ಇಂದು ರಾಜ್ಯ ಬಜೆಟ್‌ ಮಂಡನೆ – ಬಜೆಟ್‌ಗೂ ಮುನ್ನ ಬಿಜೆಪಿ, ಜೆಡಿಎಸ್‌ ಪ್ರತಿಭಟನೆ

Public TV
1 Min Read
siddaramaiah bjp jds protest

ಬೆಂಗಳೂರು: 2025-26ನೇ ಸಾಲಿನ ಆಯವ್ಯಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಲಿದ್ದಾರೆ. ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ಬಜೆಟ್‌ಗೂ ಮುನ್ನ ಬಿಜೆಪಿ, ಜೆಡಿಎಸ್ ಪ್ರತಿಭಟನೆ ನಡೆಸಲಿವೆ.

ಬೆಳಗ್ಗೆ 9:30 ಕ್ಕೆ ವಿಧಾನಸೌಧ ಗಾಂಧಿ ಪ್ರತಿಮೆ‌ ಎದುರು ಮೈತ್ರಿ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ. ಎಸ್‌ಸಿಎಸ್ಪಿ-ಟಿಎಸ್ಪಿ ಹಣ ಗ್ಯಾರಂಟಿಗಳಿಗೆ ಬಳಸಬಾರದು, ಶಾಸಕರ ಕ್ಷೇತ್ರಗಳಿಗೆ ತಲಾ 150 ಕೋಟಿ ಅನುದಾನ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯ ಸರ್ಕಾರದ ಅಧಿಕ ಸಾಲಗಳ ಮತ್ತೊಂದು ಬಜೆಟ್ ಎಂದು ಆಪಾದಿಸಿ, ಗಾಂಧಿ ಪ್ರತಿಮೆಯಿಂದ ಕೆಂಗಲ್ ಗೇಟ್ ವರೆಗೆ ಪ್ರತಿಭಟನಾ ಮೆರಣಿಗೆ ನಡೆಸಲು ದೋಸ್ತಿಗಳು ಯೋಜಿಸಿದ್ದಾರೆ ಎನ್ನಲಾಗಿದೆ.

ರಾಹುಕಾಲಕ್ಕೂ ಮುನ್ನ ಸಿಎಂ ಬಜೆಟ್‌ ಮಂಡನೆ ಆರಂಭ ಮಾಡಲಿದ್ದಾರೆ. ಕಳೆದ ವರ್ಷವೂ ರಾಹುಕಾಲಕ್ಕೂ ಮುನ್ನ ಬಜೆಟ್ ಮಂಡನೆ ಆರಂಭಿಸಿದ್ದರು. ಬೆಳಗ್ಗೆ 10:30 ಕ್ಕೆ ಆರಂಭವಾಗುವ ರಾಹುಕಾಲ ಮಧ್ಯಾಹ್ನ 12:30 ರ ವರೆಗೂ ಇರಲಿದೆ. ಹೀಗಾಗಿ, ಸಿಎಂ ರಾಹುಕಾಲ ಶುರುವಿಗೂ ಮುನ್ನ ಬೆಳಗ್ಗೆ 10:15 ಕ್ಕೆ ಬಜೆಟ್ ಓದು ಆರಂಭಿಸಲಿದ್ದಾರೆ.

Share This Article