-ನುಡಿದಂತೆ ನಡೆಯುವ ನಮ್ಮ ಸರ್ಕಾರದ ಬದ್ಧತೆ ಸಾಬೀತುಪಡಿಸಿದ ಬಜೆಟ್
ಬೀದರ್: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಈ ಸಾಲಿನ ಬಜೆಟ್‌ನಲ್ಲಿ 5 ಸಾವಿರ ಕೋಟಿ ರೂ. ಯೋಜನೆ ರೂಪಿಸಲು ಅವಕಾಶ ನೀಡಲಾಗಿದ್ದು, ಇದು ನುಡಿದಂತೆ ನಡೆಯುವ ನಮ್ಮ ಸರ್ಕಾರದ ಬದ್ಧತೆಯನ್ನು ಸಾಬೀತು ಪಡೆಸುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ (Eshwar Khandre) ಶ್ಲಾಘಿಸಿದ್ದಾರೆ.ಇದನ್ನೂ ಓದಿ: ಚಿಕ್ಕಬಳ್ಳಾಪುರ ಜಿಲ್ಲೆಗೆ ಬಜೆಟ್‌ನಲ್ಲಿ ಸಿಕ್ಕಿದ್ದೇನು? ಮಿಸ್ ಆಗಿದ್ದು ಏನು..?
ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 5,367 ಶಿಕ್ಷಕರ ಹುದ್ದೆಗಳ ಭರ್ತಿಯೂ ಶಿಕ್ಷಕರ ಕೊರತೆಯನ್ನು ನಿವಾರಿಸಲಿದೆ. ತೊಗರಿ ಬೆಳೆಗೆ 450 ರೂ. ಪ್ರೋತ್ಸಾಹ ಧನ ಹೆಚ್ಚಿಸಿದ್ದು, ನಮ್ಮ ಭಾಗದ ರೈತರ ಪಾಲಿಗೆ ಆಶಾಕಿರಣವಾಗಿದೆ ಎಂದರು.
ಕಲ್ಯಾಣ ಕರ್ನಾಟಕವು ಸಂಪೂರ್ಣ ಆರೋಗ್ಯ ಅಭಿವೃದ್ಧಿ ಯೋಜನೆಯಡಿ, ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಆರೋಗ್ಯ ಸೂಚ್ಯಂಕ ವೃದ್ಧಿಸುವ ಉದ್ದೇಶವನ್ನು ಹೊಂದಿದೆ. ಒಟ್ಟು 873 ಕೋಟಿ ರೂ. ವೆಚ್ಚದಲ್ಲಿ ಆರೋಗ್ಯ ವ್ಯವಸ್ಥೆ ಬಲಪಡಿಸುವ ಮತ್ತು ಬೀದರ್ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕ್ಯಾನ್ಸರ್ ಪತ್ತೆ ವಿಭಾಗ ಆರಂಭಿಸುತ್ತಿರುವ ನಿರ್ಧಾರ ಸ್ವಾಗತಾರ್ಹ ಎಂದು ತಿಳಿಸಿದರು.ಇದನ್ನೂ ಓದಿ: ಫ್ಯಾನ್ಸ್ ಜೊತೆ ಬರ್ತ್‌ಡೇ ಆಚರಿಸಿದ ರಾಧಿಕಾ ಪಂಡಿತ್