ಬೆಂಗಳೂರು: ಶಕ್ತಿ ಯೋಜನೆಗೆ (Shakti Scheme) ಬಜೆಟ್‌ನಲ್ಲಿ 5,300 ಕೋಟಿ ರೂ. ಅನುದಾನನ್ನು ಮೀಸಲಿಡಲಾಗಿದೆ.
ತಮ್ಮ ಬಜೆಟ್ ಭಾಷಣದಲ್ಲಿ ಸಿದ್ದರಾಮಯ್ಯ (Siddaramaiah) ಮಹಿಳೆಯರ ಸಬಲೀಕರಣಕ್ಕಾಗಿ ಮತ್ತು ಸಾಮರ್ಥ್ಯ ವೃದ್ಧಿಗಾಗಿ ಪ್ರಪ್ರಥಮವಾಗಿ ಜಾರಿಗೆ ತರಲಾಗಿರುವ ʻಶಕ್ತಿʼ ಯೋಜನೆಯಡಿ ಪ್ರಸಕ್ತ ವರ್ಷ ಇದುವರೆಗೆ ಒಟ್ಟು 226.53 ಕೋಟಿ ಮಹಿಳಾ ಪ್ರಯಾಣಿಕರು ಸೌಲಭ್ಯ ಪಡೆದಿರುತ್ತಾರೆ. ಮಹಿಳೆಯರ ಸ್ವಾವಲಂಬನೆ ಮತ್ತು ಆರ್ಥಿಕ ಅಭಿವೃದ್ಧಿಗೆ ಶಕ್ತಿ ತುಂಬಿದ ಈ ಯೋಜನೆಗಾಗಿ 2024-25 ನೇ ಸಾಲಿನಲ್ಲಿ 5,015 ಕೋಟಿ ರೂ. ವೆಚ್ಚ ಭರಿಸಲಾಗಿದ್ದು, 2025-26ನೇ ಸಾಲಿಗೆ 5,300 ಕೋಟಿ ರೂ. ಒದಗಿಸಲಾಗಿರುತ್ತದೆ ಎಂದು ತಿಳಿಸಿದರು.
Advertisement
Advertisement
ಬಜೆಟ್ ಘೋಷಣೆಗಳು
ಬೆಂಗಳೂರು ಮೆಜೆಸ್ಟಿಕ್ ಬಸ್ ನಿಲ್ದಾಣದ ಜಾಗವನ್ನು ʻಪ್ರಾಜೆಕ್ಟ್ ಮೆಜೆಸ್ಟಿಕ್ʼ ಯೋಜನೆಯಡಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ಪುನರ್ ಅಭಿವೃದ್ಧಿಪಡಿಸಿ, ವಾಣಿಜ್ಯ ಸಂಕೀರ್ಣದೊಂದಿಗೆ ಸಾರಿಗೆ ಹಬ್ ನಿರ್ಮಾಣ
Advertisement
ರಾಜ್ಯದಲ್ಲಿ ಪ್ರಗತಿಯಲ್ಲಿರುವ 42 ಸ್ವಯಂಚಾಲಿತ ಪರೀಕ್ಷಾ ಪಥಗಳ ನಿರ್ಮಾಣವನ್ನು ಸದರಿ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು. 2025-26ನೇ ಸಾಲಿನಲ್ಲಿ ಹೊನ್ನಾವರ, ಚಾಮರಾಜನಗರ ಮತ್ತು ಚಿತ್ರದುರ್ಗದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಸ್ವಯಂಚಾಲಿತ ಪರೀಕ್ಷಾ ಪಥಗಳನ್ನು ನಿರ್ಮಿಸಲು ಕ್ರಮವಹಿಸಲಾಗುವುದು. ಈ ಉದ್ದೇಶಕ್ಕಾಗಿ 12 ಕೋಟಿ ರೂ. ಅನುದಾನ ಮೀಸಲು.
Advertisement
ಸಾರಿಗೆ ಇಲಾಖೆಯ ಅಧೀನ ಕಛೇರಿಗಳಲ್ಲಿನ ಎಲ್ಲಾ ದಾಖಲೆಗಳನ್ನು ಹಂತಹಂತವಾಗಿ ಡಿಜಿಟಲೀಕರಣ ಮಾಡುವ ಉದ್ದೇಶ ಹೊಂದಲಾಗಿರುತ್ತದೆ. 2025-26ನೇ ಸಾಲಿನಲ್ಲಿ ಐದು ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿನ ದಾಖಲೆಗಳನ್ನು ಒಟ್ಟು 25 ಕೋಟಿ ರೂ. ವೆಚ್ಚದಲ್ಲಿ ಡಿಜಿಟಲೀಕರಣ.
ರಾಜ್ಯದಲ್ಲಿ ವಾಹನ ಸಂಚಾರವನ್ನು ಮೇಲ್ವಿಚಾರಣೆ ಮಾಡಲು ಮತ್ತು ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಪತ್ತೆ ಹಚ್ಚಿ ನಿಯಂತ್ರಿಸಲು ದಾವಣಗೆರೆ, ಧಾರವಾಡ, ಕಲಬುರಗಿ, ಬೆಳಗಾವಿ, ಚಿತ್ರದುರ್ಗ, ಹಾವೇರಿ, ಹೊಸಪೇಟೆ, ಬಳ್ಳಾರಿ, ವಿಜಯಪುರ, ದಕ್ಷಿಣ ಕನ್ನಡ ಜಿಲ್ಲೆಗಳ ಒಟ್ಟು 60 ಸ್ಥಳಗಳಲ್ಲಿ 50 ಕೋಟಿ ರೂ. ವೆಚ್ಚದಲ್ಲಿ AI ಆಧಾರಿತ ವಿದ್ಯುನ್ಮಾನ ಕ್ಯಾಮರಾಗಳನ್ನು ಅಳವಡಿಕೆ