಕೇಂದ್ರದಿಂದ ಒಟ್ಟು 11,495 ಕೋಟಿ ರೂ.ಗಳ ವಿಶೇಷ ಅನುದಾನ ಪಡೆಯುವಲ್ಲಿ ಹಿಂದಿನ ಸರ್ಕಾರವು ಅಸಮರ್ಥವಾಗಿರುತ್ತದೆ. ಇದನ್ನೂ ಓದಿ: ಕಿಕ್ ಪ್ರಿಯರಿಗೆ ಶಾಕ್- ಅಬಕಾರಿಗೆ ಬಿಗ್ ಟಾರ್ಗೆಟ್: ಹಿಂದಿನ ಬಜೆಟ್‌ನಲ್ಲಿ ಗುರಿ ಎಷ್ಟಿತ್ತು?
15ನೇ ಹಣಕಾಸು ಆಯೋಗಕ್ಕೆ ಸರಿಯಾದ ವಿಶ್ಲೇಷಣೆಯೊಂದಿಗೆ ಜ್ಞಾಪನಾ ಪತ್ರದ (Memorandum) ಮೂಲಕ ಹಕ್ಕೊತ್ತಾಯ ಮಂಡಿಸಿದ್ದರೂ, ರಾಜ್ಯಕ್ಕೆ ನ್ಯಾಯ ಸಿಕ್ಕಿರುವುದಿಲ್ಲ. ಈ ಅನ್ಯಾಯವು ಮರುಕಳಿಸದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ ಸಚಿವ ಸಂಪುಟದ ಮಾರ್ಗದರ್ಶನದೊಂದಿಗೆ ವಿಷಯ ತಜ್ಞರನ್ನು ಒಳಗೊಂಡ ತಾಂತ್ರಿಕಕೋಶವನ್ನು ರಚಿಸಿ ರಾಜ್ಯಕ್ಕೆ ಹೆಚ್ಚು ತೆರಿಗೆ ಪಾಲು ಮತ್ತು ಅನುದಾನಗಳನ್ನು ಪಡೆಯಲು ಒಂದು ಜ್ಞಾಪನಾ ಪತ್ರವನ್ನು ಸಿದ್ದಪಡಿಸಿ ಸಮರ್ಥವಾದ ಮತ್ತು ವೈಜ್ಞಾನಿಕವಾಗಿ ವಿಶ್ಲೇಷಿಸಿದ ಅಂಕಿಅಂಶಗಳೊಂದಿಗೆ 16ನೇ ಹಣಕಾಸು ಆಯೋಗಕ್ಕೆ ಸಲ್ಲಿಸಲು ನಿರ್ಧರಿಸಲಾಗಿದೆ.
ಕೇಂದ್ರ ಸರ್ಕಾರವು ಸೆಸ್ ಮತ್ತು ಸರ್‌ಚಾರ್ಜ್‌ಗಳನ್ನು ಹೆಚ್ಚಿಸುತ್ತಿದ್ದು, ಅವುಗಳನ್ನು ರಾಜ್ಯಗಳೊಂದಿಗೆ ಹಂಚಿಕೆ ಮಾಡುವುದಿಲ್ಲ. ಕೇಂದ್ರ ಸರ್ಕಾರವು ವಿಧಿಸುವ ಸೆಸ್ ಮತ್ತು ಸರ್‌ಚಾರ್ಜ್‌ಗಳು 2017-18 ರಿಂದ 2023-24ರ ಅವಧಿಯಲ್ಲಿ 153% ನಷ್ಟು ಹೆಚ್ಚಾಗಿರುತ್ತದೆ. ಸೆಸ್ ಮತ್ತು ಸರ್‌ಚಾರ್ಜ್‌ಗಳನ್ನು ರಾಜ್ಯಗಳೊಂದಿಗೆ ಹಂಚಿಕೆ ಮಾಡಿದ್ದರೆ, ರಾಜ್ಯಗಳಿಗೆ ಒಟ್ಟು 11,34,301 ಕೋಟಿ ರೂ.ಗಳು ಹಂಚಿಕೆಯಾಗುತ್ತಿತ್ತು. ಇದರಿಂದ ಕರ್ನಾಟಕ ರಾಜ್ಯಕ್ಕೆ ಮಾತ್ರ ಕಳೆದ ಏಳು ವರ್ಷಗಳ ಅವಧಿಯಲ್ಲಿ ಒಟ್ಟು 45,322 ಕೋಟಿ ರೂ.ಗಳ ನಷ್ಟ ಉಂಟಾಗಿದೆ.