– ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ 1,000 ರೂ. ಹೆಚ್ಚಳ
ಬೆಂಗಳೂರು: ಕಳೆದ ಮೂರು ತಿಂಗಳಿನಿಂದಲೂ ʻಗೃಹಲಕ್ಷ್ಮಿʼ ಯೋಜನೆಯ (Gruha Lakshmi Scheme) ಫಲಾನುಭವಿಗಳಿಗೆ ನೀಡುತ್ತಿದ್ದ ಹಣ ಸ್ಥಗಿತಗೊಂಡಿದೆ. ಇದೇ ವಿಚಾರವಾಗಿ ಆಡಳಿತ-ವಿಪಕ್ಷಗಳ ನಡುವೆ ವಾಗ್ಯುದ್ಧ ನಡೆಯುತ್ತಲೇ ಇದೆ. ಈ ನಡುವೆ ಸಿಎಂ ಸಿದ್ದರಾಮಯ್ಯ (Siddaramaiah) ಅವರು ತಮ್ಮ ಬಜೆಟ್‌ನಲ್ಲಿ ಪ್ರಸಕ್ತ ವರ್ಷ ಯೋಜನೆಗೆ 28,608 ಅನುದಾನ ಮೀಸಲಿಟ್ಟಿರುವುದಾಗಿ ಘೋಷಿಸಿದ್ದಾರೆ.
ಹೌದು. ಗೃಹಲಕ್ಷ್ಮಿ ಯೋಜನೆಯನ್ನು 2023-24ನೇ ಸಾಲಿನಿಂದ ಜಾರಿಗೊಳಿಸಲಾಗಿದ್ದು, 2024-25ನೇ ಸಾಲಿನಲ್ಲಿ 1.22 ಕೋಟಿ ಕುಟುಂಬಗಳ ಯಜಮಾನಿಯರಿಗೆ ಧನಸಹಾಯ ಒದಗಿಸಲಾಗಿತ್ತು. ಪ್ರಸಕ್ತ ವರ್ಷದಲ್ಲಿ ಈ ಯೋಜನೆಗೆ 28,608 ಕೋಟಿ ರೂ. ಅನುದಾನ ಮೀಸಲಿಟ್ಟಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಪತ್ರಕರ್ತರಿಗೆ ‘ಮಾಧ್ಯಮ ಸಂಜೀವಿನಿ’ ಯೋಜನೆ – 5 ಲಕ್ಷ ರೂ. ನಗದು ರಹಿತ ಚಿಕಿತ್ಸೆ
ಅಲ್ಲದೇ ರಾಜ್ಯದ 37 ಲಕ್ಷ ಮಕ್ಕಳ ಆರೈಕೆ ಮತ್ತು ಕಲಿಕೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ (Anganwadi workers) ಗೌರವ ಧನವನ್ನು 1,000 ರೂ.ಗೆ ಹಾಗೂ ಸಹಾಯಕಿಯರ ಗೌರವ ಧನವನ್ನ 750 ರೂ. ಹೆಚ್ಚಲಾಗುವುದು ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಪುತ್ತೂರಿಗೆ ಮೆಡಿಕಲ್ ಕಾಲೇಜು: ಬಜೆಟ್‌ನಲ್ಲಿ ವೈದ್ಯಕೀಯ, ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕ ಕೊಡುಗೆಗಳೇನು?
ಸಕ್ಷಮ ಅಂಗನವಾಡಿ ಯೋಜನೆಯಡಿ 17,454 ಅಂಗನವಾಡಿ ಕೇಂದ್ರಗಳಿಗೆ ಹೆಚ್ಚುವರಿ ಸೌಲಭ್ಯಗಳನ್ನು ಕಲ್ಪಿಸಲು 175 ಕೋಟಿ ರೂ. ನೆರವು ಒದಗಿಸಲಾಗುವುದು, ಅಂಗನವಾಡಿ ಕಟ್ಟಡಗಳಿಗೆ ಸಿ.ಎ. ನಿವೇಶನ ಖರೀದಿಗಾಗಿ 10 ಕೋಟಿ ರೂ. ಮೀಸಲಿಡಲಾಗುದೆ. ವಿಕಲಚೇತನರ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಕುರಿತಂತೆ ವಿಕಲಚೇತನರ ಸಮೀಕ್ಷೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.
ಇದರೊಂದಿಗೆ ಮೈಸೂರಿನ ದೃಷ್ಟಿದೋಷವುಳ್ಳ ಮಕ್ಕಳ ಸರ್ಕಾರಿ ವಸತಿಯುತ ಶಾಲೆ ಹಾಗೂ ಬೆಳಗಾವಿಯಲ್ಲಿರುವ ಶ್ರವಣದೋಷವುಳ್ಳ ಮಕ್ಕಳ ಸರ್ಕಾರಿ ವಸತಿಯುತ ಶಾಲೆಗಳ ಅಭಿವೃದ್ಧಿಗೆ 5 ಕೋಟಿ ರೂ. ನೀಡಲಿದ್ದು, ಇವುಗಳ ನಿರ್ವಹಣೆಯನ್ನು ಸ್ವಯಂ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಕೈಗೊಳ್ಳಲಾಗುವುದು ಅಂತ ಸಿಎಂ ಘೋಷಿಸಿದ್ದಾರೆ. ಇದನ್ನೂ ಓದಿ: ಮೈಸೂರಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ ನಿರ್ಮಾಣಕ್ಕೆ 500 ಕೋಟಿ ಮೀಸಲು – ತವರು ಜಿಲ್ಲೆಗೆ ಸಿಎಂ ಭರ್ಜರಿ ಗಿಫ್ಟ್
ಮುಖ್ಯವಾಗಿ 2025-26ನೇ ಸಾಲಿನಲ್ಲಿ ಮಹಿಳಾ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 94,084 ಕೋಟಿ ರೂ., ಮಕ್ಕಳ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 62,033 ಕೋಟಿ ರೂ. ಒದಗಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರು| ನಂದಿನಿ ಲೇಔಟ್‌ನ 2.5 ಎಕರೆ ಜಾಗದಲ್ಲಿ ಮಲ್ಟಿಪ್ಲೆಕ್ಸ್ ಅಭಿವೃದ್ಧಿ