ಬೆಂಗಳೂರು: ದಾಖಲೆಯ 16ನೇ ಬಜೆಟ್‌ನಲ್ಲಿ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಒತ್ತುಕೊಟ್ಟಿರುವ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಸ್ವಯಂ ಉದ್ಯೋಗಕ್ಕೆ ಉತ್ತೇಜನ ನೀಡಿದ್ದಾರೆ.
ಹೌದು. ಹಿಂದುಳಿದ ವರ್ಗಗಳ (Backward class) ನಿರುದ್ಯೋಗಿಗಳಿಗೆ ವಿದ್ಯುತ್ ಚಾಲಿತ ನಾಲ್ಕು ಚಕ್ರದ ವಾಹನ ಖರೀದಿಸಿ, ಆಹಾರ ಕಿಯೋಸ್ಕ್ (ಆಹಾರ ಮಳಿಗೆ) ಆರಂಭಿಸಲು ಗರಿಷ್ಠ 3 ಲಕ್ಷ ರೂ. ಸಹಾಯಧನವನ್ನ ನಿಗಮಗಳ ಮೂಲಕ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Karnataka Budget 2025: ಯಾವ ಇಲಾಖೆಗೆ ಎಷ್ಟು ಹಣ ಹಂಚಿಕೆ?
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ನಿಗಮಗಳಿಗೆ 2025-26ನೇ ಸಾಲಿನಲ್ಲಿ 422 ಕೋಟಿ ರೂ. ಅನುದಾನ ಒದಗಿಸಲಾಗುವುದು ತಿಳಿಸಿದ್ದಾರೆ. ಇದನ್ನೂ ಓದಿ: Karnataka Budget 2025 | ಕೊಡಗು ಜಿಲ್ಲೆಯ ಆಸ್ಪತ್ರೆಗಳ ಅಭಿವೃದ್ಧಿಗೆ ಸಿಎಂ ಆದ್ಯತೆ
ಮುಂದುವರಿದು.. ಸ್ವಂತ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಕಟ್ಟಡ ದುರಸ್ತಿ ಮಾಡಲು 25 ಕೋಟಿ ರೂ. ಒದಗಿಸಲಾಗುವುದು. ಹಿಂದುಳಿದ ವರ್ಗಗಳ ಅಭ್ಯರ್ಥಿಗಳು IAS, IPS, KAS, KSPS ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ನೀಢಲು ಬೆಂಗಳೂರು ನಗರದಲ್ಲಿ ಎರಡು ಸುಸಜ್ಜಿತ ವಸತಿ ನಿಲಯಗಳನ್ನು ಪ್ರಾರಂಬಿಸಲಾಗವುದು ಎಂದು ಘೋಷಿಸಿದ್ದಾರೆ. ಇದನ್ನೂ ಓದಿ: ಮಡಾ ಕೇಸ್| ಸಿಎಂ ಪತ್ನಿ, ಬೈರತಿಗೆ ಸುರೇಶ್‌ಗೆ ಬಿಗ್ ರಿಲೀಫ್ – ಇಡಿ ತನಿಖೆಯೇ ರದ್ದು